Karnataka Rain: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ; ದಕ್ಷಿಣ ಕನ್ನಡದಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ ನೇತ್ರಾವತಿ

Mangalore Rain: ದಕ್ಷಿಣ ಕನ್ನಡದಲ್ಲಿ ಮಳೆಯಿಂದ ಕುಮಾರಧಾರಾ ಮತ್ತು ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ನೀರಿನ ಹೆಚ್ಚಳದಿಂದಾಗಿ ಉಪ್ಪಿನಂಗಡಿ, ನಟ್ಟಿಬೈಲು ಮೊದಲಾದ ಪ್ರದೇಶಗಳ ಕೃಷಿಭೂಮಿಗೂ ಪ್ರವಾಹದ ನೀರು ಹರಿಯಲಾರಂಭಿಸಿದೆ. ಬಂಟ್ವಾಳದಲ್ಲೂ ನೇತ್ರಾವತಿ ನದಿ ತನ್ನ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ.

news18-kannada
Updated:August 8, 2020, 11:35 AM IST
Karnataka Rain: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ; ದಕ್ಷಿಣ ಕನ್ನಡದಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ ನೇತ್ರಾವತಿ
ತುಂಬಿ ಹರಿಯುತ್ತಿರುವ ನೇತ್ರಾವತಿ ನದಿ
  • Share this:
ಮಂಗಳೂರು (ಆ. 8): ಕರಾವಳಿಯಾದ್ಯಂತ ಮಳೆ ಇಂದೂ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ಸಂಗಮ ಸ್ಥಾನವಾಗ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ 30 ಮೀಟರ್ ಆಗಿದ್ದು, ಇದೀಗ 30 ಮೀಟರ್ ಗಿಂತಲೂ ಹೆಚ್ಚಿನ ಎತ್ತರದಲ್ಲಿ ನೀರು ಹರಿಯುತ್ತಿದೆ.

ನೀರಿನ ಹೆಚ್ಚಳದಿಂದಾಗಿ ಉಪ್ಪಿನಂಗಡಿ, ನಟ್ಟಿಬೈಲು ಮೊದಲಾದ ಪ್ರದೇಶಗಳ ಕೃಷಿಭೂಮಿಗೂ ಪ್ರವಾಹದ ನೀರು ಹರಿಯಲಾರಂಭಿಸಿದೆ. ಬಂಟ್ವಾಳದಲ್ಲೂ ನೇತ್ರಾವತಿ ನದಿ ತನ್ನ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಈ ಭಾಗದಲ್ಲಿ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಇದೀಗ ನದಿ 9 ಮೀಟರ್ ಗೂ ಹೆಚ್ಚಿನ ಎತ್ತರದಲ್ಲಿ ಹರಿಯುತ್ತಿದೆ. ಇದರಿಂದಾಗಿ ಪಾಣೆ ಮಂಗಳೂರು, ಗೂಡಿನ ಬಳಿ ಮೊದಲಾದ ಕಡೆಗಳಲ್ಲಿ ನೀರು ವಸತಿ ಪ್ರದೇಶಗಳಿಗೆ ನುಗ್ಗುತ್ತಿವೆ. ಕುಮಾರಧಾರಾ ನದಿಯಲ್ಲಿ ನೀರಿನ ಹರಿವಿನಲ್ಲಿ ಕೊಂಚ ಇಳಿಮುಖವಾಗಿದ್ದರೂ, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸತತ ಆರನೇ ದಿನವೂ ಮುಳುಗಡೆಯಾಗಿದೆ.

ಇದನ್ನೂ ಓದಿ: Chikmagalur Rain: ಚಿಕ್ಕಮಗಳೂರಲ್ಲಿ ಭಾರೀ ಮಳೆ; ಹೆಬ್ಬಾಳೆ ಸೇತುವೆ ಮುಳುಗಡೆ; ಆ. 11ರವರೆಗೆ ಚಾರ್ಮಾಡಿ ಘಾಟ್ ಬಂದ್

ಸುಬ್ರಹ್ಮಣ್ಯ ಪರಿಸರದಲ್ಲಿ ಇದೀಗ ಮಳೆ ಪ್ರಮಾಣ ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಕ್ಷೀಣಿಸಿದೆ. ಚಾರ್ಮಾಡಿ ಘಾಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿ ಸುರಿಯುತ್ತಿರುವ ಹಿನ್ನಲೆಯಲ್ಲಿ ಚಾರ್ಮಾಡಿಯ ಮೃತ್ಯುಂಜಯ ಹೊಳೆ ರಭಸದಿಂದ ಹರಿಯಲಾರಂಭಿಸಿದೆ. ಕೊಳಂಬೆ, ಚಾರ್ಮಾಡಿ ಪ್ರದೇಶಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಕೊಳಂಬೆ ಪ್ರದೇಶದಲ್ಲಿ ಸುಮಾರು 15ಕ್ಕೂ ಮಿಕ್ಕಿದ ಮನೆಗಳು ಜಲಾವೃತಗೊಂಡಿದೆ. ಕಳೆದ ಬಾರಿ ರುದ್ರನರ್ತನ ತೋರಿದ್ಧ ಮೃತ್ಯುಂಜಯ ಹೊಳೆ ಈ ಬಾರಿಯೂ ಪ್ರವಾಹದ ರೀತಿಯಲ್ಲಿ ಹರಿಯುತ್ತಿದೆ. ಹೊಳೆಯ ತೀರದಲ್ಲಿ ನೂತನವಾಗಿ ಕಟ್ಟಿದ್ದ ತಡೆಗೋಡೆಯನ್ನೂ ಪ್ರವಾಹದ ನೀರು ಕೊಚ್ಚಿಕೊಂಡು ಹೋಗಿವೆ.

ದಕ್ಷಿಣ ಕನ್ನಡ ಜಿಲ್ಲೆಗೆ ಚಿಕ್ಕಮಗಳೂರಿನ ಮೂಡಿಗೆರೆಯಿಂದ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್​ನಲ್ಲಿ ಬಿರುಕು ಮೂಡಿದೆ. ಅಲ್ಲಲ್ಲಿ ಗುಡ್ಡಗಳೂ ಕುಸಿದಿರುವ ಹಿನ್ನೆಲೆಯಲ್ಲಿ ಆ. 11ರವರೆಗೆ ಚಾರ್ಮಾಡಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ದಕ್ಷಿಣ ಕನ್ನಡಕ್ಕೆ ಹಾಸನದಿಂದ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್​ ಮೂಲಕ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
Published by: Sushma Chakre
First published: August 8, 2020, 11:20 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading