ಎಲ್ಲ ವಿಷಯವನ್ನೂ ಆಕ್ಷೇಪಿಸುವುದು ಸಿದ್ದರಾಮಯ್ಯನವರ ಹವ್ಯಾಸ; ಕೆಎಸ್ ಈಶ್ವರಪ್ಪ ಲೇವಡಿ
ಪ್ರತಿ ಮಾತಿಗೂ ಉತ್ತರ ನೀಡುವುದು, ಎಲ್ಲ ವಿಷಯಕ್ಕೂ ಆಕ್ಷೇಪ ವ್ಯಕ್ತಪಡಿಸುವುದು ಸಿದ್ದರಾಮಯ್ಯನವರ ಹವ್ಯಾಸ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಇರುವುದೇ ಟೀಕೆ ಮಾಡುವುದಕ್ಕೆ ಎಂದು ಕೆಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.
news18-kannada Updated:October 24, 2020, 2:26 PM IST

ಸಚಿವ ಕೆ.ಎಸ್. ಈಶ್ವರಪ್ಪ.
- News18 Kannada
- Last Updated: October 24, 2020, 2:26 PM IST
ದಾವಣಗೆರೆ (ಅ. 24): ಬಿಹಾರದ ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಬಿಹಾರದ ಕೊರೋನಾ ಸೋಂಕಿತರಿಗೆ ಉಚಿತವಾಗಿ ಕೊರೋನಾ ಲಸಿಕೆ ನೀಡುವ ಬಗ್ಗೆ ಬಿಜೆಪಿ ಘೋಷಿಸಿತ್ತು. ಇದಕ್ಕೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿ, ಕರ್ನಾಟಕಕ್ಕೂ ಉಚಿತ ಕೊರೋನಾ ಲಸಿಕೆ ಬಿಡುಗಡೆ ಮಾಡಬೇಕು. ಇದಕ್ಕೆ ಬಿಜೆಪಿ ಸಂಸದರು, ಸಿಎಂ ಯಡಿಯೂರಪ್ಪ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಹೇಳಿದ್ದರು. ಅದಕ್ಕೆ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆಎಸ್ ಈಶ್ವರಪ್ಪ, ಪ್ರತಿ ಮಾತಿಗೂ ಉತ್ತರ ನೀಡುವುದು, ಎಲ್ಲ ವಿಷಯಕ್ಕೂ ಆಕ್ಷೇಪ ವ್ಯಕ್ತಪಡಿಸುವುದು ಸಿದ್ದರಾಮಯ್ಯನವರ ಹವ್ಯಾಸ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಇರುವುದೇ ಟೀಕೆ ಮಾಡುವುದಕ್ಕೆ ಎಂದು ಲೇವಡಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಕೂಡ ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡುವ ಬಗ್ಗೆ ಚಿಂತನೆ ನಡೆಸಲಾಗುವುದು. ಆ ಬಗ್ಗೆ ನಾವು ಬೇರೆಯವರಿಂದ ಹೇಳಿಸಿಕೊಳ್ಳಬೇಕಾಗಿಲ್ಲ. ಪ್ರತಿ ಚುನಾವಣೆಯನ್ನೂ ದಿಕ್ಸೂಚಿ ಎಂದು ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಲೋಕಸಭೆ ಚುನಾವಣೆಯಿಂದ ಈವರೆಗೂ ಅದೇ ಮಾತು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯನವರ ಸೋಲು ದಿಕ್ಸೂಚಿ ಆಗಲಿಲ್ಲವೇ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ. 4 ವಿಧಾನ ಪರಿಷತ್, 2 ವಿಧಾನಸಭಾ ಉಪ ಚುನಾವಣೆಯನ್ನು ಕಾಂಗ್ರೆಸ್ ದಿಕ್ಸೂಚಿ ಎನ್ನುವುದೇ ಆದರೆ ಆ ಸವಾಲನ್ನು ಸ್ವೀಕರಿಸಲು ನಾವು ಸಿದ್ಧರಿದ್ದೇವೆ. ಚುನಾವಣೆಯಲ್ಲಿ ಸೋತರೆ ಆ ಬಗ್ಗೆ ಮಾತನಾಡೋದೆ ಇಲ್ಲ. ಕೇವಲ ಟೀಕೆಗಳಿಂದ ಏನೂ ಪ್ರಯೋಜನವಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತಾಡಲಿ; ನಳಿನ್ ಕುಮಾರ್ ಕಟೀಲ್ ಸವಾಲು
ಗ್ರಾಮ ಪಂಚಾಯತಿ ಚುನಾವಣೆಗೆ ನಾವು ಸಿದ್ಧರಿದ್ದೇವೆ. ಚುನಾವಣೆ ನಡೆದರೆ ಕೊರೋನಾ ಉಲ್ಬಣಿಸುತ್ತಾ ಅನ್ನೋದನ್ನು ಕೋರ್ಟ್, ಚುನಾವಣಾ ಆಯೋಗ ತೀರ್ಮಾನಿಸಬೇಕು. ಕೋರ್ಟ್, ಚುನಾವಣಾ ಆಯೋಗ ಒಪ್ಪಿಗೆ ಕೊಟ್ಟರೆ, ಗ್ರಾಮ ಪಂಚಾಯತಿ ಚುನಾವಣೆಗೆ ನಾವು ಸಿದ್ಧರಾಗಿದ್ದೇವೆ ಎಂದು ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಯಡಿಯೂರಪ್ಪ ಇನ್ನು ಹೆಚ್ಚು ದಿನ ಮುಖ್ಯಮಂತ್ರಿ ಕುರ್ಚಿಯಲ್ಲಿ ಇರುವುದಿಲ್ಲ. ಉತ್ತರ ಕರ್ನಾಟಕದ ನಾಯಕ ಸಿಎಂ ಆಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಸಿಡಿಮಿಡಿಗೊಂಡ ಕೆ.ಎಸ್. ಈಶ್ವರಪ್ಪ, ಯತ್ನಾಳ್ ಹೇಳಿಕೆಯಿಂದ ರಾಜ್ಯದಲ್ಲಿ ಸಂಚಲನ ಮೂಡಿತ್ತು. ಯತ್ನಾಳ್ ಹೇಳಿಕೆಯ ಬಗ್ಗೆ ಏನು ಮಾಡಬೇಕೋ ಅದನ್ನು ಮಾಡಲಾಗಿದೆ. ಅವರ ಬಗ್ಗೆ ಹೆಚ್ಚು ಹೇಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಕರ್ನಾಟಕದಲ್ಲಿ ಕೂಡ ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡುವ ಬಗ್ಗೆ ಚಿಂತನೆ ನಡೆಸಲಾಗುವುದು. ಆ ಬಗ್ಗೆ ನಾವು ಬೇರೆಯವರಿಂದ ಹೇಳಿಸಿಕೊಳ್ಳಬೇಕಾಗಿಲ್ಲ. ಪ್ರತಿ ಚುನಾವಣೆಯನ್ನೂ ದಿಕ್ಸೂಚಿ ಎಂದು ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಲೋಕಸಭೆ ಚುನಾವಣೆಯಿಂದ ಈವರೆಗೂ ಅದೇ ಮಾತು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯನವರ ಸೋಲು ದಿಕ್ಸೂಚಿ ಆಗಲಿಲ್ಲವೇ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.