Karnataka Rain: ಇಂದಿನಿಂದ ಮೇ 25ರವರೆಗೆ ಭಾರೀ ಮಳೆ; ಕರ್ನಾಟಕದ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

Cyclone Yaas: ಮೇ 25ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ Yellow Alert ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಮಳೆ

ಕರ್ನಾಟಕದಲ್ಲಿ ಮಳೆ

  • Share this:
ಬೆಂಗಳೂರು (ಮೇ. 22): ಈ ಬಾರಿ ಮಳೆಗಾಲಕ್ಕೂ ಮುನ್ನ ಎದ್ದ ತೌಕ್ತೆ ಚಂಡಮಾರುತದ ಪರಿಣಾಮದಿಂದ ಕಳೆದೊಂದು ವಾರದಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮೇ 25ರವರೆಗೆ ರಾಜ್ಯಾದ್ಯಂತ Rain ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಈ 13 ಜಿಲ್ಲೆಗಳಲ್ಲಿ Yellow Alert ಘೋಷಿಸಲಾಗಿದೆ.

Tauktae Cyclone ಬಳಿಕ ಇದೀಗ ಮೇ 26ರಂದು ಬಂಗಾಳ ಕೊಲ್ಲಿಯಲ್ಲಿ Yaas Cyclone ಏಳಲಿದ್ದು, ಇದರ ಪರಿಣಾಮ ಕರ್ನಾಟಕದ ಕರಾವಳಿ ಪ್ರದೇಶದ ಮೇಲೂ ಉಂಟಾಗುವ ಸಾಧ್ಯತೆಗಳಿವೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಎದ್ದಿದ್ದು, ಇಂದಿನಿಂದ ಮೇ 26ರವರೆಗೂ ಕರ್ನಾಟಕದ ಮಲೆನಾಡು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಾರುತಗಳು ಬಲಪಡೆದುಕೊಂಡಿದ್ದು, ಚಂಡಮಾರುತವಾಗಿ ಬದಲಾಗಲಿದೆ. ಮೇ 26ರಂದು Yaas ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾಗೆ ಅಪ್ಪಳಿಸಲಿದೆ. ಈ ಹಿನ್ನಲೆಯಲ್ಲಿ ರಾಜ್ಯ ಕರಾವಳಿ ಮೇಲೂ ಚಂಡಮಾರುತದ ಪರಿಣಾಮ ಬೀರಲಿದ್ದು, ಭಾರೀ ಮಳೆಯ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಜೂನ್ 1ರಂದು ಕೇರಳಕ್ಕೆ Monsoon ಪ್ರವೇಶವಾಗುವ ಬಗ್ಗೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Cyclone Yaas: ಮೇ 26ಕ್ಕೆ ಪಶ್ಚಿಮ ಬಂಗಾಳ, ಒರಿಸ್ಸಾದಲ್ಲಿ ಯಾಸ್ ಚಂಡಮಾರುತದ ಅಬ್ಬರ; ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್

ಇಂದಿನಿಂದ ಮೇ 25ರವರೆಗೆ ಬೆಂಗಳೂರು, ಚಾಮರಾಜನಗರ, ಮೈಸೂರು ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಮೇ 29ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಕರಾವಳಿ ನಲುಗಿ ಹೋಗಿತ್ತು. ತೌಕ್ತೆ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಕನ್ನಡ‌ ಜಿಲ್ಲೆಯಲ್ಲಿ 87 ಮನೆಗಳಿಗೆ ಹಾನಿಯಾಗಿತ್ತು. ಅದರಲ್ಲಿ 63 ಮನೆಗಳು ಭಾಗಶಃ ಹಾನಿಯಾಗಿ, 23 ಮನೆಗಳು ಪೂರ್ತಿ ನಾಶವಾಗಿತ್ತು. ತೌಕ್ತೆ ಚಂಡಮಾರುತದ ಹಿನ್ನಲೆಯಲ್ಲಿ ರಾಜ್ಯದ 22 ತಾಲೂಕುಗಳ 333 ಕಡೆಗಳಲ್ಲಿ ಹಾನಿಯಾಗಿದ್ದು , ಒಟ್ಟು 6 ಜನರು ಸಾವನ್ನಪ್ಪಿದ್ದರು.ಕರ್ನಾಟಕ ಮಾತ್ರವಲ್ಲದೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು, ಅರುಣಾಚಲ ಪ್ರದೇಶ ಭಾಗದಲ್ಲೂ ಸಾಧಾರಣದಿಂದ ಉತ್ತಮ ಮಳೆ ಸುರಿಯಲಿದೆ. ಅದೇರೀತಿ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ, ತ್ರಿಪುರಾ ಮತ್ತು ಕೇರಳ ಪ್ರಾಂತ್ಯಗಳಲ್ಲೂ ಉತ್ತಮ ಮಳೆ ಸುರಿಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಾಖಂಡ, ಪಶ್ಚಿಮ ಬಂಗಾಳ, ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಬಿಹಾರ, ಜಾರ್ಖಂಡ್, ಮಹಾರಾಷ್ಟ್ರ ಹಾಗೂ ತೆಲಂಗಾಣದದಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ.
Published by:Sushma Chakre
First published: