• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Karnataka Monsoon 2020: ಮಲೆನಾಡು, ಕರಾವಳಿಯಲ್ಲಿ ಮುಂದುವರೆದ ಮಳೆ; ಪ್ರವಾಹ ಭೀತಿಯಲ್ಲಿ ನದಿ ತೀರದ ಜನರು

Karnataka Monsoon 2020: ಮಲೆನಾಡು, ಕರಾವಳಿಯಲ್ಲಿ ಮುಂದುವರೆದ ಮಳೆ; ಪ್ರವಾಹ ಭೀತಿಯಲ್ಲಿ ನದಿ ತೀರದ ಜನರು

ಕೊಡಗಿನಲ್ಲಿ ತುಂಬಿ ಹರಿಯುತ್ತಿರುವ ನದಿ

ಕೊಡಗಿನಲ್ಲಿ ತುಂಬಿ ಹರಿಯುತ್ತಿರುವ ನದಿ

ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ, ನದಿ ಅಂಚಿನ ಗ್ರಾಮಗಳು ಕಂಗಾಲಾಗಿವೆ. ಈಗಾಗಲೇ ಈ ಭಾಗದಲ್ಲಿರುವ ಜನರನ್ನು ಸ್ಥಳಾಂತರ ಮಾಡಲು ಆಯಾ ಜಿಲ್ಲೆಗಳು ಚಿಂತನೆ ನಡೆಸಿವೆ.

 • Share this:

  ಬೆಂಗಳೂರು (ಜು.10): ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಬಹುತೇಕ ಭಾಗಗಳಲ್ಲಿ ಮಳೆ ಆಗುತ್ತಿದೆ. ಬೆಂಗಳೂರಲ್ಲಿ ಗುರುವಾರ ರಾತ್ರಿ ಆರಂಭವಾದ ಮಳೆ ಶುಕ್ರವಾರ ಮುಂಜಾನೆಯೂ ಮುಂದುವರಿದಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ನಿರಂತರ ಮಳೆ ಆಗುತ್ತಿದ್ದು, ನದಿ ತಟದ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

  ಗುರುವಾರ ತಡರಾತ್ರಿ ಬೆಂಗಳೂರಲ್ಲಿ ಮಳೆ ಸುರಿಯಲು ಆರಂಭವಾಗಿತ್ತು. ರಾತ್ರಿಯಿಡೀ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯತ್ತಲೇ ಇದ್ದು, ಮುಂಜಾನೆಯೂ ಅದು ಮುಂದುವರಿದಿದೆ. ಇಂದು ಸಂಜೆ ಕೂಡ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

  ಮಲೆನಾಡಿನಲ್ಲಿ ಮಳೆ ಜೋರು:

  ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಜೋರಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಹೊಳೆಗಳು ತುಂಬಿ ಹರಿಯುತ್ತಿವೆ.

  ಉಕ್ಕಿ ಹರಿದ ನದಿಗಳು:

  ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ, ನದಿ ಅಂಚಿನ ಗ್ರಾಮಗಳು ಕಂಗಾಲಾಗಿವೆ. ಈಗಾಗಲೇ ಈ ಭಾಗದಲ್ಲಿರುವ ಜನರನ್ನು ಸ್ಥಳಾಂತರ ಮಾಡಲು ಆಯಾ ಜಿಲ್ಲೆಗಳು ಚಿಂತನೆ ನಡೆಸಿವೆ. ಅಘನಾಶಿನಿ, ಗಂಗಾವಳಿ, ನೇತ್ರಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಪರಿಣಾಮ ನದಿ ಅಂಚಿನ ಗ್ರಾಮಗಳು ಮುಳುಗಿವೆ.


  ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಿರ್ಜಿ ಗ್ರಾಮದ ಸಂಪರ್ಕ ಸೇತುವೆ ಮುಳುಗಡೆಯಾಗಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಹಾಲಿಂಗಪುರ, ಯಾದವಾಡ ಮಾರ್ಗ ಸಂಪರ್ಕಿಸುವ ಮಿರ್ಜಿ ಗ್ರಾಮದ ಸೇತುವೆ ಸಂಪರ್ಕ ಕಡಿತವಾದ ಹಿನ್ನೆಲೆಯಲ್ಲಿ 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ  ಬಂದ್ ಆಗಿದೆ‌. ಮುಧೋಳ ತಾಲೂಕಿನ ಘಟಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಇದೀಗ ಪ್ರವಾಹ ಭೀತಿ ಎದುರಾಗಿದೆ.

  Published by:Rajesh Duggumane
  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು