ದೆಹಲಿ: ಕರ್ನಾಟಕದ ನೂತನ ಸಿಎಂ (new CM of Karnataka) ಆಯ್ಕೆ ಕುರಿತಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಹೈವೋಲ್ಟೇಜ್ ಮೀಟಿಂಗ್ (high voltage meeting) ನಡೆಯುತ್ತಿದೆ. ಕೆಲವೇ ಕ್ಷಣಗಳಲ್ಲಿ ನೂತನ ಸಿಎಂ ಹೆಸರು ಘೋಷಣೆಯಾಗಲಿದೆ. ಇಂದು ಬೆಳಗ್ಗೆಯಿಂದಲೇ ದೆಹಲಿಯಲ್ಲಿ ಮೀಟಿಂಗ್‌ಗಳ ಮೇಲೆ ಮೀಟಿಂಗ್ ನಡೆಯುತ್ತಿದೆ. ಈಗಾಗಲೇ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಇಬ್ಬರನ್ನೂ ದೆಹಲಿಗೆ ಕರೆಸಿಕೊಂಡಿರುವ ಹೈಕಮಾಂಡ್ ಇಬ್ಬರ ಜೊತೆಯೂ ಪ್ರತ್ಯೇಕವಾಗಿ ಸಭೆ ನಡೆಸಿದೆ. ಇದೀಗ ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ನಿವಾಸಕ್ಕೆ ಬರುವಂತೆ ಸಿದ್ದರಾಮಯ್ಯರಿಗೆ ಸೂಚನೆ ನೀಡಲಾಗಿದೆ. ಸಿದ್ದರಾಮಯ್ಯರ ಜೊತೆ ಚರ್ಚಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕರೆದು ಖರ್ಗೆ ಮಾತನಾಡಿಸಲಿದ್ದಾರೆ. ಇದಾದ ಬಳಿಕ ಮತ್ತೆ ಕಾಂಗ್ರೆಸ್ ವರಿಷ್ಠರ ಜೊತೆ ಮಾತನಾಡಿ ಕರ್ನಾಟಕದ ನೂತನ ಸಿಎಂ ಹೆಸರು ಘೋಷಿಸೋ ಸಾಧ್ಯತೆ ಇದೆ.
ಸೋನಿಯಾ ಗಾಂಧಿ ನಿವಾಸದಲ್ಲಿ ಸಭೆ
ಕರ್ನಾಟಕ ಸಿಎಂ ಆಯ್ಕೆ ವಿಚಾರಕ್ಕೆ ಕುರಿತಂತೆ ಇದೀಗ ಸೋನಿಯಾ ಗಾಂಧಿ ನಿವಾಸದಲ್ಲಿ ಮಹತ್ವದ ಮೀಟಿಂಗ್ ಇದ್ಯಂತೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಆಯ್ಕೆ ಬಗ್ಗೆ ಚರ್ಚಿಸಲಾಗುತ್ತದೆ. ಇಂದು ರಾತ್ರಿ ಒಳಗೆ ಕರ್ನಾಟಕ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.
ಇಂದು ಬೆಳಗ್ಗೆ ಡಿಕೆಶಿ ದಿಲ್ಲಿಗೆ ತೆರಳ್ತಿದ್ದಂತೆ ರಾಜಕೀಯ ಗರಿಗೆದರಿದೆ. ಇಂದು ಸಂಜೆ 6 ಗಂಟೆಗೆ ಬರುವಂತೆ ಸಿದ್ದರಾಮಯ್ಯಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬುಲಾವ್ ಮಾಡಿದ್ದಾರೆ. ಸಿಎಂ ಹುದ್ದೆ ವಿಚಾರ ಸಿದ್ದು ಜೊತೆ ಸಮಾಲೋಚನೆ ನಡೆಯಲಿದೆ.
ಇದನ್ನೂ ಓದಿ: Congress ಗೆಲುವಿಗೆ ಕಾರಣ ಸಿದ್ದು-ಡಿಕೆಶಿಯೂ ಅಲ್ಲ, ರಾಹುಲ್-ಖರ್ಗೆಯೂ ಅಲ್ಲ! ರಣತಂತ್ರದ ಹಿಂದಿರೋದು ಇವರೇ!
ನಾಳೆ ಬೆಂಗಳೂರಿನಲ್ಲಿ ಶಾಸಕಾಂಗ ಸಭೆ
ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸರ್ಕಾರ ರಚನೆ ಹಕ್ಕು ಮಂಡಿಸಲಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಮಂಡನೆ ಮಾಡಲಿದ್ದಾರೆ. ಅದಕ್ಕೂ ಮುನ್ನ ಶಾಸಕರ ಸಹಿ ಪಡೆದು, ಶಾಸಕಾಂಗ ಪಕ್ಷದ ನಾಯಕರಿಂದ ಹಕ್ಕು ಮಂಡನೆ ಮಾಡಲಿದ್ದಾರೆ.
ಸದ್ಯ ಜಿಲ್ಲಾವಾರು ಸಂಭಾವ್ಯ ಸಚಿವರ ಪಟ್ಟಿಯೂ ದೆಹಲಿ ತಲುಪಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ಹಿರಿಯ ನಾಯಕರಾದ ವೇಣುಗೋಪಾಲ್, ಸುರ್ಜೇವಾಲ 27 ಜಿಲ್ಲೆಗಳಿಂದ ಸಂಭಾವ್ಯರ ಪಟ್ಟಿ ತಗೆದುಕೊಂಡು ಹೋಗಿದ್ದು, ಇದರಲ್ಲಿ ಒಟ್ಟು ಒಟ್ಟು 49 ಮಂದಿ ಸಂಭಾವ್ಯ ಸಚಿವರ ಹೆಸರು ಇದೆ ಎನ್ನಲಾಗಿದೆ.
ಇದನ್ನೂ ಓದಿ: Opposition Party Leader: ಯಡಿಯೂರಪ್ಪ ಇಲ್ಲ, ಈಶ್ವರಪ್ಪನೂ ಇಲ್ಲ! ಈ ಬಾರಿ ಸರ್ಕಾರಕ್ಕೆ ಮೂಗುದಾರ ಹಾಕುವ ವಿಪಕ್ಷ ನಾಯಕ ಯಾರು?
ಹೈಕಮಾಂಡ್ಗೆ ‘ಡಿಕೆ’ ಕಂಡೀಷನ್ಸ್
ಸಿಎಂ ಸ್ಥಾನ ನೀಡಿದರೆ ಅಥವಾ ನೀಡದಿದ್ರೆ ತಮ್ಮ ಕೆಲವು ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು ಎಂದು ಒಂದಿಷ್ಟು ಷರತ್ತುಗಳನ್ನು ಹೈಕಮಾಂಡ್ ಮುಂದೆ ಇರಿಸಿದ್ದಾರಂತೆ. ಹಲವು ಹಿರಿಯ ಕಾಂಗ್ರೆಸ್ ಶಾಸಕರು ಸಿಎಂ ಆಯ್ಕೆಯಲ್ಲಿ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ