Karnataka Rain: ಬೆಂಗಳೂರು, ಹಾಸನ, ಮಂಡ್ಯ, ಮಲೆನಾಡು, ಕರಾವಳಿಯಲ್ಲಿ ಇಂದು ಮಳೆ ಸಾಧ್ಯತೆ

Karnataka Weather: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದು ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು (ನ. 8): ರಾಜ್ಯಾದ್ಯಂತ ಮಳೆಯ ಅಬ್ಬರ ಕೊಂಚ ಕಡಿಮೆಯಾಗುತ್ತಿದೆ. ಆದರೂ ಆಗೀಗ ಕೆಲವೆಡೆ ಹಿಂಗಾರು ಮಳೆಯ ದರ್ಶನವಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದು ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

  ಇಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ನ. 9 ಮತ್ತು 10ರಂದು ರಾಜ್ಯದ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ.

  ಇದನ್ನೂ ಓದಿ: ಪ್ರತಿ ಮಳೆಗಾಲದಲ್ಲಿ ಹೆಬ್ಬಾಳೆ ಸೇತುವೆ ಮುಳುಗಡೆ; 2 ದಶಕದಿಂದ ನಿಂತಿಲ್ಲ ಕಳಸದ ಜನರ ಗೋಳು

  ಕರ್ನಾಟಕದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದ್ದು, ಡಿಸೆಂಬರ್ ತಿಂಗಳ ಅಂತ್ಯದವರೆಗೂ ಆಗಾಗ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಇನ್ನೂ ಮಳೆಯಾಗುತ್ತಿದೆ. ಅದರ ಪರಿಣಾಮವಾಗಿ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಇಂದು ಸಂಜೆಯವರೆಗೂ ಬೆಂಗಳೂರು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.  ತಮಿಳುನಾಡಿನ ಕೆಲವು ಪ್ರದೇಶಗಳಲ್ಲಿ ನಾಳೆಯವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 11ರವರೆಗೂ ತಮಿಳುನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಚೆನ್ನೈ ಸುತ್ತಮುತ್ತಲೂ ನಿರಂತರ ಮಳೆಯಾಗಿದೆ. ಇಂದು ತಮಿಳುನಾಡಿನ ತಂಜಾವೂರು, ತಿರುವಾರೂರು, ರಾಮನಾಥಪುರಂ, ಪುದುಕೊಟ್ಟೈ, ನಾಗಪಟ್ಟಣಂ ಜಿಲ್ಲೆಗಳಲ್ಲಿ ಮಳೆ ಹೆಚ್ಚಳವಾಗಲಿದೆ.
  Published by:Sushma Chakre
  First published: