• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Karnataka Election 2023: ಗಡಿ ಜಿಲ್ಲೆಗಳಲ್ಲಿ ಖಾಕಿ ಹೈ ಅಲರ್ಟ್‌; ಹೊರ ರಾಜ್ಯಗಳಿಂದ ಬರುವ ವಾಹನಗಳ ತೀವ್ರ ತಪಾಸಣೆ

Karnataka Election 2023: ಗಡಿ ಜಿಲ್ಲೆಗಳಲ್ಲಿ ಖಾಕಿ ಹೈ ಅಲರ್ಟ್‌; ಹೊರ ರಾಜ್ಯಗಳಿಂದ ಬರುವ ವಾಹನಗಳ ತೀವ್ರ ತಪಾಸಣೆ

ಚುನಾವಣಾ ಭದ್ರತೆ

ಚುನಾವಣಾ ಭದ್ರತೆ

ಬೆಳಗಾವಿ ಮಾತ್ರವಲ್ಲದೇ ಕರ್ನಾಟಕ ಕೇರಳ ರಾಜ್ಯದ ಗಡಿಭಾಗಗಳಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಹಂಚಿಕೊಂಡಿರುವ ಕೇರಳದ ಗಡಿಭಾಗದಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.

 • Share this:

ಬೆಳಗಾವಿ: ರಾಜ್ಯದಲ್ಲಿನ ವಿಧಾನಸಭಾ ಚುನಾವಣೆಗೆ (Karnataka Assembly Election) ಕೌಂಟ್‌ಡೌನ್ ಶುರುವಾಗಿದೆ. ರಾತ್ರಿ ಕಳೆದು ಬೆಳಗಾಗೋದ್ರೊಳಗೆ ಪ್ರಜಾಪ್ರಭುತ್ವದ ಹಬ್ಬ ಕರ್ನಾಟಕದ ಮೂಲೆ ಮೂಲೆಯಲ್ಲಿ ಮೇಳೈಸಲಿದೆ. ಈಗಾಗಲೇ ಚುನಾವಣೆಯನ್ನು ಎದುರಿಸಲು ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ.


ಇತ್ತ ವಿವಿಧ ರಾಜ್ಯಗಳ ಜೊತೆ ಗಡಿ (Border District) ಹಂಚಿಕೊಂಡಿರುವ ಜಿಲ್ಲೆಗಳಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಗಡಿ ಜಿಲ್ಲೆಗಳಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಕಣ್ಗಾವಲು ಇಟ್ಟಿದ್ದಾರೆ. ಕರ್ನಾಟಕ - ಮಹಾರಾಷ್ಟ್ರ - ಗೋವಾ ಗಡಿಭಾಗದಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದು ಈಗಾಗಲೇ ಪೊಲೀಸರ ತಂಡ ಬೆಳಗಾವಿ ಜಿಲ್ಲೆಯಲ್ಲಿ ಕ್ಷಣಕ್ಷಣಕ್ಕೂ ಅಲರ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದೆ.


ಇದನ್ನೂ ಓದಿ: BS Yediyurappa: ನರೇಂದ್ರ ಮೋದಿಯಂತಹ ಪ್ರಧಾನಿ ಸಿಕ್ಕಿರುವುದು ನಮ್ಮೆಲ್ಲರ ಸೌಭಾಗ್ಯ: ಬಿಎಸ್‌ ಯಡಿಯೂರಪ್ಪ


ಖಾಕಿ ಕಟ್ಟೆಚ್ಚರ


ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದ ಜೊತೆ ಗಡಿ ಹಂಚಿಕೊಂಡ ಬೆಳಗಾವಿ ಜಿಲ್ಲೆಯಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದು, ಬೆಳಗಾವಿ ಜಿಲ್ಲೆಯ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಮತ್ತು ಗೋವಾದಿಂದ ಆಗಮಿಸುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ 58 ಚೆಕ್‌ಪೋಸ್ಟ್‌ಗಳನ್ನು ಸ್ಥಾಪನೆ ಮಾಡಲಾಗಿದೆ.


ಇನ್ನು 24 ಅಂತರ್‌ರಾಜ್ಯ ಚೆಕ್‌ಪೋಸ್ಟ್, 22 ಅಂತರ್‌ಜಿಲ್ಲಾ ಚೆಕ್‌ಪೋಸ್ಟ್, ಮತ್ತು 12 ಚೆಕ್‌ಪೋಸ್ಟ್‌ಗಳನ್ನು ಬೆಳಗಾವಿ ಜಿಲ್ಲೆಯೊಳಗೆ ಸ್ಥಾಪನೆ ಮಾಡಲಾಗಿದ್ದು, ಕೊನೆಯ ಗಳಿಗೆಯಲ್ಲಿ ನಡೆಯಬಹುದಾದ ಅಕ್ರಮಗಳನ್ನು ತಡೆಗಟ್ಟಲು ಜಂಟಿ ಚೆಕ್‌ಪೋಸ್ಟ್ ಸ್ಥಾಪನೆ ಮಾಡಲಾಗಿದೆ.


ಇದನ್ನೂ ಓದಿ: Karnataka Election 2023 Live: ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ


ಬೆಳಗಾವಿ ತಾಲೂಕಿನ ಬಾಚಿ ನಿಪ್ಪಾಣಿಯ ಕುಗನೊಳ್ಳಿ ಹಾಗೂ ಕಾಗವಾಡನ ಚೆಕ್‌ಪೋಸ್ಟ್‌ನಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದ್ದು, ಪ್ರತಿ ಚೆಕ್‌ಪೋಸ್ಟ್‌ನಲ್ಲಿ ಸಶಸ್ತ್ರ ಸೀಮಾ ಬಲ್, ಪೊಲೀಸ್, ಕಂದಾಯ ಇಲಾಖೆ, ಅಬಕಾರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 

top videos


  ಇನ್ನು ಬೆಳಗಾವಿ ಮಾತ್ರವಲ್ಲದೇ ಕರ್ನಾಟಕ ಕೇರಳ ರಾಜ್ಯದ ಗಡಿಭಾಗಗಳಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟದ್ದು, ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಹಂಚಿಕೊಂಡಿರುವ ಕೇರಳದ ಗಡಿಭಾಗದಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. 

  First published: