Monsoon 2020: ಬೆಂಗಳೂರು (ಜು.8): ಜೂನ್ ತಿಂಗಳಲ್ಲಿ ಅಂದುಕೊಂಡ ಮಟ್ಟಿಗೆ ಮಳೆ ಆಗಿರಲಿಲ್ಲ. ಜೂನ್ ಅವಧಿಯಲ್ಲಿ ಶೇ.25-40 ರಷ್ಟು ಮಳೆಯ ಕೊರತೆ ಆಗಿದೆ ಎಂದು ತಜ್ಞರು ಹೇಳಿದ್ದರು. ಈಗ ಮಾನ್ಸೂನ್ ಚುರುಕಾಗಿದೆ. ಕರಾವಳಿ ಹಾಗೂ ಮಲೆನಾಡ ಭಾಗದಲ್ಲಿ ಮಳೆ ಮುಂದುವರಿದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಮೋಡದ ಕವಿದ ವಾತಾವರಣ ಇದೆ.
ದಕ್ಷಿಣ ಕನ್ನಡ, ಮಂಗಳೂರು, ಬೆಳ್ತಂಗಡಿ, ಉಡುಪಿ, ಕುಮಟ, ಕಾರವಾರ, ಶಿರಸಿ, ಸಾಗರ ಹಾಗೂ ಶಿವಮೊಗ್ಗ ಭಾಗದಲ್ಲಿ ಸಾಧಾರಣ ಮಳೆ ಆಗುತ್ತಿದೆ. ಆಗಾಗ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಹೀಗಾಗಿ, ಕೃಷಿ ಚಟುವುಟಿಕೆಗೆ ಚುರುಕು ಸಿಕ್ಕಿದ್ದು, ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಇನ್ನು, ಉತ್ತರ ಕರ್ನಾಟಕ ಭಾಗದಲ್ಲಿ ಮೋಡ ಕವಿದ ವಾತಾವರಣ ಇದೆ. ಬೆಳಗಾವಿ ಸೇರಿ ಕೆಲವು ಭಾಗಗಳಲ್ಲಿ ತುಂತುರು ಮಳೆ ಆಗುತ್ತಿದೆ.
ಭಾನುವಾರದವರೆಗೂ ಮುಂದುವರಿಯಲಿದೆ ಮಳೆ:
ಇಂದಿನಿಂದ 5 ದಿನಗಳ ಕಾಲ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೇ ಕೊನೆಯಲ್ಲಿ ಹಾಗೂ ಜೂನ್ ಆರಂಭದಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು. ಆದರೆ ನಂತರದ ಅವಧಿಯಲ್ಲಿ ಬಿಸಿಲು ಕಾಣಿಸಿಕೊಂಡಿತ್ತು. ಇದು ರೈತರನ್ನು ಮತ್ತಷ್ಟು ಚಿಂತೆಗೀಡು ಮಾಡಿತ್ತು. ಆದರೆ, ಈಗ ಮತ್ತೆ ಮಳೆ ಆಗುತ್ತಿರುವದರಿಂದ ರೈತರಲ್ಲಿ ಆಶಾಭಾವ ಮೂಡಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ