HOME » NEWS » State » KARNATAKA RAIN CYCLONE YAAS MAY BRING MONSOON 2021 TO KARNATAKA BY JUNE 1 KARNATAKA WEATHER SCT

Karnataka Rain: ಯಾಸ್ ಚಂಡಮಾರುತದ ಎಫೆಕ್ಟ್​; ಕರ್ನಾಟಕದಲ್ಲಿ 4 ದಿನ ಮೊದಲೇ ಮುಂಗಾರು ಆರಂಭ

Cyclone Yaas: ಜೂನ್ 3 ಅಥವಾ 4ರಂದು ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿತ್ತು. ಆದರೆ, ಯಾಸ್ ಚಂಡಮಾರುತದಿಂದ ಮೇ 31 ಅಥವಾ ಜೂನ್ 1ರಂದು ಕರ್ನಾಟಕದಲ್ಲೂ ಮುಂಗಾರು ಪ್ರವೇಶವಾಗುವ ಸಾಧ್ಯತೆ ಹೆಚ್ಚಾಗಿದೆ.

Sushma Chakre | news18-kannada
Updated:May 24, 2021, 4:06 PM IST
Karnataka Rain: ಯಾಸ್ ಚಂಡಮಾರುತದ ಎಫೆಕ್ಟ್​; ಕರ್ನಾಟಕದಲ್ಲಿ 4 ದಿನ ಮೊದಲೇ ಮುಂಗಾರು ಆರಂಭ
ಮಳೆ
  • Share this:
ಬೆಂಗಳೂರು (ಮೇ. 24): ತೌಕ್ತೆ ಚಂಡಮಾರುತದ ಬೆನ್ನಲ್ಲೇ ನಾಳೆಯಿಂದ ಯಾಸ್ ಚಂಡಮಾರುತದ ಅಬ್ಬರ ಶುರುವಾಗಲಿದೆ. ಮೇ 31 ಅಥವಾ ಜೂನ್ 1ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮಳೆಗಾಲ ಶುರುವಾಗಲಿದೆ ಎನ್ನಲಾಗಿತ್ತು. ಆದರೆ, ಯಾಸ್ ಚಂಡಮಾರುತದ ಹಿನ್ನೆಲೆಯಲ್ಲಿ ಈ ಬಾರಿ ನಿಗದಿತ ದಿನಕ್ಕೂ 4 ದಿನ ಮೊದಲೇ ಕರ್ನಾಟಕದಲ್ಲಿ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 3 ಅಥವಾ 4ರಂದು ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿತ್ತು. ಆದರೆ, ಯಾಸ್ ಚಂಡಮಾರುತದಿಂದ ಮೇ 31 ಅಥವಾ ಜೂನ್ 1ರಂದು ಕರ್ನಾಟಕದಲ್ಲೂ ಮುಂಗಾರು ಪ್ರವೇಶವಾಗುವ ಸಾಧ್ಯತೆ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಚಂಡಮಾರುತದ ಪರಿಣಾಮದಿಂದ ಕಳೆದೊಂದು ವಾರದಿಂದ ಮಳೆಯಾಗುತ್ತಿದ್ದು, ಮೇ 26ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ರಾಜ್ಯದಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಮೇ 26ರವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಮೇ 26ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹೀಗಾಗಿ, ಈ 13 ಜಿಲ್ಲೆಗಳಲ್ಲಿ Yellow Alert ಘೋಷಿಸಲಾಗಿದೆ. Tauktae Cyclone ಬಳಿಕ ಇಂದು ಸಂಜೆ ಪಶ್ಚಿಮ ಬಂಗಾಳಕ್ಕೆ ಯಾಸ್ ಚಂಡಮಾರುತ ಪ್ರವೇಶಿಸಲಿದ್ದು, ಮೇ 26ರಂದು Yaas Cyclone ತೀವ್ರಗೊಳ್ಳಲಿದೆ. ಇದರ ಪರಿಣಾಮ ಕರ್ನಾಟಕದ ಕರಾವಳಿ ಪ್ರದೇಶದ ಮೇಲೂ ಉಂಟಾಗುವ ಸಾಧ್ಯತೆಗಳಿವೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಎದ್ದಿದ್ದು, ಇಂದಿನಿಂದ ಮೇ 26ರವರೆಗೂ ಕರ್ನಾಟಕದ ಮಲೆನಾಡು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Barge Tragedy: ಮುಂಬೈ ಬಾರ್ಜ್ ದುರಂತದ ಸಾವಿನ ಸಂಖ್ಯೆ 70ಕ್ಕೆ ಏರಿಕೆ; ಕೊನೆಗೂ ಸಿಗಲಿಲ್ಲ 16 ಜನರ ಸುಳಿವು!

ಜೂನ್ 3 ಅಥವಾ 4ರಂದು ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿತ್ತು. ಆದರೀಗ ಜೂನ್ 1ರ ವೇಳೆಗೆ ಕರ್ನಾಟಕದಲ್ಲಿ ಮಳೆಗಾಲ ಆರಂಭವಾಗಲಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೆಎಸ್​ಎನ್​ಡಿಎಂಸಿ ಸೈಂಟಿಫಿಕ್ ಆಫೀಸರ್ ಎಸ್​.ಎಸ್​.ಎಂ. ಗವಾಸ್ಕರ್, ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ. ಜೂನ್ ಮೊದಲ ವಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಾರುತಗಳು ಬಲಪಡೆದುಕೊಂಡಿದ್ದು, ಚಂಡಮಾರುತವಾಗಿ ಬದಲಾಗಲಿದೆ. ಮೇ 26ರಂದು Yaas ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾಗೆ ಅಪ್ಪಳಿಸಲಿದೆ. ಈ ಹಿನ್ನಲೆಯಲ್ಲಿ ರಾಜ್ಯ ಕರಾವಳಿ ಮೇಲೂ ಚಂಡಮಾರುತದ ಪರಿಣಾಮ ಬೀರಲಿದ್ದು, ಭಾರೀ ಮಳೆಯ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ: Cyclone Yaas: ಪಶ್ಚಿಮ ಬಂಗಾಳಕ್ಕೆ ಇಂದು ಅಪ್ಪಳಿಸಲಿದೆ ಯಾಸ್ ಚಂಡಮಾರುತ; 950 NDRF​ ಸಿಬ್ಬಂದಿ ಏರ್​ಲಿಫ್ಟ್​ಇಂದು ಮತ್ತು ನಾಳೆ ಬೆಂಗಳೂರು, ಚಾಮರಾಜನಗರ, ಮೈಸೂರು ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.
Youtube Video

ಕರ್ನಾಟಕ ಮಾತ್ರವಲ್ಲದೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು, ಅರುಣಾಚಲ ಪ್ರದೇಶ ಭಾಗದಲ್ಲೂ ಸಾಧಾರಣದಿಂದ ಉತ್ತಮ ಮಳೆ ಸುರಿಯಲಿದೆ. ಅದೇರೀತಿ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ, ತ್ರಿಪುರಾ ಮತ್ತು ಕೇರಳ ಪ್ರಾಂತ್ಯಗಳಲ್ಲೂ ಉತ್ತಮ ಮಳೆ ಸುರಿಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಾಖಂಡ, ಪಶ್ಚಿಮ ಬಂಗಾಳ, ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಬಿಹಾರ, ಜಾರ್ಖಂಡ್, ಮಹಾರಾಷ್ಟ್ರ ಹಾಗೂ ತೆಲಂಗಾಣದದಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ.
Published by: Sushma Chakre
First published: May 24, 2021, 4:06 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories