HOME » NEWS » State » KARNATAKA OPPOSITION LEADER SIDDARAMAIAH HOSPITALIZED FOR URINARY INFECTION SNVS

Siddaramaiah Health - ಸಿದ್ದರಾಮಯ್ಯಗೆ ಅನಾರೋಗ್ಯ, ಮಣಿಪಾಲ ಆಸ್ಪತ್ರೆಗೆ ದಾಖಲು

15 ದಿನಗಳ ಹಿಂದೆ ಸಿದ್ದರಾಮಯ್ಯ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ ಡಾ. ಯತೀಂದ್ರ ಅವರ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

news18-kannada
Updated:August 4, 2020, 8:10 AM IST
Siddaramaiah Health - ಸಿದ್ದರಾಮಯ್ಯಗೆ ಅನಾರೋಗ್ಯ, ಮಣಿಪಾಲ ಆಸ್ಪತ್ರೆಗೆ ದಾಖಲು
ಸಿದ್ದರಾಮಯ್ಯ
  • Share this:
ಬೆಂಗಳೂರು(ಆ. 04): ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರಕೋಶ ಸೋಂಕಿನ ಹಿನ್ನೆಲೆಯಲ್ಲಿ ರಾತ್ರಿ 3:30ರ ಸುಮಾರಿಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. 15 ದಿನಗಳ ಹಿಂದೆ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ ಡಾ. ಯತೀಂದ್ರ ಅವರ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಗೆ ದಾಖಲಾದ ನಂತರ ಸಿದ್ದರಾಮಯ್ಯ ಅವರಿಗೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಇದನ್ನೂ ಓದಿ: ಕೊರೋನಾ ಸೋಂಕಿತ ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ; ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದ ಮಣಿಪಾಲ್ ಆಸ್ಪತ್ರೆ

ಇನ್ನು, ಇದೇ ಮಣಿಪಾಲ ಆಸ್ಪತ್ರೆಯಲ್ಲಿ ಯಡಿಯೂರಪ್ಪ ಕೂಡ ನಿನ್ನೆ ದಾಖಲಾಗಿದ್ದರು. ಕೋವಿಡ್​ನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಿಎಸ್​ವೈ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಬುಲೆಟಿನ್​ನಲ್ಲಿ ಮಾಹಿತಿ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದೆ ಹೃದಯ ಸಮಸ್ಯೆಯೂ ಇದೆ. ಹಿಂದೆ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಮಾಜಿ ಸಿಎಂ ಮತ್ತು ಹಾಲಿ ಸಿಎಂ ಇಬ್ಬರೂ ಮಣಿಪಾಲ ಆಸ್ಪತ್ರೆಯ ಐದನೇ ಮಹಡಿಯ ವಿಶೇಷ ವಾರ್ಡ್​ಗಳಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಯ ಐದನೇ ಮಹಡಿಯ ಎಡಭಾಗದಲ್ಲಿ ಸಿದ್ದರಾಮಯ್ಯ ಇದ್ದರೆ, ಬಲಭಾಗದಲ್ಲಿ ಯಡಿಯೂರಪ್ಪ ಅಡ್ಮಿಟ್ ಆಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದೆ ಹೃದಯ ಸಮಸ್ಯೆಯೂ ಇದೆ. ಹಿಂದೆ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು.
Published by: Vijayasarthy SN
First published: August 4, 2020, 7:03 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories