HOME » NEWS » State » KARNATAKA RAIN HEAVY RAINFALL PREDICTED IN KARNATAKA COASTAL DISTRICTS TODAY WEATHER FORECAST MONSOON 2021 SCT

Karnataka Rain: ಕರ್ನಾಟಕದಲ್ಲಿ ಇಂದಿನಿಂದ 4 ದಿನ ಗುಡುಗು ಸಹಿತ ಮಳೆ; ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ

Karnataka Weather Forecast: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದಿನಿಂದ ಜೂನ್ 4ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.

Sushma Chakre | news18-kannada
Updated:June 1, 2021, 9:55 AM IST
Karnataka Rain: ಕರ್ನಾಟಕದಲ್ಲಿ ಇಂದಿನಿಂದ 4 ದಿನ ಗುಡುಗು ಸಹಿತ ಮಳೆ; ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಜೂನ್ 1): ಈ ವರ್ಷ ಮುಂಗಾರು ಮಳೆ ಕೊಂಚ ತಡವಾಗಲಿದ್ದು, ಜೂನ್ 3ರಿಂದ ಕೇರಳದಲ್ಲಿ ಮಾನ್ಸೂನ್ ಪ್ರವೇಶಿಸಲಿದೆ. ಕರ್ನಾಟಕಕ್ಕೆ ಜೂನ್ 4 ಅಥವಾ 5ರಂದು ಮುಂಗಾರಿನ ಪ್ರವೇಶವಾಗಲಿದೆ ಎಂದು ಅಂದಾಜಿಸಲಾಗಿದೆ. ಇದರ ನಡುವೆ ಇಂದಿನಿಂದ 4 ದಿನಗಳ ಕಾಲ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದಿನಿಂದ ಜೂನ್ 4ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದಿನಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ. ನಿನ್ನೆಯೇ ಕೇರಳಕ್ಕೆ ಪ್ರವೇಶಿಸಬೇಕಿದ್ದ ಮುಂಗಾರು ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಲಿದೆ. ಇದರ ಪರಿಣಾಮವಾಗಿ ಇಂದಿನಿಂದ ಜೂನ್ 4ರವರೆಗೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ 4 ದಿನಗಳವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: Petrol Price Today: ಮುಂಬೈ, ರಾಜಸ್ಥಾನದಲ್ಲಿ 100 ರೂ. ದಾಟಿದ ಪೆಟ್ರೋಲ್ ಬೆಲೆ; ಡೀಸೆಲ್ ಬೆಲೆಯಲ್ಲೂ ಏರಿಕೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ದಕ್ಷಿಣ ಕನ್ನಡ, ಧರ್ಮಸ್ಥಳ, ಸುಳ್ಯ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಹಾಗೇ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲೂ ಮಳೆಯ ಅಬ್ಬರ ಜೋರಾಗಿತ್ತು. ಉತ್ತರ ಕನ್ನಡದ ಹಲವೆಡೆಯೂ ಮಳೆಯಾಗಿದ್ದು, ಇಂದು ಕೂಡ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Lockdown Extension: ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ?; ಸಚಿವರ ಜೊತೆ ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ

ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Youtube Video

ಜೂನ್ 4 ಅಥವಾ 5ರಂದು ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೆಎಸ್​ಎನ್​ಡಿಎಂಸಿ ಸೈಂಟಿಫಿಕ್ ಆಫೀಸರ್ ಎಸ್​.ಎಸ್​.ಎಂ. ಗವಾಸ್ಕರ್, ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ. ಜೂನ್ ಮೊದಲ ವಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದೆ.
Published by: Sushma Chakre
First published: June 1, 2021, 9:55 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories