ಬುಧವಾರ ಅನರ್ಹ ಶಾಸಕರ ತೀರ್ಪು ಪ್ರಕಟಿಸಲಿರುವ ಸುಪ್ರೀಂಕೋರ್ಟ್

HR Ramesh | news18-kannada
Updated:November 9, 2019, 5:33 PM IST
ಬುಧವಾರ ಅನರ್ಹ ಶಾಸಕರ ತೀರ್ಪು ಪ್ರಕಟಿಸಲಿರುವ ಸುಪ್ರೀಂಕೋರ್ಟ್
ಅನರ್ಹ ಶಾಸಕರು
  • Share this:
ನವದೆಹಲಿ: ಭಾರೀ ಕುತೂಹಲ ಮೂಡಿಸಿರುವ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ನಡೆಯುತ್ತಿದೆ. ಎರಡು ಕಡೆಯ ವಕೀಲರಿಂದ ವಾದ-ಪ್ರತಿವಾದಗಳು ಆಲಿಸಿರುವ ನ್ಯಾಯಾಲಯ ಬುಧವಾರ ತೀರ್ಪನ್ನು ಪ್ರಕಟಿಸಲಿದೆ. 

ಪ್ರಕರಣದ ವಿಚಾರಣೆ ನ್ಯಾ.ಎನ್​.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ನಡೆಯುತ್ತಿದೆ. ಈಗಾಗಲೇ ಸುದೀರ್ಘ ವಿಚಾರಣೆ ನಡೆಸಿರುವ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ಶುಕ್ರವಾರವೇ ತೀರ್ಪು ಪ್ರಕಟವಾಗಬೇಕಿತ್ತು. ಆದರೆ, ಶುಕ್ರವಾರ ನ್ಯಾ. ಎನ್.ವಿ. ರಮಣ ನೇತೃತ್ವದ ಪೀಠದ ಕಲಾಪ ಪಟ್ಟಿಗೆ ಸೇರಿರಲಿಲ್ಲ. ಬುಧವಾರದ ತೀರ್ಪು ಪ್ರಕಟಿಸುವುದನ್ನು ಕಲಾಪ ಪಟ್ಟಿಯಲ್ಲಿ ಸೇರಿಸಲಾಗಿದೆ.

15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಸೋಮವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಕೋರ್ಟ್ ತೀರ್ಪು ಪ್ರಕಟಿಸುವವರೆಗೂ ಅನರ್ಹರ ಸ್ಥಿತಿ ಅತಂತ್ರವಾಗೇ ಇರಲಿದೆ. ಒಂದು ವೇಳೆ ನ್ಯಾಯಾಲಯ ಸ್ಪೀಕರ್ ಆದೇಶವನ್ನು ರದ್ದುಗೊಳಿಸಿದರೆ ಶಾಸಕರು ಅನರ್ಹತೆಯಿಂದ ಪಾರಾಗಿ, ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಇಲ್ಲವಾದಲ್ಲಿ, ಅವರ ರಾಜಕೀಯ ಬದುಕು ಬಹುತೇಕ ಕೊನೆ ಕಾಣಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿ: ಇಂದು ಸಹ ಪ್ರಕಟವಾಗುವುದಿಲ್ಲಅನರ್ಹ ಶಾಸಕರ ತೀರ್ಪು; ಉಪಚುನಾವಣೆ ಮುಂದೂಡುವಂತೆ ಮತ್ತೊಂದು ಅರ್ಜಿ ಸಲ್ಲಿಕೆ ಸಾಧ್ಯತೆ

First published:November 9, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading