Karnataka Rain: ಕರ್ನಾಟಕ ರಾಜ್ಯಾದ್ಯಂತ ಧಾರಾಕಾರ ಮಳೆ - ಜನಜೀವನ ಅಸ್ತವ್ಯಸ್ತ

Karnataka Monsoon 2020: ಕರ್ನಾಟಕದ ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಜೋರು ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

news18-kannada
Updated:August 4, 2020, 5:22 PM IST
Karnataka Rain: ಕರ್ನಾಟಕ ರಾಜ್ಯಾದ್ಯಂತ ಧಾರಾಕಾರ ಮಳೆ - ಜನಜೀವನ ಅಸ್ತವ್ಯಸ್ತ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಆ.04): ಕರ್ನಾಟಕ ರಾಜ್ಯಾದ್ಯಂತ ಮಳೆ ಅರ್ಭಟ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜೋರು ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ.

ಅವಧಿಗೂ ಮುನ್ನವೇ ಮುಂಗಾರು ರಾಜ್ಯವನ್ನು ಪ್ರವೇಶಿಸಿತ್ತು. ಆರಂಭದಿಂದಲೂ ಸಾಧಾರಣವಾಗಿದ್ದ ಮಳೆ ಈಗ ಜೋರಾಗಿ ಸುರಿಯುತ್ತಿದೆ. ಕರಾವಳಿ ಸೇರಿದಂತೆ ಮಲೆನಾಡು, ಉತ್ತರ ಒಳನಾಡಿನಲ್ಲಿಯೂ ಮಳೆ ಹೆಚ್ಚಾಗಿದೆ. ಈಗಾಗಲೇ ಮಳೆಯಿಂದಾಗಿ ಕಂಗಾಲಾಗಿರುವ ಕರಾವಳಿ ಭಾಗದಲ್ಲಿ ಇನ್ನೂ ಎರಡು ಮೂರು ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದೆ. ಹೀಗಾಗಿ ಯಲ್ಲೋ ಅಲರ್ಟ್​ ಘೋಷಿಸಿದ್ದಾರೆ.

ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಜೋರು ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನಲ್ಲೂ ಮಳೆ ಸುರಿಯುತ್ತಿದೆ. ನಗರದ ಹೊರವಲಯ ನೆಲಮಂಗಲ ನಗರ ಸೇರಿದಂತೆ ಸುಂಕದಕಟ್ಟೆ, ಬ್ಯಾಡರಹಳ್ಳಿ, ನಾಗರಬಾವಿ, ಬನಶಂಕರಿ, ಜಯನಗರ, ಮಲ್ಲೇಶ್ವರಂ, ಮೆಜೆಸ್ಟಿಕ್​​, ಕೆ.ಆರ್​ ಮಾರ್ಕೆಟ್​, ಕೆ.ಆರ್​​ ಪುರಂ, ಟೌನ್​​ಹಾಲ್​​ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ರಭಸವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಾಗಿದೆ.

ಇದನ್ನೂ ಓದಿ: Ayodhya Ram Mandir: ರಾಮ ಎಲ್ಲರಲ್ಲೂ ಇದ್ದಾನೆ, ಅಯೋಧ್ಯೆ ಕಾರ್ಯಕ್ರಮ ದೇಶದ ಏಕತೆಗೆ ದಾರಿಯಾಗಲಿ: ಪ್ರಿಯಾಂಕಾ ಗಾಂಧಿ

ಇನ್ನು, ಆಗಸ್ಟ್ ಮತ್ತು ಸೆಪ್ಟೆಂಬರ್​​ನಲ್ಲಿ ದೇಶಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಮಳೆಗಾಲದ ನಾಲ್ಕು ತಿಂಗಳ ದ್ವಿತೀಯಾರ್ಧದಲ್ಲಿ ದೀರ್ಘಕಾಲೀನ ಸರಾಸರಿಯ ಶೇ.97ರಷ್ಟು ಮಳೆಯಾಗುವ ಸಂಭವವಿದೆ ಹವಾಮಾನ ಇಲಾಖೆ ತಿಳಿಸಿದೆ.
Published by: Ganesh Nachikethu
First published: August 4, 2020, 5:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading