• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • New CM of Karnataka: ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

New CM of Karnataka: ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

ಬಸವರಾಜ್ ಬೊಮ್ಮಾಯಿ

ಬಸವರಾಜ್ ಬೊಮ್ಮಾಯಿ

 ನೂತನ ಸಿಎಂಗೆ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದರು. 

 • Share this:

  ಬೆಂಗಳೂರು(ಜು.28): ಕರ್ನಾಟಕದ ನೂತನ ಮುಖ್ಯಮಂತ್ರಿಗಾಗಿ ಇಂದು ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯದ 30ನೇ ಸಿಎಂ ಆಗಿ ಬೊಮ್ಮಾಯಿ ಅವರು ರಾಜಭವನದ ಗಾಜಿನ ಮನೆಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು.  ನೂತನ ಸಿಎಂಗೆ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದರು. 


  ವೇದಿಕೆ ಮುಂಭಾಗದಲ್ಲೇ ಬಿಎಸ್​ ಯಡಿಯೂರಪ್ಪ ಕುಳಿತಿದ್ದರು. ಕಾರ್ಯಕ್ರಮದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅರುಣ್ ಸಿಂಗ್, ನಳೀನ್ ಕುಮಾರ್ ಕಟೀಲ್, ಕಿಶನ್ ರೆಡ್ಡಿ, ಧರ್ಮೇಂದ್ರ ಪ್ರಧಾನ್, ವಿಜಯೇಂದ್ರ, ಈಶ್ವರಪ್ಪ, ಮುರುಗೇಶ್ ನಿರಾಣಿ ಮತ್ತಿತರರು ಭಾಗಿಯಾಗಿದ್ದರು.  ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಬೊಮ್ಮಾಯಿ ಅವರು ಬಿಎಸ್​ವೈ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.


  ಅರವಿಂದ್ ಬೆಲ್ಲದ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಪದ ಗ್ರಹಣ ಸಮಾರಂಭದಿಂದ ದೂರ ಉಳಿದಿದ್ದಾರೆ.


  ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಮಾಡಿದ ಬಳಿಕ ಬಸವರಾಜ ಬೊಮ್ಮಾಯಿ, 11:30ಕ್ಕೆ ವಿಧಾನಸೌಧಕ್ಕೆ ಬರಲಿದ್ದಾರೆ. 11:45ಕ್ಕೆ ಸಿಎಂ ಕಚೇರಿಯಲ್ಲಿ ಪೂಜಾಕಾರ್ಯ ನಡೆಯಲಿದೆ. 12:15ಕ್ಕೆ‌ ಕಾನ್ಫರೆನ್ಸ್ ಹಾಲ್ ನಲ್ಲಿ ಅಧಿಕಾಗಳ ಜೊತೆ ಸಭೆ ನಡೆಸಲಿದ್ದಾರೆ. 1 ಗಂಟೆಗೆ ವಿಧಾನ ಸೌಧದಲ್ಲೇ ಪತ್ರಿಕಾಗೋಷ್ಠಿ ಮಾಡಲಿದ್ದಾರೆ.


  ಇದನ್ನೂ ಓದಿ:Barabanki Accident: ಡಬಲ್​ ಡೆಕ್ಕರ್​​​ ಬಸ್ಸಿಗೆ ಡಿಕ್ಕಿ ಹೊಡೆದ ಟ್ರಕ್; 18 ಮಂದಿ ದಾರುಣ ಸಾವು


  ಇಂದು ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ, ರಾಜಭವನದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿ ಭದ್ರತೆ ವಹಿಸಲಾಗಿದೆ. ಆರು ಡಿಸಿಪಿ, ಎಸಿಪಿಗಳು, ಇನ್ಸ್ಪೆಕ್ಟರ್ ಗಳು ಸೇರಿ 500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಪಾಸ್ ಇರೋರಿಗೆ ಮಾತ್ರ ರಾಜ ಭವನದ ಒಳಗೆ ಪ್ರವೇಶ ನೀಡಲಾಗುತ್ತದೆ. ರಾಜ ಭವನ ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.


  ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ಹಿನ್ನೆಲೆ, ಬೊಮ್ಮಾಯಿಗೆ ಹೈಕಮಾಂಡ್ ನಾಯಕರು ಶುಭಾಶಯ ಕೋರಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಸೇರಿದಂತೆ ಹಲವು ನಾಯಕರು ದೂರವಾಣಿ ಮೂಲಕ ಶುಭ ಹಾರೈಸಿದ್ದಾರೆ.


  ಜನತಾದಳದ ಮೂಲಕ ರಾಜಕೀಯಕ್ಕೆ ಬಂದ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಯುವ ಜನತಾದಳ ಬೆಳೆಯುವಲ್ಲಿ ಸಾಕಷ್ಟು ಕೊಡುಗೆ ನೀಡಿದವರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಬೆಳೆಸಿದವರು. ಆದರೆ ರಾಜಕೀಯ ನಿಂತ ನೀರಲ್ಲ ಎಂಬುದನ್ನು ಅರಿತ ಇವರು, 2008 ರಲ್ಲಿ ಬಿಜೆಪಿ ಪಾಳಯಕ್ಕೆ ಹಾರಿ ಯಡಿಯೂರಪ್ಪ ಅವರ ಗುಂಪಿನಲ್ಲಿ ಗುರುತಿಸಿಕೊಂಡರು. ಬಳಿಕ ನೀರಾವರಿ ಸಚಿವರಾಗಿ ಎರಡನೇ ಅವಧಿಗೆ ಗೃಹ ಸಚಿವರಾಗಿ ಈಗ ಮುಖ್ಯಮಂತ್ರಿಯಾಗಿದ್ದಾರೆ.


  ಇದನ್ನೂ ಓದಿ:New CM of Karnataka: ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ


  ಬಿಎಸ್​ ಯಡಿಯೂರಪ್ಪನವರ ರಾಜೀನಾಮೆ ಬಳಿಕ ನಿನ್ನೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿತ್ತು. ಅಲ್ಲಿ ಬಸವರಾಜ್ ಬೊಮ್ಮಾಯಿ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಯಿತು.

  Published by:Latha CG
  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು