Karnataka Rain: ಭಾರೀ ಮಳೆಯಿಂದ ಮಲೆನಾಡು, ಹಾಸನ, ಕೊಡಗು, ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ

Monsoon 2020: ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್​ ನೀಡಲಾಗಿದೆ. ಬೆಳಗಾವಿ, ಹಾವೇರಿ, ಬೀದರ್, ಕಲಬುರ್ಗಿಯಲ್ಲಿ ಇಂದು ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಆ. 17): ಇಂದಿನಿಂದ ಕರ್ನಾಟಕದ ನಾನಾ ಕಡೆ ಭಾರೀ ಮಳೆಯಾಗಲಿದೆ. ಹೀಗಾಗಿ, ಹವಾಮಾನ ಇಲಾಖೆ ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ. ಕೊಡಗು, ಹಾಸನ, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಆ. 20ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್​ ಇಂದಿನಿಂದ ಆ. 20ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆ. 21ರ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka Dam Water Level: ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ರಾಜ್ಯಾದ್ಯಂತ ಈಗಾಗಲೇ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮಾನ್ಸೂನ್ ಚುರುಕಾಗಿದೆ. ಈ ಭಾಗದಲ್ಲಿ ಇಂದು ಮತ್ತು ನಾಳೆ ಬಹುತೇಕ ಎಲ್ಲ ಸ್ಥಳಗಳಲ್ಲಿಯೂ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆ ಚುರುಕಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ 23, ಆಗುಂಬೆಯಲ್ಲಿ ‌17 ಹಾಗೂ ಭಟ್ಕಳದಲ್ಲಿ 15 ಸೆಂಮೀ ಮಳೆಯಾಗಿದೆ. ಆಗಸ್ಟ್​ 18ರಿಂದ 21ರವರೆಗೆ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಲಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಬೀದರ್, ಕಲಬುರ್ಗಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಇಂದು ಯೆಲ್ಲೋ ಅಲರ್ಟ್​ ನೀಡಲಾಗಿದೆ. ನಾಳೆ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಆ. 19ರ ಬಳಿಕ ಇಲ್ಲಿ ಮಳೆಯ ಪ್ರಮಾಣ ತಗ್ಗಲಿದೆ. ಒಟ್ಟಾರೆ ಆ. 21ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.
Published by:Sushma Chakre
First published: