ರೈತಪರ ನಿಲುವಿನ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ; ಸಚಿವ ಡಾ. ಸುಧಾಕರ್ ಸವಾಲು

ಕೃಷಿ ಮಸೂದೆಗಳಿಂದ ಆಗಿರುವ ತೊಂದರೆ ಏನು? ಎಂದು ಇತ್ತೀಚೆಗೆ ವಿರೋಧಿಸುವವರು ಯಾರೂ ಹೇಳುತ್ತಿಲ್ಲ. ರೈತರು ಅವರ ಬೆಳೆಗಳನ್ನು ತಮಗೆ ಬೇಕಾದ ಕಡೆ ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟರೆ ತಪ್ಪೇನು? ಎಂದು ಸಚಿವ ಡಾ. ಕೆ. ಸುಧಾಕರ್ ಪ್ರಶ್ನಿಸಿದ್ದಾರೆ.

ಡಾ. ಕೆ. ಸುಧಾಕರ್

ಡಾ. ಕೆ. ಸುಧಾಕರ್

  • Share this:
ಚಿಕ್ಕಬಳ್ಳಾಪುರ (ಡಿ. 13): ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಹಿತರಕ್ಷಣೆಗೆ ಕೈಗೊಂಡಿರುವ ತೀರ್ಮಾನಗಳ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಪ್ರತಿಪಕ್ಷಗಳಿಗೆ ಸವಾಲು ಹಾಕಿದ್ದಾರೆ. ತಾಲೂಕು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ  77ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಪ್ರತಿ ಪಕ್ಷಗಳ ವಿರುದ್ದ ವಾಗ್ದಾಳಿ ನಡೆಸಿದರು.

ಕೃಷಿ ಮಸೂದೆಗಳಿಂದ ಆಗಿರುವ ತೊಂದರೆ ಏನು? ಎಂದು ಇತ್ತೀಚೆಗೆ ವಿರೋಧಿಸುವವರು ಯಾರೂ ಹೇಳುತ್ತಿಲ್ಲ. ರೈತರು ಅವರ ಬೆಳೆಗಳನ್ನು ತಮಗೆ ಬೇಕಾದ ಕಡೆ ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟರೆ ತಪ್ಪೇನು? ಕೆಲವರು ರಾಜಕಾರಣ ಮಾಡಲು ಜನಪರ ಧೋರಣೆಯನ್ನು ತಪ್ಪಾಗಿ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಈ ಹೋರಾಟಗಳಿಗೆ ರೈತರು ಬೆಂಬಲ ನೀಡುತ್ತಿಲ್ಲ. ಕೆಲ ಸಂಘಟನೆಗಳು ಆಮಿಷಕ್ಕೆ ಒಳಗಾಗಿ ಪ್ರತಿಭಟನೆ ಮಾಡುತ್ತಿವೆ. ಭೂ ಸುಧಾರಣಾ ಕಾಯ್ದೆಯ ವಿರುದ್ಧದ ಪ್ರತಿಭಟನೆ ಹಿಂದೆ ಕೂಡ ಇದೇ ಉದ್ದೇಶ ಅಡಗಿದೆ ಎಂದು ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಇದನ್ನೂ ಓದಿ: 3ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಮೆಜೆಸ್ಟಿಕ್ ಸುತ್ತಮುತ್ತ ಪೊಲೀಸ್ ಬಂದೋಬಸ್ತ್

ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ರೈತ ವಿರೋಧಿ ಕಾನೂನನ್ನು ಜಾರಿ ಮಾಡುವುದಿಲ್ಲ. ರೈತರ ಆದಾಯ ದ್ವಿಗುಣ ಗೊಳಿಸಲು ಕೆಲ ಕಾನೂನು ತಿದ್ದುಪಡಿ ಮಾಡಲಾಗಿದೆ. ರೈತರು ಪ್ರತಿಪಕ್ಷಗಳ ದಾರಿತಪ್ಪಿಸುವ ಯತ್ನಕ್ಕೆ ಕಿವಿಗೊಡಬಾರದು ಎಂದು ಸಚಿವರು ಮನವಿ ಮಾಡಿದರು.

ರೈತರ ಬೆಳವಣಿಗೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ಕೆಲಸಗಳ ಬಗ್ಗೆ ಬಹಿರಂಗ ಚರ್ಚೆಗೆ ಯಾರು ಬೇಕಾದರೂ ಬರಲಿ. ನಾವು ಚರ್ಚೆಗೆ ಸಿದ್ಧವಿದ್ದೇವೆ. ರಾಜಕಾರಣ ಮಾಡುವ ಸಲುವಾಗಿ ರೈತರನ್ನು ಬಲಿಪಶು ಮಾಡಲು ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಸವಾಲು ಹಾಕಿದರು.
Published by:Sushma Chakre
First published: