ಕಾರವಾರ: ಚುನಾವಣೆ ಸಮಯದಲ್ಲಿ ರಾಜಕಾರಣಿಗಳು, ಜನಪ್ರತಿನಿಧಿಗಳು ಮತ್ತು ಪಕ್ಷಗಳ ಕಾರ್ಯಕರ್ತರು ಪಕ್ಷಾಂತರ ಮಾಡೋದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಇತ್ತ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ (Karnataka Assembly Election 2023) ಮುಹೂರ್ತ ಫಿಕ್ಸ್ ಆಗಿರುವ ಹೊತ್ತಿನಲ್ಲೇ ಪಕ್ಷದಿಂದ ಪಕ್ಷಕ್ಕೆ ಜಿಗಿಯುವ ಕಾರ್ಯ ನಡೆಯುತ್ತಿದ್ದು, ಇದೀಗ ಬಿಜೆಪಿಗೆ ಇದರ ಶಾಕ್ ತಟ್ಟಿದೆ.
ಆರು ಬಾರಿ ಶಾಸಕರಾಗಿದ್ದ ಕೂಡ್ಲಿಗಿಯ ಬಿಜೆಪಿ ಹಿರಿಯ ಶಾಸಕ ಎನ್‌ವೈ ಗೋಪಾಲಕೃಷ್ಣ (NY Gopalkrishna) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಮಲ ಪಾಳಯಕ್ಕೆ ಬಿಸಿ ಮುಟ್ಟಿಸಿದ್ದಾರೆ. ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿಯಲ್ಲಿರುವ ಕಚೇರಿಗೆ ಬಂದು ರಾಜೀನಾಮೆ ಸಲ್ಲಿಸಿದ ಶಾಸಕ ಎನ್ ವೈ ಗೋಪಾಲಕೃಷ್ಣ ಕೇಸರಿ ಪಕ್ಷಕ್ಕೆ ಗುಡ್‌ಬೈ ಹೇಳುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ: Baburao Chinchansur: ಬಿಜೆಪಿ ಎಂಎಲ್ಸಿ ಬಾಬುರಾವ್ ಚಿಂಚನಸೂರ್ ರಾಜೀನಾಮೆ! ಮತ್ತೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಬಿಜೆಪಿ ಸೇರ್ಪಡೆ ಆಗಿ, ಟಿಕೆಟ್ ಪಡೆದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಎನ್ ವೈ ಗೋಪಾಲಕೃಷ್ಣ, ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಸಲ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ, ಒಂದು ಸಲ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ, ಮತ್ತು 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆ ಆಗಿ ಕೆಲಸ ಮಾಡಿದ್ದರು. ಇದೀಗ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಧರಂ ಸಿಂಗ್ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉಪಸಭಾಪತಿಗಳಾಗಿ, ಸಿದ್ದರಾಮಯ್ಯ ಅವರ ಆಡಳಿತದ ಅವಧಿಯಲ್ಲಿ ನಂಜುಂಡಪ್ಪ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಕಾರ್ಯ ಮಾಡಿದ್ದ ಶಾಸಕ ಎನ್ ವೈ ಗೋಪಾಲಕೃಷ್ಣ, ಬಿಜೆಪಿ ಪಕ್ಷಕ್ಕೆ ಗುಡ್‌ವೈ ಹೇಳಿ ಪುನಃ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: Karnataka Politics: ಇಬ್ಭಾಗವಾದ ಕೆಆರ್ ಪೇಟೆ ಜೆಡಿಎಸ್, ತೆನೆಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾದ ರೇವಣ್ಣನ ಆಪ್ತ!
ರಾಜೀನಾಮೆಗೆ ಯಾವ ಕಾರಣವೂ ಕೊಟ್ಟಿಲ್ಲ
ಇನ್ನು ಕೂಡ್ಲಿಗಿ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಶಾಸಕ ಸ್ಥಾನ ಮತ್ತು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜೀನಾಮೆ ವಿಚಾರ ಮಾಧ್ಯಮದ ಮೂಲಕ ಗೊತ್ತಾಗಿದೆ. ರಾಜೀನಾಮೆ ನೀಡಲು ಮುಂದಾಗಿರುವುದಕ್ಕೆ ಯಾವ ಕಾರಣ ಕೊಟ್ಟಿಲ್ಲ. ಚುನಾವಣೆ ಸಂದರ್ಭದಲ್ಲಿ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗೋದು ಸಹಜ. ನಮ್ಮ ಪಕ್ಷದಿಂದ ಯಾವ ಶಾಸಕರು ಕೂಡ ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ನಮ್ಮ ಪಕ್ಷಕ್ಕೆ ಬರಲು ಬೇರೆಯವರು ಸಿದ್ದರಿದ್ದಾರೆ, ಬೇಕಿದ್ದರೆ ಕಾದುನೋಡಿ ಎಂದು ಹೇಳಿದರು.
ಮುಂದುವರಿದು ಮಾತನಾಡಿದ ನಳಿನ್ ಕುಮಾರ್ ಕಟೀಲ್, ರಾಜ್ಯದ ಮತದಾರರ ಒಲವು ನಮ್ಮ ಬಿಜೆಪಿ ಪಕ್ಷದ ಪರವಿದೆ. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಗೆ ಕ್ಷೇತ್ರಕ್ಕಾಗಿ ಪರದಾಡುವ ಸ್ಥಿತಿ ಇದೆ. ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಾಣುತ್ತೆ ಎಂದು ಹೇಳಿದರು.
ಇದನ್ನೂ ಓದಿ: Ramesh Jarkiholi: ಚುನಾವಣೆಗೆ ನಿಲ್ಲಲ್ಲ ಅಂತ ಗೋಕಾಕ್ ಸಾಹುಕಾರ್ ಬಾಂಬ್! ಅತ್ತ ಬಿಜೆಪಿ ಪ್ರಚಾರ ಸಮಿತಿಯಿಂದ ಸೋಮಣ್ಣಗೆ ಕೊಕ್!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ