ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ತಾಯಿ ಸಾವು, ಮಗನ ಸ್ಥಿತಿ ಗಂಭೀರ
Accident news: ತಾಯಿ ಮತ್ತು ಮಗ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಲಾರಿ ಮುಂಬಾಗದಿಂದ ಡಿಕ್ಕಿಯಾಗಿದೆ. ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮಗನ ಪರಿಸ್ಥಿತಿ ಗಂಭೀರವಾಗಿದೆ. ಮೃತಳು ದೇವರಗುಡ್ಡ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಹಾವೇರಿ (ಮೇ 05); ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹುಲ್ಲತಿ ಕ್ರಾಸ್ ಬಳಿ ನಡೆದಿದೆ. ಮೃತ ಮಹಿಳೆಯನ್ನು ಗಂಗವ್ವ ಚಿಕ್ಕಪ್ಪ ಸಂಸಿ(42) ಎಂದು ಗುರುತಿಸಲಾಗಿದೆ. ತಾಯಿ ಮತ್ತು ಮಗ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಲಾರಿ ಮುಂಬಾಗದಿಂದ ಡಿಕ್ಕಿಯಾಗಿದೆ. ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮಗನ ಪರಿಸ್ಥಿತಿ ಗಂಭೀರವಾಗಿದೆ. ಮೃತಳು ದೇವರಗುಡ್ಡ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಕಾರ್ಯ ನಿಮಿತ್ತ ದೇವರಗುಡ್ಡದಿಂದ ರಾಣೇಬೆನ್ನೂರಿಗೆ ತೆರಳುವಾಗ ದುರ್ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಣೇಬೆನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.