Karnataka Rain: ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಆಗುತ್ತಿದೆ. ಅಲ್ಲದೆ, ಕಡಲ ತೀರದಲ್ಲಿ ವೇಗವಾಗಿ ಗಾಳಿ ಬೀಸುತ್ತಿದೆ. ಪರಿಣಾಮ,  ಸಮುದ್ರದಲ್ಲಿ ದೊಡ್ಡ ದೊಡ್ಡ ಅಲೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

news18-kannada
Updated:July 12, 2020, 11:11 AM IST
Karnataka Rain: ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಗದಗದಲ್ಲಿ ಅವಳಿ ಮಳೆಗೆ ತತ್ತರಿಸಿದ ಜನತೆ
 • Share this:
ಬೆಂಗಳೂರು (ಜು.12): ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ, ಈ ಭಾಗದಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಭಾಗದಲ್ಲಿ ಇಂದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಆಗುತ್ತಿದೆ. ಅಲ್ಲದೆ, ಕಡಲ ತೀರದಲ್ಲಿ ವೇಗವಾಗಿ ಗಾಳಿ ಬೀಸುತ್ತಿದೆ. ಪರಿಣಾಮ,  ಸಮುದ್ರದಲ್ಲಿ ದೊಡ್ಡ ದೊಡ್ಡ ಅಲೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ತಗ್ಗಿದ ಪ್ರವಾಹ

ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗುತ್ತಿರುವದರಿಂದ ನೇತ್ರಾವತಿ, ಅಘನಾಶಿನಿ ನದಿಗಳು ಉಕ್ಕಿ ಹರಿದಿದ್ದವು. ಹೀಗಾಗಿ, ಕುಂದಾಪುರ, ಕುಮಟಾ, ಅಂಕೋಲ ಹಾಗೂ ಕಾರವಾರ ಭಾಗದಲ್ಲಿ ಹಳ್ಳಿಗಳು ಮುಳುಗಿದ್ದವು. ಈಗ ನೀರಿನ ಪ್ರಮಾಣ ತಗ್ಗಿದೆ. ಆದರೆ, ಕೆಲವು ಮನೆಗಳು ಮುರಿದುಬಿದ್ದಿದ್ದು, ಜನರು ಆಶ್ರಯ ಇಲ್ಲದೆ ಒದ್ದಾಡುವಂಥ ಪರಿಸ್ಥಿತಿ ಬಂದೊದಗಿದೆ.

ಬೆಂಗಳೂರಲ್ಲಿ ಒಂದು ವಾರ ಮಳೆ:ಬೆಂಗಳೂರನಿಲ್ಲಿ ಗುರುವಾರ ರಾತ್ರಿ ಆರಂಭವಾದ ಮಳೆ ಮುಂಜಾನೆಯವರೆಗೂ ಮುಂದುವರಿದಿತ್ತು. ಅದಾದ ನಂತರ ಮಳೆ ಕಾಣಿಸಿಕೊಂಡಿರಲಿಲ್ಲ. ಶುಕ್ರವಾರ ಅಲ್ಲಲ್ಲಿ ಮಳೆಯಾಗಿತ್ತಾದರೂ ಎಲ್ಲ ಭಾಗಗಳಲ್ಲಿ ಮಳೆ ಸುರಿದಿರಲಿಲ್ಲ. ಒಂದು ವಾರಗಳ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಗದಗದಲ್ಲಿ ಮಳೆ:

ಗದಗ-ಬೆಟಗೇರಿ ಅವಳಿ ನಗರದಲ್ಲಿ ಭಾರೀ ಮಳೆ ಆಗಿದೆ. ಅಬ್ಬರದ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ.  ಮಳೆರಾಯನ ಆರ್ಭಟಕ್ಕೆ ನೂರಾರು ಮನೆಗಳಿಗೆ ನುಗ್ಗಿದ ಚರಂಡಿ ನೀರು ನುಗ್ಗಿದೆ.

ಯಾವ ಯಾವ ಜಿಲ್ಲೆಗಳಲ್ಲಿ ಅಲರ್ಟ್​?

 • ಉತ್ತರ ಕನ್ನಡ

 • ದಕ್ಷಿಣ ಕನ್ನಡ

 • ಉಡುಪಿ

 • ಬೆಂಗಳೂರು

 • ಬೆಂಗಳೂರು ಗ್ರಾಮಾಂತರ

 •  ತುಮಕೂರು

 • ಶಿವಮೊಗ್ಗ

 • ಕೋಲಾರ ಕೊಡಗು

 • ಹಾಸನ

 • ಚಿಕ್ಕಮಗಳೂರು

 • ಚಾಮರಾಜನಗರ

 • ಕೊಡಗು

 • ರಾಮನಗರ

Published by: Rajesh Duggumane
First published: July 12, 2020, 11:11 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading