ಕಾಂಗ್ರೆಸ್​ಗೆ ಸೇರಿಸಿಕೊಳ್ಳಿ ಎಂದು ಸಿ.ಪಿ. ಯೋಗೇಶ್ವರ್ ನನ್ನ ಕಾಲು ಹಿಡಿದಿದ್ದ; ಡಿ.ಕೆ. ಶಿವಕುಮಾರ್ ತಿರುಗೇಟು

ಸಿ.ಪಿ. ಯೋಗೇಶ್ವರ್ 15 ದಿನಗಳ ಹಿಂದೆ ನನ್ನ ಬಳಿ ಬಂದು ಕಾಲು ಹಿಡಿದುಕೊಂಡ. ಈಗ ಯಾಕೆ ಹೀಗೆ ಮಾತಾಡುತ್ತಿದ್ದಾರೋ ಗೊತ್ತಿಲ್ಲ. ಬಹುಶಃ ಮೆಂಟಲ್ ಆಗಿರಬಹುದು ಎಂಬ ಅನುಮಾನ ಮೂಡುತ್ತಿದೆ ಎಂದು ಡಿಕೆ ಶಿವಕುಮಾರ್ ಹೊಸ ಬಾಂಬ್ ಹಾಕಿದ್ದಾರೆ.

news18-kannada
Updated:July 30, 2020, 3:18 PM IST
ಕಾಂಗ್ರೆಸ್​ಗೆ ಸೇರಿಸಿಕೊಳ್ಳಿ ಎಂದು ಸಿ.ಪಿ. ಯೋಗೇಶ್ವರ್ ನನ್ನ ಕಾಲು ಹಿಡಿದಿದ್ದ; ಡಿ.ಕೆ. ಶಿವಕುಮಾರ್ ತಿರುಗೇಟು
ಡಿ ಕೆ ಶಿವಕುಮಾರ್​ ಹಾಗೂ ಸಿ ಪಿ ಯೋಗೇಶ್ವರ್​
  • Share this:
ಬೆಂಗಳೂರು (ಜು. 30): ಡಿ.ಕೆ. ಶಿವಕುಮಾರ್ ಹಗಲು ವೇಳೆ ಮಾತ್ರ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಾರೆ. ರಾತ್ರಿಯಾದರೆ ನಮ್ಮ ಮುಖ್ಯಮಂತ್ರಿಗಳ ಬಳಿ ಬಂದು ಕೆಲಸ ಮಾಡಿಸಿಕೊಳ್ಳುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅದಕ್ಕೆ ಅದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್, 15 ದಿನಗಳ ಹಿಂದೆ ಸಿ.ಪಿ. ಯೋಗೇಶ್ವರ್ ನನ್ನ ಬಳಿ ಬಂದು ಕಾಂಗ್ರೆಸ್​ಗೆ ಸೇರಿಸಿಕೊಳ್ಳಿ ಎಂದು ಕಾಲು ಹಿಡಿದಿದ್ದ. ಆಗ ನಾನು ಬೇಡಪ್ಪ ನೀನು ಬಿಜೆಪಿಗೆ ಇಷ್ಟನಾಗಿರು ಎಂದು ವಾಪಾಸ್ ಕಳಿಸಿದ್ದೆ ಎಂದು ಹೊಸ ಬಾಂಬ್ ಹಾಕಿದ್ದಾರೆ.

ಇಂದು ವಿಧಾನ ಪರಿಷತ್ ಸದಸ್ಯರಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿ ಸಿ.ಪಿ. ಯೋಗೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾತ್ರಿಯಾದರೆ ಯಡಿಯೂರಪ್ಪನವರ ಬಳಿ ಬಂದು ತಮಗೆ ಬೇಕಾದ ಕೆಲಸ ಮಾಡಿಸಿಕೊಳ್ಳುತ್ತಾರೆ. ಹೆಚ್​.ಡಿ. ಕುಮಾರಸ್ವಾಮಿ ಹೇಳಿದ ಎಲ್ಲ ಕೆಲಸಗಳೂ ನಮ್ಮ ಸರ್ಕಾರದಲ್ಲಿ ಆಗುತ್ತಿವೆ. ಹೀಗಾಗಿ ಅವರಿಗೆ ಇಜೆಪಿ ಸೇರ್ಪಡೆಯಾಗುವಂತೆ ಬಹಿರಂಗ ಆಹ್ವಾನ ನೀಡುತ್ತಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ಆಗಸ್ಟ್ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಪಕ್ಕಾ; ದೆಹಲಿ ನಾಯಕರ ಇಶಾರೆಗೆ ಕಾಯುತ್ತಿರುವ ಯಡಿಯೂರಪ್ಪ

ಅದಕ್ಕೆ ಕೆಪಿಸಿಸಿ ಕಚೇರಿಯಲ್ಲಿ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್, ಸಿ.ಪಿ. ಯೋಗೇಶ್ವರ್ ನನ್ನ ಬಳಿ ಬಂದಿದ್ದ. 15 ದಿನಗಳ ಹಿಂದೆ ನನ್ನ ಬಳಿ ಬಂದು ಕಾಲು ಹಿಡಿದುಕೊಂಡ. ಎಷ್ಟು ಹೇಳಿದರೂ ನನ್ನ ಪಾದ ಬಿಡಲೇಇಲ್ಲ. ನನ್ನನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳಿ, ಸದ್ಯದಲ್ಲೇ ಯಡಿಯೂರಪ್ಪನವರನ್ನು ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ಹೀಗಾಗಿ ನಾನು ಕಾಂಗ್ರೆಸ್​ಗೆ ಬರುತ್ತೇನೆ ಎಂದು ನನ್ನ ಬಳಿ ಗೋಗರೆದ ಎಂದಿದ್ದಾರೆ.

ಇದನ್ನೂ ಓದಿ: ಎಚ್​ಡಿ ಕುಮಾರಸ್ವಾಮಿ ಮತ್ತು ಡಿಕೆಶಿವಕುಮಾರ್​​ ಬಿಜೆಪಿ ಸೇರುವಂತೆ ಬಹಿರಂಗ ಆಹ್ವಾನ ನೀಡಿದ ಸಿಪಿ ಯೋಗೇಶ್ವರ್

ಆದರೆ,  ಸಿ.ಪಿ. ಯೋಗೇಶ್ವರ್ ಮಾತಿಗೆ ನಿರಾಕರಿಸಿದ ನಾನು, ನೀನು ಅಲ್ಲಿಯೇ ಇರು. ಬಿಜೆಪಿ ಪಕ್ಷಕ್ಕೆ ಸೇರಿಕೊಂಡಿದ್ದೀರ. ಆ ಪಕ್ಷಕ್ಕೆ ನಿಷ್ಟನಾಗಿರುವ  ಅಂತ ವಾಪಾಸ್ ಕಳುಹಿಸಿಕೊಟ್ಟೆ. ಈಗ ಯಾಕೆ ಹೀಗೆ ಮಾತಾಡುತ್ತಿದ್ದಾರೋ ಗೊತ್ತಿಲ್ಲ. ಬಹುಶಃ ಮೆಂಟಲ್ ಆಗಿರಬಹುದು ಎಂಬ ಅನುಮಾನ ಮೂಡುತ್ತಿದೆ ಎಂದು ಡಿಕೆ ಶಿವಕುಮಾರ್ ಹೊಸ ಬಾಂಬ್ ಹಾಕಿದ್ದಾರೆ.
ಡಿ.ಕೆ. ಶಿವಕುಮಾರ್ ಹಾಗೂ ಹೆಚ್​.ಡಿ. ಕುಮಾರಸ್ವಾಮಿ ಅನುಕೂಲ ರಾಜಕಾರಣಿಗಳು. ಇಷ್ಟು ದಿನ ಒಬ್ಬರಿಗೊಬ್ಬರು ಹೊಂದಿಕೊಂಡಿದ್ದರು. ಈಗ ಅಸ್ತಿತ್ವದ ಪ್ರಶ್ನೆ ಎದುರಾಗಿರುವುದರಿಂದ ಪರಸ್ಪರ ಆರೋಪ ಮಾಡಿಕೊಳ್ಳುತ್ತಿದ್ದಾರೆ. ರಾಮನಗರದಲ್ಲಿ ಡಿ.ಕೆ. ಶಿವಕುಮಾರ್ ಸಹೋದರರು ಆಪರೇಷನ್ ಹಸ್ತ ಆರಂಭಿಸಿದ್ದಾರೆ ಎಂದು ಸಿ.ಪಿ. ಯೋಗೇಶ್ವರ್ ಆರೋಪಿಸಿದ್ದರು.
Published by: Sushma Chakre
First published: July 30, 2020, 3:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading