Karnataka Weather : ಬೆಂಗಳೂರು (ಮೇ 15): ಮಲೆನಾಡು, ಕರಾವಳಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯ ಸಿಂಚನವಾಗುತ್ತಿದೆ. ಇಂದು ಕರ್ನಾಟಕಕ್ಕೆ ತೌಕ್ತೆ ಚಂಡಮಾರುತ ಆಗಮಿಸುವ ಹಿನ್ನೆಲೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಉಡುಪಿ ಸುತ್ತಮುತ್ತ ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ಇಂದಿನಿಂದ ಮೇ 17ರವರೆಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಗಾಲದ ವಾತಾವರಣ ನಿರ್ಮಾಣವಾಗಿದ್ದು, ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಚಂಡಮಾರುತದ ಪರಿಣಾಮದಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಲಾಶಯಗಳು, ನದಿ ದಂಡೆಗಳ ಪಕ್ಕದಲ್ಲಿರುವ ನಿವಾಸಿಗಳು ಹೆಚ್ಚಿನ ಎಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಇಂದು ಮತ್ತು ನಾಳೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಾಳೆ ದಕ್ಷಿಣ ಭಾರತಕ್ಕೆ ತೌಕ್ತೆ ಚಂಡಮಾರುತ ಆಗಮನವಾಗಲಿದೆ. ಇಂದಿನಿಂದ 2 ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಇಂದು ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೇ 17ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು, ನಾಳೆ ಮತ್ತು 17ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
Rains in Madikeri kodagu #CycloneTauktae #kodagu #madikeri #karnataka #rains #weather #premonsoon pic.twitter.com/EeWBH94XRy
— thirurao (@drrao) May 15, 2021
ಕೊಡಗಿನಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಮಡಿಕೇರಿ ನಗರದ ಚಾಮುಂಡೇಶ್ವರಿ ನಗರ ಮತ್ತು ಇಂದಿರಾನಗರದ ನಿವಾಸಿಗಳು ತಾತ್ಕಾಲಿಕವಾಗಿ ಮನೆಗಳನ್ನು ಖಾಲಿ ಮಾಡಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಡಿಕೇರಿ ನಗರ ಸಭೆ ನೊಟೀಸ್ ನೀಡಿದೆ. ಇಂದಿರಾ ನಗರ ಮತ್ತು ಚಾಮುಂಡೇಶ್ವರಿ ನಗರದ 128ಕ್ಕೂ ಹೆಚ್ಚು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಮೇ 14 ಮತ್ತು 15ರಂದು ಚಂಡಮಾರುತದ ಪರಿಣಾಮವಾಗಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಹೀಗಾಗಿ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ನೋಟಿಸ್ ನೀಡಿದೆ.
Cyclonic storm #Tauktae has formed to the west of #India, this system will move north and strengthen over coming days, torrential rain affecting Western states of India, Maldives and Lakshadweep! #CycloneTauktae pic.twitter.com/ef8jUjp0kg
— WEATHER/ METEO WORLD (@StormchaserUKEU) May 14, 2021
ಇಂದು ಮತ್ತು ಮೇ 16ರಂದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಇಂದು ಮತ್ತು 17ರಂದು ಭಾರೀ ಮಳೆಯಾಗುವ ಸಾಧ್ಯತೆ. ಇಂದು ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ