ದೇಶದಲ್ಲಿ ನ್ಯಾಯ ಒದಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ (Karnataka State Police) ಇಲಾಖೆ ಮೊದಲ ಸ್ಥಾನದಲ್ಲಿದೆ ಎಂದು ಇತ್ತೀಚಿನ 'ಇಂಡಿಯಾ ಜಸ್ಟೀಸ್ ರಿಪೋರ್ಟ್' (India Justice Report) ಪ್ರಕಟಿಸಿದೆ. ಎರಡು ಮತ್ತು ಮೂರನೇ ಸ್ಥಾನಗಳಲ್ಲಿ ತಲಾ 6.11 ಅಂಕಗಳೊಂದಿಗೆ ದಕ್ಷಿಣದ ರಾಜ್ಯಗಳಾದ ತಮಿಳುನಾಡು (Tamil Nadu) ಮತ್ತು ತೆಲಂಗಾಣ ರಾಜ್ಯ ಸ್ಥಾನ ಪಡೆದಿವೆ.
ನ್ಯಾಯ ಒದಗಿಸುವಲ್ಲಿ ಕರ್ನಾಟಕ ಪೊಲೀಸ್ ನಂಬರ್ 1
ಭಾರತದ ಯಾವುದೇ ಇತರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕರ್ನಾಟಕವು 10 ಅಂಕದಲ್ಲಿ 6.38 ರೇಟಿಂಗ್ ಪಡೆದುಕೊಂಡಿದೆ. ನಂತರದ ಎರಡು ಮತ್ತು ಮೂರನೇ ಸ್ಥಾನಗಳಲ್ಲಿ ತಲಾ 6.11 ರೇಟಿಂಗ್ ಪಡೆದುಕೊಂಡಿರುವ ದಕ್ಷಿಣದ ರಾಜ್ಯಗಳಾದ ತಮಿಳುನಾಡು ಮತ್ತು ತೆಲಂಗಾಣಗಳಿವೆ.
ಈ ಪಟ್ಟಿಯಲ್ಲಿ ದಕ್ಷಿಣ ರಾಜ್ಯಗಳ ಪ್ರಾಬಲ್ಯ ಮುಂದುವರಿದಿವೆ. ಪೊಲೀಸ್ ಅಧಿಕಾರಿಗಳು ಮತ್ತು ಕಾನ್ಸ್ಟೇಬಲ್ಗಳಲ್ಲಿ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡಗಳು (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಕೋಟಾಗಳನ್ನು ಪೂರೈಸಿದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಭಾಜನವಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಮನೆಗೆ ಹಾವು ಬಂದ್ರೆ ಈ ನಂಬರ್ಗೆ ಕಾಲ್ ಮಾಡಿ
ಇತರೆ ಯಾವುದೇ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು ಈ ಎಲ್ಲಾ ಮೂರು ಕೋಟಾಗಳ ಹುದ್ದೆ ಭರ್ತಿ ಮಾಡುವುದು ಸಾಧ್ಯವಾಗಿಲ್ಲ ಎಂಬುದನ್ನು ವರದಿಯಲ್ಲಿ ತಿಳಿಸಲಾಗಿದೆ.
ಠಾಣೆಯಲ್ಲಿ ಸಿಸಿಟಿವಿ ಅಳವಡಿಕೆ
ಕರ್ನಾಟಕವು ಸುಮಾರು 4,176 ಸಿಸಿಟಿವಿ ಕ್ಯಾಮೆರಾಗಳನ್ನು ಹೊಂದಿದ್ದು, 1,055 ಪೊಲೀಸ್ ಠಾಣೆಗಳಲ್ಲಿ 1,049 ಪೊಲೀಸ್ ಠಾಣೆಗಳು ಕನಿಷ್ಠ ಒಂದು ಸಿಸಿಟಿವಿ ಕ್ಯಾಮೆರಾವನ್ನು ಹೊಂದಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
“ಹೆಚ್ಚಿನ ವೆಬ್‌ಸೈಟ್‌ಗಳು ಇಂಗ್ಲಿಷ್‌ನಲ್ಲಿ ಮಾತ್ರ ಲಭ್ಯವಿದ್ದವು ಮತ್ತು ರಾಜ್ಯ ಭಾಷೆಗಳಲ್ಲಿ ಇರಲಿಲ್ಲ. ಉದಾಹರಣೆಗೆ, ಮಧ್ಯಪ್ರದೇಶದ ವೆಬ್‌ಸೈಟ್ ಇಂಗ್ಲಿಷ್‌ನಲ್ಲಿ ಮಾತ್ರ ಲಭ್ಯವಿದ್ದರೆ, ಕರ್ನಾಟಕ, ಮಹಾರಾಷ್ಟ್ರ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಕ್ರಮವಾಗಿ ಕನ್ನಡ, ಮರಾಠಿ ಮತ್ತು ಹಿಂದಿಯಲ್ಲಿ ಮಾಹಿತಿ ಲಭ್ಯವಿದೆ ಎಂದು ವರದಿ ಪ್ರಕಟಿಸಿದೆ.
18 ರಾಜ್ಯಗಳನ್ನು ಹಿಂದಿಕ್ಕಿದ ಕರ್ನಾಟಕ
2020 ರಲ್ಲಿ ಇಂಡಿಯಾ ಜಸ್ಟೀಸ್ ರಿಪೋರ್ಟ್ ಬಿಡುಗಡೆ ಮಾಡಿದ ಪ್ರಕಾರ ಕರ್ನಾಟಕವು ಹದಿನಾಲ್ಕನೇ ಸ್ಥಾನದಲ್ಲಿದ್ದರೆ, 2022 ರಲ್ಲಿ 10 ರಲ್ಲಿ 6.38 ಅಂಕಗಳನ್ನು ಗಳಿಸುವ ಮೂಲಕ ಹದಿನೆಂಟು ರಾಜ್ಯಗಳನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿದೆ.
ಕರ್ನಾಟಕವು ಮಹಾರಾಷ್ಟ್ರಕ್ಕಿಂತ 183 ಹೆಚ್ಚು ಪೊಲೀಸ್ ಠಾಣೆಗಳನ್ನು ಹೊಂದಿದೆ. ಈ ವರ್ಷದ ವರದಿಯಲ್ಲಿ ಕರ್ನಾಟಕದ ರಾಜ್ಯ ಪೊಲೀಸ್ ಪಡೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. 2022-2023 ರ ಆರ್ಥಿಕ ವರ್ಷದಲ್ಲಿ ಕರ್ನಾಟಕ ಸರ್ಕಾರವು ಪೊಲೀಸ್ ವ್ಯವಸ್ಥೆಗೆ ಸುಮಾರು 8,007 ಕೋಟಿಗಳನ್ನು ಖರ್ಚು ಮಾಡಿದೆ ಎಂದು ವರದಿಯಲ್ಲಿ ಪ್ರಕಟಿಸಲಾಗಿದೆ.
ಏನಂದ್ರು ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿ?
ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಈ ವರದಿಗೆ ಪ್ರತಿಕ್ರಿಯಿಸಿ, ಪೊಲೀಸ್ ಪಡೆ ನಿರಂತರವಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ ಎಂದು ಭರವಸೆ ನೀಡಿದ್ದಾರೆ.
“ನಾವು ನಿರಂತರವಾಗಿ ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯಲ್ಲಿ ನಮ್ಮ ಸೇವಾ ಪೂರೈಕೆ ಸುಧಾರಿಸಲು ಪ್ರಯತ್ನಿಸುತ್ತಿರುವಾಗ, ಭಾರತದ ಎಲ್ಲ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯ ಪೊಲೀಸ್ ನಂಬರ್ 1 ಆಗಿರುವುದನ್ನು ನೋಡಲು ಸಂತೋಷವಾಗುತ್ತದೆ. ಅಗ್ರಸ್ಥಾನದಲ್ಲಿ ಉಳಿಯಲು ಕಷ್ಟಪಡಬೇಕಾಗುತ್ತದೆ. ನಮ್ಮಬೆಂಗಳೂರು ಅತ್ಯುತ್ತಮವಾದುದಕ್ಕೆ ಅರ್ಹವಾಗಿದೆ ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ. ನಾವು ನಮ್ಮ ಕೈಲಾದದ್ದನ್ನು ಮಾಡುತ್ತೇವೆ, ಅತ್ಯುತ್ತಮವೆನಿಸಲು ಸಾಧ್ಯವಾಗುವುದನ್ನು ಮಾಡುತ್ತೇವೆ! ಎಂದು ಅವರು ಟ್ವೀಟ್ ಮಾಡಿದ್ದಾರೆ.
ತಮಿಳುನಾಡು, ತೆಲಂಗಾಣ, ಗುಜರಾತ್, ಆಂಧ್ರಪ್ರದೇಶ, ಕೇರಳ, ಜರ್ಖಂಡ, ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ ನಂತರದ ರಾಜ್ಯಗಳಿಗೆ ಹೋಲಿಸಿದರೆ ದೇಶದ ಜಿಡಿಪಿಯ ಅತ್ಯಧಿಕ ಪಾಲನ್ನು ನಮ್ಮ ರಾಜ್ಯವು ಹೊಂದಿದೆ.
ಪ್ರತಾಪ್ ರೆಡ್ಡಿ ಅವರ ಟ್ವೀಟ್ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು. ಹೆಚ್ಚಿನ ಲೈಕ್ ಹಾಗೂ ಕಾಮೆಂಟ್‌ಗಳನ್ನು ಪಡೆದುಕೊಂಡಿದೆ. ನಮ್ಮ ಪೋಲೀಸರ ಕೆಲಸವನ್ನು ನಾವು ಪ್ರಶಂಸಿಸಬೇಕು ಮತ್ತು ನಗರವನ್ನು ಸ್ವಚ್ಛಗೊಳಿಸಲು, ನಮ್ಮ ಬೆಂಬಲವನ್ನು ಪೋಲೀಸದಿಗೆ ನೀಡಬೇಕು ಎಂದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ