ಕುರುಬರನ್ನು ಎಸ್ಟಿಗೆ ಸೇರಿಸುವ ಹೋರಾಟ ಬೆಂಬಲಿಸುವುದು ಸಿದ್ದರಾಮಯ್ಯಗೆ ಬಿಟ್ಟ ವಿಚಾರ; ಕೆಎಸ್ ಈಶ್ವರಪ್ಪ
ಕುರುಬ ಸಮುದಾಯವನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸಬೇಕೆಂದು ರಾಜ್ಯ ಕುರುಬರ ಸಂಘ ಮತ್ತು ಸಮುದಾಯದ ಮಠಾಧಿಪತಿಗಳು ಬಹಳ ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಇದು ಕೇಂದ್ರ ಸರ್ಕಾರದಿಂದ ಆಗಬೇಕಿರುವ ಕೆಲಸ. ಆದುದರಿಂದ ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಲು ದೆಹಲಿಗೆ ಬಂದಿದ್ದೇನೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
news18-kannada Updated:November 24, 2020, 1:42 PM IST

ಸಚಿವ ಕೆ.ಎಸ್. ಈಶ್ವರಪ್ಪ.
- News18 Kannada
- Last Updated: November 24, 2020, 1:42 PM IST
ನವದೆಹಲಿ (ನ. 24): ಕುರುಬ ಸಮುದಾಯವನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸಬೇಕೆಂದು ನಡೆಸಲಾಗುತ್ತಿರುವ ಹೋರಾಟವನ್ನು ಬೆಂಬಲಿಸುವುದು ಅಥವಾ ಬಿಡುವುದು ಸಮುದಾಯದ ಪ್ರಮುಖ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ನವದೆಹಲಿಯಲ್ಲಿ ನ್ಯೂಸ್ 18 ಕನ್ನಡದ ಜೊತೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಕುರುಬ ಸಮುದಾಯವನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸಬೇಕೆಂದು ರಾಜ್ಯ ಕುರುಬರ ಸಂಘ ಮತ್ತು ಸಮುದಾಯದ ಮಠಾಧಿಪತಿಗಳು ಬಹಳ ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಇದು ಕೇಂದ್ರ ಸರ್ಕಾರದಿಂದ ಆಗಬೇಕಿರುವ ಕೆಲಸ. ಆದುದರಿಂದ ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಲು ದೆಹಲಿಗೆ ಬಂದಿದ್ದೇನೆ. ಸಮುದಾಯದ ಸ್ವಾಮೀಜಿಗಳು ಬಂದಿದ್ದಾರೆ. ಕಾಂಗ್ರೆಸ್ ನಾಯಕ ಎಚ್.ಎಂ. ರೇವಣ್ಣ ಮತ್ತು ಜೆಡಿಎಸ್ ನಾಯಕ ಬಂಡೆಪ್ಪ ಕಾಶಂಪೂರ್ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. 'ಇದಕ್ಕೆ ಬೆಂಬಲ ನೀಡುವ ಬಗ್ಗೆ ನೀವು ಸಿದ್ದರಾಮಯ್ಯ ಅವರನ್ನೇ ಕೇಳಿ' ಎಂದರು. ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ಝಳಪಿಸಿದ ತಲ್ವಾರ್; ಆಸ್ಪತ್ರೆ ಎದುರಲ್ಲೇ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸಲಾಗುತ್ತದೆ ಎಂಬ ವಿಷಯ ವ್ಯಾಪಕವಾಗಿ ಚರ್ಚೆ ಆಗುತ್ತಿರುವ ಸಂದರ್ಭದಲ್ಲಿ ಈಶ್ವರಪ್ಪ ದೆಹಲಿಗೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಈ ಬಗ್ಗೆ ಮಾತನಾಡಿದ ಈಶ್ವರಪ್ಪ, ನಾನು ರಾಜಕೀಯ ಕಾರಣಕ್ಕೆ ದೆಹಲಿಗೆ ಬಂದಿಲ್ಲ. ಸಮುದಾಯದ ಕೆಲಸಕ್ಕಾಗಿ ಬಂದಿದ್ದೇನೆ. ಕುರುಬ ಸಮುದಾಯವನ್ನು ಎಸ್ ಟಿಗೆ ಸೇರಿಸುವ ಬಗ್ಗೆ ಚರ್ಚಿಸಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮಂಡಾ ಹಾಗೂ ಇಲಾಖೆಯ ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುತ್ತೇನೆ. ತಮ್ಮ ಸಮುದಾಯವನ್ನು ಎಸ್ ಟಿಗೆ ಸೇರಿಸಲು ಇರುವ ತಾಂತ್ರಿಕ ಅಡೆತಡೆಗಳ ಬಗ್ಗೆ ಚರ್ಚಿಸಲಿದ್ದೇನೆ ಎಂದರು.
ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಸಮಸ್ಯೆ ಇದೆ ಎಂದು ಒಪ್ಪಿಕೊಂಡ ಈಶ್ವರಪ್ಪ, ರಾಜ್ಯದ ಜನ ನಮ್ಮ ಪಕ್ಷಕ್ಕೆ ಬಹುಮತ ನೀಡಿದ್ದರೆ ಈ ಸಮಸ್ಯೆ ಇರುತ್ತಿರಲಿಲ್ಲ. ಈಗ ತಮ್ಮ ಸರ್ಕಾರ ಬರಲು ಕಾರಣರಾದವರಿಗೆ ಮತ್ತು ಪಕ್ಷದಲ್ಲಿದ್ದ ಅರ್ಹರಿಗೆ ಸಚಿವ ಸ್ಥಾನ ಕೊಡಬೇಕಾಗಿದೆ. ಎಲ್ಲರನ್ನೂ ಬ್ಯಾಲೆನ್ಸ್ ಮಾಡುವುದು ಕಷ್ಟವಾಗುತ್ತಿದೆ. ಸಿಎಂ ಮತ್ತು ಹೈಕಮಾಂಡ್ ನಾಯಕರು ಈ ಬಗ್ಗೆ ಸೂಕ್ತ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಿಸುವ ಬಗ್ಗೆ ಮಾತನಾಡಿದ ಈಶ್ವರಪ್ಪ, ಅಂಥ ಯಾವುದೇ ಪ್ರಸ್ತಾಪ ಪಕ್ಷದಲ್ಲಿ ಇಲ್ಲ. ಪಕ್ಷದ ವೇದಿಕೆಯಲ್ಲಿ ಇಂಥ ಚರ್ಚೆಯಾಗಿಲ್ಲ. ಇದು ಮಾಧ್ಯಮದಲ್ಲಿ ಮಾತ್ರ ಚರ್ಚೆಯಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ನವದೆಹಲಿಯಲ್ಲಿ ನ್ಯೂಸ್ 18 ಕನ್ನಡದ ಜೊತೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಕುರುಬ ಸಮುದಾಯವನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸಬೇಕೆಂದು ರಾಜ್ಯ ಕುರುಬರ ಸಂಘ ಮತ್ತು ಸಮುದಾಯದ ಮಠಾಧಿಪತಿಗಳು ಬಹಳ ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಇದು ಕೇಂದ್ರ ಸರ್ಕಾರದಿಂದ ಆಗಬೇಕಿರುವ ಕೆಲಸ. ಆದುದರಿಂದ ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಲು ದೆಹಲಿಗೆ ಬಂದಿದ್ದೇನೆ. ಸಮುದಾಯದ ಸ್ವಾಮೀಜಿಗಳು ಬಂದಿದ್ದಾರೆ. ಕಾಂಗ್ರೆಸ್ ನಾಯಕ ಎಚ್.ಎಂ. ರೇವಣ್ಣ ಮತ್ತು ಜೆಡಿಎಸ್ ನಾಯಕ ಬಂಡೆಪ್ಪ ಕಾಶಂಪೂರ್ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. 'ಇದಕ್ಕೆ ಬೆಂಬಲ ನೀಡುವ ಬಗ್ಗೆ ನೀವು ಸಿದ್ದರಾಮಯ್ಯ ಅವರನ್ನೇ ಕೇಳಿ' ಎಂದರು.