Karnataka Rain: ಕರ್ನಾಟಕದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Karnataka Rain Updates: ಕರ್ನಾಟಕದಲ್ಲಿ ನಾಳೆ ಬೆಳಗ್ಗಿನವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.

Sushma Chakre | news18-kannada
Updated:August 14, 2020, 9:08 AM IST
Karnataka Rain: ಕರ್ನಾಟಕದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಮಳೆ
  • Share this:
ಬೆಂಗಳೂರು (ಆ. 14): ಕರ್ನಾಟಕ ಸೇರಿದಂತೆ ಭಾರತದ ಬಹುತೇಕ ರಾಜ್ಯಗಳಲ್ಲಿ ಇನ್ನು ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ನಾಳೆ ಬೆಳಗ್ಗಿನವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರ್ನಾಟಕದ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ಅಧಿಕಗೊಳ್ಳಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲೂ ಇಂದು ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಮೂರ್ನಾಲ್ಕು ದಿನಗಳಿಂದ ಬಿಡುವು ಪಡೆದಿದ್ದ ಮಳೆರಾಯ ಇಂದು ಮತ್ತೆ ಆರ್ಭಟಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಕೊಡಗಿನ ತಲಕಾವೇರಿ ಗಜರಾಜಗಿರಿ ಬೆಟ್ಟ ಕುಸಿತ ಪ್ರಕರಣ; 8 ದಿನವಾದರೂ ಸಿಗದ ಮೂವರ ಸುಳಿವು

ಕರ್ನಾಟಕ ಹೊರತುಪಡಿಸಿದರೆ ಮಧ್ಯಪ್ರದೇಶ, ಒಡಿಶಾ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್, ದೆಹಲಿಯಲ್ಲೂ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೆಹಲಿಯಲ್ಲಿ ನಿನ್ನೆ ಮಳೆಯ ಪ್ರಮಾಣ ಅಧಿಕವಾಗಿದ್ದು, ರಸ್ತೆಗಳೆಲ್ಲ ಹೊಳೆಗಳಂತಾಗಿತ್ತು. ಇಂದು ಕೂಡ ದೆಹಲಿಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.


ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಆದರೆ, ಈ ಹಿಂದೆ ಸುರಿದ ಮಳೆಯಿಂದ ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‍ಎಸ್, ತುಂಗಭದ್ರಾ, ಲಿಂಗನಮಕ್ಕಿ, ಆಲಮಟ್ಟಿ, ಘಟಪ್ರಭಾ, ಮಲಪ್ರಭಾ, ಕಬಿನಿ, ಹಾರಂಗಿ, ಹೇಮಾವತಿ, ವರಾಹಿ ಸೇರಿದಂತೆ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಭಾರೀ ಏರಿಕೆಯಾಗಿದೆ. ಈ ವರ್ಷ ತಡವಾಗಿ ಮಳೆಗಾಲ ಆರಂಭವಾಗಿದ್ದರೂ ಬಿಡುವಿಲ್ಲದೆ ಮಳೆ ಅಬ್ಬರಿಸಿರುವ ಕಾರಣಕ್ಕೆ ಈಗಾಗಲೇ ಹಲವು ಜಲಾಶಯಗಳು ತುಂಬುವ ಹಂತ ತಲುಪಿವೆ.
Published by: Sushma Chakre
First published: August 14, 2020, 8:56 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading