Karnataka Rain: ಬುರೇವಿ ಚಂಡಮಾರುತದ ಪರಿಣಾಮ; ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ

Karnataka Weather: ತಮಿಳುನಾಡು ಮತ್ತು ಕೇರಳದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಮೇಲೂ ಬುರೇವಿ ಚಂಡಮಾರುತದ ಪ್ರಭಾವ ಉಂಟಾಗಲಿದೆ. ಇನ್ನೆರಡು ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಡಿ. 4): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದಲ್ಲಿ ಬುರೇವಿ ಚಂಡಮಾರುತದ ಅಬ್ಬರ ಶುರುವಾಗಿದೆ. ಇಂದು ಮುಂಜಾನೆ ಬುರೇವಿ ಚಂಡಮಾರುತ ತಮಿಳುನಾಡಿನ ಕರಾವಳಿ ಪ್ರದೇಶವನ್ನು ಹಾದು ಹೋಗಲಿದೆ. ಬಳಿಕ ಕೇರಳದಲ್ಲೂ ಚಂಡಮಾರುತ ಅಪ್ಪಳಿಸಲಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ತಮಿಳುನಾಡು ಮತ್ತು ಕೇರಳದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಮೇಲೂ ಬುರೇವಿ ಚಂಡಮಾರುತದ ಪ್ರಭಾವ ಉಂಟಾಗಲಿದೆ. ನಿನ್ನೆ ಬೆಳಗ್ಗೆಯಿಂದಲೇ ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಭಾಗಗಳಲ್ಲಿ ಮಳೆ ಶುರುವಾಗಿದೆ. ಇಂದು ಕೂಡ ಬುರೇವಿ ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಶಿವಮೊಗ್ಗ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ಬುರೇವಿ ಚಂಡಮಾರುತದ ಪರಿಣಾಮ ಈ ಜಿಲ್ಲೆಗಳ ಮೇಲೂ ಉಂಟಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Bangalore Crime: ಫಸ್ಟ್​ ನೈಟ್​ನಲ್ಲಿ ಕುಡಿದು ಬಂದ ಗಂಡ; ಮದುವೆಯಾಗಿ ಒಂದೇ ತಿಂಗಳಲ್ಲಿ ಮುರಿದುಬಿತ್ತು ಸಂಸಾರ!

ಕೇರಳದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯ ಆರ್ಭಟ ಭಾರೀ ಹೆಚ್ಚಾಗಲಿದೆ. ಹೀಗಾಗಿ, ರೆಡ್ ಅಲರ್ಟ್​ ಘೋಷಿಸಲಾಗಿದೆ. ಬುಧವಾರ ರಾತ್ರಿಯೇ ಶ್ರೀಲಂಕಾವನ್ನು ಹಾದು ಹೋಗಿರುವ ಬುರೇವಿ ಚಂಡಮಾರುತ ನಿನ್ನೆ ಸಂಜೆಯೇ ತಮಿಳುನಾಡನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮೊದಲು ಮುನ್ಸೂಚನೆ ನೀಡಿತ್ತು. ಆದರೆ, ನಿನ್ನೆ ದಕ್ಷಿಣ ಭಾರತಕ್ಕೆ ಚಂಡಮಾರುತ ಅಪ್ಪಳಿಸದ ಕಾರಣ ಇಂದು ಬೆಳಗ್ಗೆ ತಮಿಳುನಾಡಿನ ಕರಾವಳಿ ತೀರಕ್ಕೆ ಬುರೇವಿ ಸೈಕ್ಲೋನ್ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಮಿಳುನಾಡಿನ ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಸಿವಗಂಗೈ ಮತ್ತು ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಭಾಗದಲ್ಲಿ ಡಿಸೆಂಬರ್ 5ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದರ ಪರಿಣಾಮ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಮೇಲೂ ಆಗಲಿದೆ. ಡಿಸೆಂಬರ್ 5ರವರೆಗೆ ಬುರೇವಿ ಚಂಡಮಾರುತದಿಂದ ಕಡಲು ಹೆಚ್ಚು ಅಪಾಯಕಾರಿ ಆಗಿರುವುದರಿಂದ ಯಾರೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
Published by:Sushma Chakre
First published: