ಬೆಂಗಳೂರು(ಏ.02): ರಾಜ್ಯದಲ್ಲಿ ಅನುದಾನ ವಿಷಯದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ ನಡುವೆ ಉಂಟಾಗಿರುವ ಫೈಟ್ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ರೆ, ಇತ್ತ ರಾಜ್ಯದ ಡಿಸಿಎಂ ಅಶ್ವಥ್ ನಾರಾಯಣ ಹೊರ ರಾಜ್ಯದಲ್ಲಿ ಅಬ್ಬರದ ಪ್ರಚಾರದ ಮೂಲಕ ವರಿಷ್ಠರಿಗೆ ಹತ್ತಿರವಾಗ್ತಿದ್ದಾರೆ. ಹೌದು, ಕೇರಳ ಸಹ ಉಸ್ತುವಾರಿ ಯಾಗಿರುವ ಡಿಸಿಎಂ ಅಶ್ವಥ್ ನಾರಾಯಣ ಕಳೆದ ಕೆಲವು ದಿನಗಳಿಂದ ಕೇರಳ ರಾಜ್ಯದಲ್ಲಿ ಚುನಾವಣಾ ಪ್ರಚಾರವನ್ನು ಕೈಗೊಂಡಿದ್ದಾರೆ. ಅಲ್ಲಿರುವ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಮತಯಾಚನೆ ಮಾಡ್ತಿರುವ ಅವರು, ಕೇರಳದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಸ್ಥಳೀಯವಾಗಿ ಚುನಾವಣೆ ಗೆಲ್ಲಲು ರಣತಂತ್ರ ಹೆಣೆದಿರುವ ಅವ್ರು, ಕೊನೆಯ ಹಂತದ ಪ್ರಚಾರ ಮಾಡ್ತಿದ್ದಾರೆ.
ಇಂದು ಕೇರಳದ ಕೋನಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿ ಗಳ ಪರ ಪ್ರಚಾರ ಮಾಡಿಸಿದ್ರು. ಈ ಸಂದರ್ಭದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಕೇರಳ ರಾಜ್ಯ ಸಹ ಚುನಾವಣಾ ಉಸ್ತುವಾರಿ ಅಶ್ವಥ್ ನಾರಾಯಣ್ ಹಾಜರಿದ್ರು.
Viral: ದಂಡ ಕಟ್ಟುವುದರಿಂದ ತಪ್ಪಿಸಿಕೊಳ್ಳಲು ಸಂಚಾರಿ ಪೊಲೀಸರಿಗೆ ಡಿಕ್ಕಿ ಹೊಡೆದ ಭೂಪ..!
ಪ್ರಮುಖವಾಗಿ ಅಶ್ವಥ್ ನಾರಾಯಣ ಅವ್ರು ತನಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಪಣ ತೊಟ್ಟಿದ್ದಾರೆ. ಅಂದರೆ ಕೇರಳದಲ್ಲಿ ಹೆಚ್ಚು ಅಭ್ಯರ್ಥಿ ಗೆಲ್ಲಿಸಿ, ಪಕ್ಷ ಅಧಿಕಾರಕ್ಕೆ ತರೋದ್ರ ಮೂಲಕ ಹೈಕಮಾಂಡ್ ನಿಂದ ಶಹಬ್ಬಾಸ್ ಗಿರಿ ಪಡೆಯಲು ಪ್ರಯತ್ನ ಮಾಡಿದ್ದಾರೆ.
ಇನ್ನೂ ಈ ಮೂಲಕ ರಾಜ್ಯ ಮಟ್ಟದಲ್ಲಿ ಪ್ರಭಾವಿ ನಾಯಕನಾಗಿ ಹೊರ ಹೊಮ್ಮಲು ಈ ಚುನಾವಣೆ ಅವರಿಗೆ ಪ್ರಮುಖ ವೇದಿಕೆಯಾಗಿದೆ. ಹೀಗಾಗಿ ಈ ಪ್ರಯತ್ನಕ್ಕೆ ಮುಂದಾಗಿರುವ ಅಶ್ವಥ್ ನಾರಾಯಣ್, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉನ್ನತ ಹುದ್ದೆ ಪಡೆಯಲು ಚುನಾವಣೆ ಯನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಂಡು, ಈ ಬಾರಿ ಕೇರಳದಲ್ಲಿ ಕಮಲ ಅರಳಿಸಲು ಇನ್ನಿಲ್ಲದ ಕಸರತ್ತು ಗಳನ್ನು ಮಾಡ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ