• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಕೃಷ್ಣಾ ನದಿಗೆ 1.85 ಲಕ್ಷ ಕ್ಯೂಸೆಕ್ಸ್​ ನೀರು ಬಿಡುಗಡೆ; ಬಾಗಲಕೋಟೆಯಲ್ಲಿ ಹೆಚ್ಚಿದ ಪ್ರವಾಹ ಭೀತಿ

ಕೃಷ್ಣಾ ನದಿಗೆ 1.85 ಲಕ್ಷ ಕ್ಯೂಸೆಕ್ಸ್​ ನೀರು ಬಿಡುಗಡೆ; ಬಾಗಲಕೋಟೆಯಲ್ಲಿ ಹೆಚ್ಚಿದ ಪ್ರವಾಹ ಭೀತಿ

ಕೃಷ್ಣಾ ನದಿ

ಕೃಷ್ಣಾ ನದಿ

Bagalkot Flood: ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಹೆಚ್ಚಾಗಿದೆ. ನದಿ ಪಾತ್ರದ ಕಬ್ಬು ಸೇರಿದಂತೆ ಇತರೆ ಬೆಳೆಗಳು ಸಂಪೂರ್ಣ ಜಲಾವೃತವಾಗಿದೆ. ತಗ್ಗು ಪ್ರದೇಶ ಮತ್ತು ಹೊಲ-ಗದ್ದೆಗಳಲ್ಲಿ ವಾಸವಾಗಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಲಾಗುತ್ತಿದೆ.

ಮುಂದೆ ಓದಿ ...
  • Share this:

ಬಾಗಲಕೋಟೆ (ಆ. 18): ಮಹಾರಾಷ್ಟ್ರದಲ್ಲಿ ನಾಲ್ಕೈದು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಬೆಳಗಾವಿ ಜಿಲ್ಲೆಯಲ್ಲೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹೀಗಾಗಿ, ಕೃಷ್ಣಾ ನದಿಗೆ 1.85 ಲಕ್ಷ ಕ್ಯೂಸೆಕ್ಸ್​ ನೀರು ಹರಿದುಬಂದಿದೆ. ಇದರಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.


ಬಾಗಲಕೋಟೆ ಜಿಲ್ಲೆಯ ಬನಹಟ್ಟಿ, ಜಮಖಂಡಿ ತಾಲ್ಲೂಕಿನಲ್ಲಿ ಪ್ರವಾಹ ಭೀತಿ ಹೆಚ್ಚಾಗಿದೆ. ಹಿಪ್ಪರಗಿ ಜಲಾಶಯಕ್ಕೆ 1.85 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವುದರಿಂದ ಜಮಖಂಡಿ ತಾಲೂಕಿನ ಮುತ್ತೂರ, ಮೈಗೂರ, ಶೂರ್ಪಾಲಿ, ಕಂಕಣವಾಡಿ ಗ್ರಾಮಗಳಲ್ಲಿ ಆತಂಕ ಹೆಚ್ಚಾಗಿದೆ. ನದಿಯ ದಡದಿಂದ ಪಂಪ್ ಸೆಟ್​ಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ರೈತರು ಹರಸಾಹಸ ಪಡುತ್ತಿದ್ದಾರೆ. ನದಿ ಪಾತ್ರದ ಕಬ್ಬು ಸೇರಿದಂತೆ ಇತರೆ ಬೆಳೆಗಳು ಸಂಪೂರ್ಣ ಜಲಾವೃತವಾಗಿದೆ. ನದಿ ಪಾತ್ರದ ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ.


ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಹೆಚ್ಚಾಗಿದೆ. ತಗ್ಗು ಪ್ರದೇಶ ಮತ್ತು ಹೊಲ-ಗದ್ದೆಗಳಲ್ಲಿ ವಾಸವಾಗಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ. ಬೆಳಗಾವಿಯಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ರಾಯಚೂರು, ಬಾಗಲಕೋಟೆ, ಹಾವೇರಿ, ಯಾದಗಿರಿ, ವಿಜಯಪುರ, ಧಾರವಾಡ ಮುಂತಾಧ ಜಿಲ್ಲೆಗಳ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಬೀದರ್, ಕಲಬುರ್ಗಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಇಂದು ಯೆಲ್ಲೋ ಅಲರ್ಟ್​ ನೀಡಲಾಗಿದೆ.


ಇದನ್ನೂ ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಂದು ಭಾರೀ ಮಳೆ; ಆ. 20ರವರೆಗೆ ಆರೆಂಜ್ ಅಲರ್ಟ್​


ಬಾಗಲಕೋಟೆ ಜಿಲ್ಲೆಯಲ್ಲಿ ಘಟಪ್ರಭಾ ನದಿಯ ಅಬ್ಬರ ಹೆಚ್ಚಾಗಿದೆ. ತೋಟದ ಮನೆಗಳಿಗೆ ನೀರು ನುಗ್ಗಿದ್ದು, ಪಂಪ್​ಸೆಟ್ ಗಳು ಜಲಾವೃತವಾಗಿವೆ. ಘಟಪ್ರಭಾ ನದಿ ಪಾತ್ರದ ನಂದಗಾಂವ ಗ್ರಾಮದ ಸುತ್ತ ನೀರು ಆವರಿಸುತ್ತಿದೆ. ಇದರಿಂದ ಗ್ರಾಮಸ್ಥರಿಗೆ ಆತಂಕ ಶುರುವಾಗಿದ್ದು, ಕಬ್ಬು, ಅರಿಷಿಣ, ಈರುಳ್ಳಿ ಸೇರಿದಂತೆ ಅಪಾರ ಪ್ರಮಾಣದ ಬೆಳೆ ಜಲಾವೃತವಾಗಿದೆ. ಮುಧೋಳ ತಾಲೂಕಿನ ಘಟಪ್ರಭಾ ನದಿ ತೀರದ ಗ್ರಾಮಗಳಲ್ಲಿ ಆತಂಕ ಮುಂದುವರೆದಿದೆ.


ಉತ್ತರ ಕರ್ನಾಟಕದ ಮಲಪ್ರಭಾ ನದಿಯಲ್ಲೂ ಒಳಹರಿವು ಹೆಚ್ಚಾಗಿದೆ. ಬದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದೊಳಗೆ ಮಲಪ್ರಭಾ ನದಿ ನೀರು ನುಗ್ಗಿದೆ. 20ಕ್ಕೂ ಹೆಚ್ಚು ಮನೆಗಳ ಸುತ್ತ ನೀರು ಆವರಿಸಿದೆ. ಇದರಿಂದ ಗ್ರಾಮಸ್ಥರು ಆತಂಕ್ಕೊಳಗಾಗಿದ್ದಾರೆ. ನೀರು ಸುತ್ತುವರೆದ ಮನೆಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

top videos
    First published: