ಯಾದಗಿರಿ: ಜಿಲ್ಲೆಯ ಗುರುಮಿಠಕಲ್ (Gurumitkal, Yadagiri) ತಾಲೂಕು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಾಗಿದ್ದು, 10ಕ್ಕೂ ಅಧಿಕ ಮರಗಳು (Trees) ಧರೆಗುರುಳಿವೆ. ಚಿಂತನಹಳ್ಳಿ ಗ್ರಾಮದಲ್ಲಿ ಆಲಿಕಲ್ಲು ಮಳೆಯಾಗಿದ್ದು (Heavy Rain), ಮರ ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಬಿರುಗಾಳಿ ಮಳೆ ಅಬ್ಬರಕ್ಕೆ ಮನೆಗಳ ಮೇಲಿನ ತಗಡುಗಳು ಹಾರಿ ಹೋಗಿದ್ದರಿಂದ ಜನರು ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ. ಇನ್ನು ಮರಗಳು ಧರೆಗುರಳಿದ ಪರಿಣಾಮ ಕೊಕ್ಕರೆಗಳು (Little egret) ಸೇರಿದಂತೆ ಸುಮಾರು 50ಕ್ಕೂ ಅಧಿಕ ಪಕ್ಷಿಗಳು ಸಾವನ್ನಪ್ಪಿವೆ. ಮರದ ಅಡಿ ಮತ್ತು ನೀರಿನಲ್ಲಿ ಸಿಲುಕಿದ್ದ 60ಕ್ಕೂ ಹೆಚ್ಚು ಪಕ್ಷಿಗಳನ್ನು ಗ್ರಾಮಸ್ಥರು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಮಿಳುನಾಡಿನಲ್ಲಿ ಸೈಕ್ಲೋನ್
ನೆರೆಯ ತಮಿಳುನಾಡಿನಲ್ಲಿ ಸೈಕ್ಲೋನ್ (Tamilnadu Cyclone) ಕಾಣಿಸಿಕೊಳ್ಳುವ ಮುನ್ಸೂಚನೆ ದೊರೆತಿದ್ದು, ಬೆಂಗಳೂರು ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ.
ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಏಪ್ರಿಲ್ 30ರವರೆಗೆ ಈ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ.
ಕರಾವಳಿ ಭಾಗದಲ್ಲಿ ಹಗುರ ಮಳೆ
ಇನ್ನು ಕರ್ನಾಟಕದ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಬಾಗಲಕೋಟೆಯಲ್ಲಿ ಒಣ ಹವೆ ಮುಂದುವರಿಯಲಿದೆ. ಆದರೆ ಕೆಲವು ಭಾಗಗಳಲ್ಲಿ ಸಣ್ಣ ಮಳೆಯಾಗಲಿದೆ.
ಮಲೆನಾಡಿನಲ್ಲಿ ಮಳೆ
ಕೊಡಗು, ಶಿವಮೊಗ್ಗ, ಹಾಸನ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಮಳೆಯಾಗುತ್ತಿದೆ. ಈ ಮಳೆ ಮೂರು ದಿನ ಮುಂದುವರಿಯುವ ಸಾಧ್ಯತೆಗಳಿವೆ.
ಇದನ್ನೂ ಓದಿ: Black Magic: ಮೂವರು ಯುವತಿಯರ ವಶೀಕರಣಕ್ಕೆ ಬೆತ್ತಲೆ ಪೂಜೆ; ಫೋಟೋ ಇರಿಸಿ ವಾಮಾಚಾರ
ಸಿಡಿಲು ಬಡಿದು ರೈತ ಸಾವು
ರಾಯಚೂರು ತಾಲೂಕಿನ ಸಿಂಗನೋಡಿಯಲ್ಲಿ ಸಿಡಿಲು ಬಡಿದು ರೈತ ನರಸಿಂಹಲು(45) ಸಾವನ್ನಪ್ಪಿದ್ದಾರೆ. ರಾತ್ರಿ ಹೊಲದಲ್ಲಿ ಘಟನೆ ನಡೆದಿದ್ದು, ಜೊತೆಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ