ವಾಲ್ಮೀಕಿ ಸಮುದಾಯದಲ್ಲಿ ಭುಗಿಲೆದ್ದ ಆಕ್ರೋಶ; ಶ್ರೀರಾಮುಲುಗೆ ಡಿಸಿಎಂ ಪಟ್ಟ ನೀಡಲು ಪಟ್ಟು

ಖಾತೆ ಹಂಚಿಕೆ ವಿಚಾರದಲ್ಲಿ ಸಿಟಿ ರವಿ ಅಸಮಧಾನ ಹೊರಹಾಕಿದ್ದಾರೆ. ಆದರೆ, ಶ್ರೀರಾಮುಲು ಮಾತ್ರ ಮೌನ ವಹಿಸಿದ್ದಾರೆ. ಈ ಬಗ್ಗೆಯೂ ವಾಲ್ಮೀಕಿ ಸಮಾಜದವರು ಬೇಸರ ವ್ಯಕ್ತಪಡಿಸಿದ್ದಾರೆ.

Rajesh Duggumane | news18-kannada
Updated:August 27, 2019, 8:19 AM IST
ವಾಲ್ಮೀಕಿ ಸಮುದಾಯದಲ್ಲಿ ಭುಗಿಲೆದ್ದ ಆಕ್ರೋಶ; ಶ್ರೀರಾಮುಲುಗೆ ಡಿಸಿಎಂ ಪಟ್ಟ ನೀಡಲು ಪಟ್ಟು
ಶ್ರೀರಾಮುಲು
  • Share this:
ಬೆಂಗಳೂರು (ಆ.27): ಬಿಎಸ್​ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳ ಬಳಿಕ ಸಂಪುಟ ರಚನೆಯಾಗಿದೆ. ಸಚಿವ ಸ್ಥಾನ ಹಂಚಿಕೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಅಧಿಕಾರದಲ್ಲಿ ಸಮತೋಲನ ಕಾಯ್ದುಕೊಳ್ಳಬೇಕು ಎನ್ನುವ ಲೆಕ್ಕಾಚಾರದಲ್ಲಿದ್ದ ಬಿಎಸ್​ವೈಗೆ ಇದು ತಲೆನೋವಾಗಿ ಪರಿಣಮಿಸಿದೆ. ಈ ಮಧ್ಯೆ, ವಾಲ್ಮೀಕಿ ಸಮಾಜದವರು ಸರ್ಕಾರದ ವಿರುದ್ಧ ಭುಗಿಲೆದ್ದಿದ್ದಾರೆ. ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಈ ಸಮುದಾಯದವರು ಪಟ್ಟು ಹಿಡಿದ್ದಾರೆ. ಹೀಗಾಗಿ ಸರ್ಕಾರದ ಪತನಕ್ಕೆ ವಾಲ್ಮೀಕಿ ನಾಯಕ ಸಮುದಾಯ ಕಾರಣವಾಗಲಿದೆಯಾ ಎನ್ನುವ ಪ್ರಶ್ನೆ ಮೂಡಿದೆ.

ಗೃಹ ಖಾತೆ ರೇಸ್​ನಲ್ಲಿ ವಾಲ್ಮೀಕಿ ಸಮುದಾಯದ ಶ್ರೀರಾಮುಲು ಕೂಡ ಇದ್ದರು. ಆದರೆ, ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಖಾತೆ ನೀಡಲಾಗಿತ್ತು. ಇದು ವಾಲ್ಮೀಕಿ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕರು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಬಿಎಸ್​ವೈ, ಬಿಜೆಪಿಯ ಮೇಲೆ ನೇರ ಹಿಡಿತ ಹೊಂದಿರುವ ಆರ್​ಎಸ್​ಎಸ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ವಿರುದ್ಧ ವಾಲ್ಮೀಕಿ ಸಮುದಾಯದವರು ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ವಾಟ್ಸ್​​ಆ್ಯಪ್, ಫೇಸ್​ಬುಕ್​ ಗ್ರೂಪ್​ಗಳಲ್ಲಿ ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. “ಶ್ರೀರಾಮುಲು ಡಿಸಿಎಂ ಆಗೇಬೇಕು. ವಾಲ್ಮೀಕಿ ನಾಯಕ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು,” ಎನ್ನುವ ಆಗ್ರಹ ಕೇಳಿ ಬಂದಿದೆ.

ಇದನ್ನೂ ಓದಿ: ಸವದಿ, ಅಶ್ವತ್ಥ್​ ನಾರಾಯಣ ಸೇರಿ ಮೂವರು ಡಿಸಿಎಂ; ಉಳಿದಂತೆ ಯಾರಿಗೆ ಯಾವ ಖಾತೆ

ಖಾತೆ ಹಂಚಿಕೆ ವಿಚಾರದಲ್ಲಿ ಸಿಟಿ ರವಿ ಅಸಮಧಾನ ಹೊರಹಾಕಿದ್ದಾರೆ. ಆದರೆ, ಶ್ರೀರಾಮುಲು ಮಾತ್ರ ಮೌನ ವಹಿಸಿದ್ದಾರೆ. ಈ ಬಗ್ಗೆಯೂ ವಾಲ್ಮೀಕಿ ಸಮಾಜದವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ಹೋರಾಟ:

ಮೀಸಲಾತಿ ಹೆಚ್ಚಳ ಮಾಡ್ಲಿಲ್ಲ. ಈಗ ಡಿಸಿಎಂ ಸ್ಥಾನವನ್ನೂನೀಡ್ಲಿಲ್ಲ. ಈಗಲಾದರೂ ಬಿಜೆಪಿ ನಾಯಕರು ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂಬುದು ವಾಲ್ಮೀಕಿ ಸಮುದಾಯದ ಆಗ್ರಹ. ಒಂದೊಮ್ಮೆ ಮಾತಿಗೆ ತಪ್ಪಿದರೆ ರಾಜ್ಯಾದ್ಯಂತ ಹೋರಾಟ ನಡೆಸಲು ಈ ಸಮುದಾಯದ ನಾಯಕರು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲ, ಬಿಜೆಪಿ ವಿರುದ್ಧ ಪ್ರಚಾರ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.(ವರದಿ: ಗಂಗಾಧರ್​)

First published:August 27, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ