HOME » NEWS » State » KARNATAKA RAIN IMD PREDICTS HEAVY RAIN ALL OVER KARNATAKA TOMORROW GNR

Karnataka Rain: ನಾಳೆಯೂ ಕರ್ನಾಟಕ ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ಇನ್ನು, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಕಲ್ಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮೂಲಗಳ ಮಾಹಿತಿ ನೀಡಿವೆ.

news18-kannada
Updated:September 9, 2020, 10:07 PM IST
Karnataka Rain: ನಾಳೆಯೂ ಕರ್ನಾಟಕ ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಸೆ.09): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜೋರು ಮಳೆಯಾಗುತ್ತಿದೆ. ನಗರದ ಮೆಜೆಸ್ಟಿಕ್, ಮತ್ತಿಕೆರೆ, ಯಶವಂತಪುರ, ಮಲ್ಲೇಶ್ವರಂ, ಹೆಬ್ಬಾಳ, ಸಂಪಿಗೆಹಳ್ಳಿ, ಯಲಹಂಕ, ಬ್ಯಾಟರಾಯನಪುರ, ಬಿಇಎಲ್, ಜಯನಗರ, ಬಸವನಗುಡಿ, ಮಾರ್ಕೆಟ್​ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನದಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಈಗ ಸಂಜೆಯಾಗುತ್ತಿದ್ದಂತೆಯೇ ಗುಡುಗು ಸಹಿತ ಭಾರೀ ಮಳೆಯಾಗಿದೆ. ಇನ್ನು ಭಾರೀ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ. ನಗರದ ಹಲವು ಕಡೆಗಳಲ್ಲಿ ಭಾರೀ ಮಳೆಗೆ ಮರಗಳು ನೆಲಕ್ಕುರುಳಿವೆ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಹಲವು ಕಡೆಗಳಲ್ಲಿ ಟ್ರಾಫಿಕ್ ಜಾಮ್‌ ಕೂಡಾ ಉಂಟಾಗಿದೆ.

ಕರ್ನಾಟಕದಲ್ಲಿ ಸುಮಾರು ಮೂರು ವಾರಗಳಿಂದ ಮಳೆ ಕೊಂಚ ಬಿಡುವು ಪಡೆದಿತ್ತು. ಇದೀಗ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು, ಮೂರ್ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ನಾಳೆಯೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಲೆನಾಡು, ಕರಾವಳಿ, ಕೊಡಗು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಇನ್ನೂ ಒಂದಷ್ಟು ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ. ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ.

Youtube Videoಇನ್ನು, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಕಲ್ಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮೂಲಗಳ ಮಾಹಿತಿ ನೀಡಿವೆ.
Published by: Ganesh Nachikethu
First published: September 9, 2020, 9:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories