ಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ (Umesh Katti Death) ಮೃತಪಟ್ಟಿದ್ದಾರೆ. ಇಂದಿಡೀ ದಿನ ಚೆನ್ನಾಗಿಯೇ ಇದ್ದ ಉಮೇಶ್ ಕತ್ತಿ, ಬೆಂಗಳೂರಿನ (Bengaluru) ಡಾಲರ್ಸ್ ಕಾಲನಿಯ (Dollars Colony) ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇಂದು ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಎದೆನೋವು (Pain) ಕಾಣಿಸಿಕೊಂಡಿತ್ತು. ಕೂಡಲೇ ಮನೆಯವರು, ಅವರ ಸಹಾಯಕರು ಅವರನ್ನು ಅಲ್ಲಿಯೇ ಹತ್ತಿರದಲ್ಲಿದ್ದ ಎಂಎಸ್ ರಾಮಯ್ಯ ಆಸ್ಪತ್ರೆಗೆ (MS Ramaiah Hospital) ಕರೆದುಕೊಂಡು ಹೋಗಿದ್ದರು. ಕೂಡಲೇ ಅವರನ್ನು ಪರೀಕ್ಷಿಸಿದ ವೈದ್ಯರು (Doctors), ಸದ್ಯ ತುರ್ತು ನಿಗಾ ಘಟಕಕ್ಕೆ (Emergency Care Unit) ದಾಖಲಿಸಿ, ಚಿಕಿತ್ಸೆ ನೀಡಿದ್ದರು. ತಡರಾತ್ರಿ ಹೃದಯಾಘಾತದಿಂದ ಸಂಭವಿಸಿದ ಹಿನ್ನೆಲೆಯಲ್ಲಿ ಸಚಿವ ಉಮೇಶ್ ಕತ್ತಿ ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಉಮೇಶ್ ಕತ್ತಿ ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಅವರು ಈ ಹಿಂದೆ ಅರಣ್ಯ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು. 9 ಸಲ ಚುನಾವಣೆ ಎದುರಿಸಿ 8 ಬಾರಿ ಜಯ ಗಳಿಸಿದ್ದರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಮಾತನ್ನು ಪದೇ ಪದೇ ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.
ವಿವಿಧ ಪಕ್ಷಗಳಲ್ಲಿ ಸ್ಪರ್ಧಿಸಿ ಗೆಲುವು ಕಂಡಿದ್ದ ಕತ್ತಿ
1989ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಗೆದ್ದಿದ್ದ ಉಮೇಶ್ ಕತ್ತಿ 1994ರ ಚುನಾವಣೆಯಲ್ಲೂ ಗೆಲುವು ಸಾಧಿಸಿದ್ದರು. ಜೊತೆಗೆ 1999ರಲ್ಲಿ ಸಂಯುಕ್ತ ಜನತಾದಳದಿಂದ ಸ್ಪರ್ಧಿಸಿ 4ನೇ ಬಾರಿ ಸಹ ಅವರು ಜಯಗಳಿಸಿದ್ದರು. ಮುಂದೆ 2004 ನೇ ಇಸವಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದ ಅವರು ಮೊದಲ ಮತ್ತು ಕೊನೆಯ ಸೋಲು ಅನುಭವಿಸಿದ್ದರು. ನಂತರ ಮತ್ತೆ ಪಕ್ಷ ಬದಲಿಸಿದ್ದ ಉಮೇಶ್ ಕತ್ತಿ 2008ರಲ್ಲಿ ಜೆಡಿಎಸ್ ಸೇರ್ಪಡೆಗೊಂಡು ಗೆದ್ದು ಬೀಗಿದ್ದರು.
ಆಪರೇಷನ್ ಕಮಲದಲ್ಲಿ ಬಿಜೆಪಿ ಸೇರ್ಪಡೆ
ಮುಂದೆ ಬಿಜೆಪಿ ಸೇರ್ಪಡೆಗೊಂಡಿದ್ದ ಅವರು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 6ನೇ ಬಾರಿಗೆ ಗೆಲುವಿನ ನಗು ಬೀರಿದ್ದರು. ನಂತರ ಸತತವಾಗಿ 2013, 2018ರ ಚುನಾವಣೆಯಲ್ಲಿಯೂ ಹುಕ್ಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು.
ಇದನ್ನೂ ಓದಿ: Umesh Katti: ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ, ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು; ಈಗ ಹೇಗಿದೆ ಆರೋಗ್ಯ?
ತಂದೆಯೂ ಶಾಸಕರಾಗಿದ್ದರು
ಉಮೇಶ್ ಕತ್ತಿ ಅವರ ತಂದೆಯಾದ ವಿಶ್ವನಾಥ್ ಕತ್ತಿ ಅವರೂ ಶಾಸಕರಾಗಿದ್ದರು. ತಂದೆಯವರ ನಿಧನದ ನಂತರ ಉಮೇಶ್ ಕತ್ತಿ ರಾಜಕೀಯ ಸೇರಿದರು. 1996ರಲ್ಲಿ ಮೊದಲ ಬಾರಿಗೆ ಸಕ್ಕರೆ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅವರು 2008ರಲ್ಲಿ ತೋಟಗಾರಿಕೆ ಮತ್ತು ಬಂಧಿಖಾನೆ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು. 2010ರಲ್ಲಿ ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅವರು ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಖ್ಯಾತಿಗೆ ಪಾತ್ರವಾಗಿದ್ದರು.
ಇದನ್ನೂ ಓದಿ: Bengaluru Rains: ಬೆಂಗಳೂರಿನ ಈ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಈ ಹಿಂದೆ ಎರಡು ಬಾರಿ ಹೃದಯಾಘಾತ
ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಎರಡು ಬಾರಿ ಉಮೇಶ್ ಕತ್ತಿ ಅವರಿಗೆ ಹಾರ್ಟ್ ಆಟ್ಯಾಕ್ ಆಗಿತ್ತು. ಈ ಹಿಂದೆ ಹೃದಯಾಘಾತವಾದಾಗ ಅವರ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ಉಮೇಶ್ ಕತ್ತಿ ಅವರಿಗೆ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ