HOME » NEWS » State » KARNATAKA RAIN HEAVY RAIN EXPECTED IN SHIVAMOGGA CHIKMAGALUR MANGALORE KODAGU BANGALORE RAIN SCT

Karnataka Rain: ಶಿವಮೊಗ್ಗ, ಹಾಸನ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆ

Karnataka Weather: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೆರಡು ದಿನ ಮಳೆಯಾಗಲಿದೆ.

Sushma Chakre | news18-kannada
Updated:January 8, 2021, 3:34 PM IST
Karnataka Rain: ಶಿವಮೊಗ್ಗ, ಹಾಸನ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಜ. 7): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಶುರುವಾಗಿದೆ. ಪೂರ್ವ ಅಲೆಗಳ ಪರಿಣಾಮದಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಅದರಲ್ಲೂ ಚಿಕ್ಕಮಗಳೂರು, ಹಾಸನ ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ 2 ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನೂ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಪೂರ್ವ ಅಲೆಗಳ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 3‌ ದಿನಗಳ ಕಾಲ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಜ. 10ರವರೆಗೆ ಬೆಂಗಳೂರಿ‌ನಲ್ಲೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ‌ ಜನವರಿ 10ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Bangalore Rain: ಬೆಂಗಳೂರಿನಲ್ಲಿ ಮುಂಜಾನೆವರೆಗೂ ಸುರಿದ ಮಳೆ; ಜ. 10ರವರೆಗೂ ಮಳೆ ಮುಂದುವರಿಕೆ

ಈಶಾನ್ಯ ಮುಂಗಾರಿನ ಮಾರುತಗಳು ಪ್ರಬಲವಾಗಿರುವುದರಿಂದ ಮೋಡ ಕವಿದ ವಾತಾವರಣವಿದ್ದು, ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಶಾನ್ಯದ ಕಡೆಯಿಂದ ಬಲವಾದ ಮೇಲ್ಮೈ ಗಾಳಿ ಬೀಸುತ್ತಿದ್ದು, ಜ.8ರವರೆಗೂ ಇದೇ ರೀತಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಹಲವೆಡೆ 3 ದಿನ ಮಳೆ ಸುರಿಯುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. 3 ದಿನಗಳ ಹಿಂದೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಮಳೆಯಾಗಿತ್ತು. ಇನ್ನೂ ಎರಡು ದಿನ ಮಳೆಯ ವಾತಾವರಣ ಮುಂದುವರೆಯಲಿದ್ದು, ಮಲೆನಾಡು, ಕೊಡಗು, ಹಾಸನದಲ್ಲಿ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ.
Youtube Video

ಕರಾವಳಿ ಮತ್ತು ಮಲೆನಾಡಿನಲ್ಲಿ ನಿನ್ನೆ ಭಾರೀ ಮಳೆಯಾಗಿದ್ದು, ಮಳೆಗಾಲದ ವಾತಾವರಣವೇ ಸೃಷ್ಟಿಯಾಗಿತ್ತು. ದಕ್ಷಿಣ ಕನ್ನಡದ ಬೆಳ್ತಂಗಡಿ, ವಿಟ್ಲ, ಸುಳ್ಯ, ಪುತ್ತೂರಿನಲ್ಲಿ ನಿನ್ನೆ ಭಾರೀ ಮಳೆಯಾಗಿದೆ. ಹಾಗೇ, ಕಾರ್ಕಳ, ಉಡುಪಿ, ಬ್ರಹ್ಮಾವರ, ಕುಂದಾಪುರದಲ್ಲೂ ಮಳೆಯ ಅಬ್ಬರ ಜೋರಾಗಿತ್ತು. ಜೊತೆಗೆ ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ವಿಜಯಪುರದಲ್ಲೂ ಮಳೆಯ ಅಬ್ಬರ ಜೋರಾಗಿತ್ತು. ರಾಜ್ಯಾದ್ಯಂತ ಹಲವೆಡೆ ಇನ್ನೂ 4 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
Published by: Sushma Chakre
First published: January 7, 2021, 9:14 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories