HOME » NEWS » State » KARNATAKA RAIN MODERATE RAIN EXPECTED IN BENGALURU AND OTHER PLACES OF KARNATAKA TILL DECEMBER 20 SCT

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರ್ನಾಟಕದ ಹಲವೆಡೆ 2 ದಿನ ಮಳೆ ಸಾಧ್ಯತೆ

Karnataka Weather: ಇಂದಿನಿಂದ ಡಿ. 20ರವರೆಗೆ ಬೆಂಗಳೂರು, ಚಾಮರಾಜನಗರ, ಮೈಸೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರಿನಲ್ಲಿ ಮಳೆಯಾಗಲಿದೆ.

news18-kannada
Updated:December 18, 2020, 3:43 PM IST
Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರ್ನಾಟಕದ ಹಲವೆಡೆ 2 ದಿನ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಡಿ. 18): ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ಕೇರಳ, ತಮಿಳುನಾಡಿನಲ್ಲೂ ಹಲವೆಡೆ ಮಳೆಯಾಗುತ್ತಿರುವುದರಿಂದ ಅದರ ಪರಿಣಾಮವಾಗಿ ನಾಳೆಯವರೆಗೆ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲೂ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ತಮಿಳುನಾಡಿನ ಕರಾವಳಿ ತೀರದಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅದರ ಪರಿಣಾಮವಾಗಿ ಕೇರಳ ಮತ್ತು ಕರ್ನಾಟಕದ ದಕ್ಷಿಣ ಮತ್ತು ಕರಾವಳಿ ಭಾಗದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ, ಇನ್ನೆರಡು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಇಂದಿನಿಂದ ಡಿ. 20ರವರೆಗೆ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಮಿಳುನಾಡಿನ ಗಡಿಯಲ್ಲಿರುವ ಬೆಂಗಳೂರು, ಚಾಮರಾಜನಗರ, ಮೈಸೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರಿನಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರಿಯಲಿದೆ. ಇಂದು ಕರ್ನಾಟಕದ ಹಲವು ಕಡೆ ಹಗುರವಾದ ಮಳೆ, ಇನ್ನೂ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಬೀಳುವ ಸಾಧ್ಯತೆಯಿದೆ.

ಇದನ್ನೂ ಓದಿ: ಮುಷ್ಕರ ನಡೆಸಿದ್ದ ಸಾರಿಗೆ ನೌಕರರಿಗೆ ಶಾಕ್; 200ಕ್ಕೂ ಹೆಚ್ಚು ಸಿಬ್ಬಂದಿಗೆ ನೋಟೀಸ್, ಹಲವರ ಅಮಾನತು!

ತಮಿಳುನಾಡು, ಪುದುಚೆರಿ ಮತ್ತು ಕಾರೈಕಾಲ್​ನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಡಿಸೆಂಬರ್ 22ರವರೆಗೂ ಮಳೆ ಮುಂದುವರಿಯಲಿದೆ. ಜೊತೆಗೆ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರ ಪ್ರದೇಶದಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Youtube Video

ಉತ್ತರ ಭಾರತದಲ್ಲೂ ಶೀತಗಾಳಿ ಬೀಸುತ್ತಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಇಂದು ವಿಪರೀತ ಚಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ನಾಳೆಯವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆಯೂ ಇದೆ.
Published by: Sushma Chakre
First published: December 18, 2020, 3:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories