HOME » NEWS » State » KARNATAKA RAIN RAIN WITH THUNDERSTORM EXPECTED YELLOW ALERT IN KARNATAKA TILL SEPTEMBER 9TH SCT

Karnataka Rain: ಕರ್ನಾಟಕದಲ್ಲಿ ಇಂದಿನಿಂದ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆ

Karnataka Weather Today: ಇಂದಿನಿಂದ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮಳೆಗೆ ಪೂರಕವಾದ ವಾತಾವರಣ ಸೃಷ್ಟಿಯಾಗಲಿದೆ. ಹೀಗಾಗಿ, ಸೆ. 9ರವರೆಗೆ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ.

Sushma Chakre | news18-kannada
Updated:September 6, 2020, 8:41 AM IST
Karnataka Rain: ಕರ್ನಾಟಕದಲ್ಲಿ ಇಂದಿನಿಂದ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಸೆ. 6): ಕರ್ನಾಟಕದಲ್ಲಿ ಸುಮಾರು 15 ದಿನಗಳಿಂದ ಮಳೆ ಕೊಂಚ ಬಿಡುವು ಪಡೆದಿತ್ತು. ಇದೀಗ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು, ಮೂರ್ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಇಂದಿನಿಂದ ಸೆ. 9ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದೆ. ಇಂದಿನಿಂದ 4 ದಿನಗಳ ಕಾಲ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಸೆ. 10ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್​ ಘೋಷಿಸಿದೆ.

ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ತುಮಕೂರು, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 9ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Drug Mafia: ಡ್ರಗ್ ಮಾಫಿಯಾ ತನಿಖೆ ಯಾರ್ಯಾರ ಮನೆ ಬಾಗಿಲಿಗೆ ಹೋಗುತ್ತೋ ಗೊತ್ತಿಲ್ಲ; ಸಚಿವ ಸಿ.ಟಿ. ರವಿ

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತಿದೆ. ಇಂದಿನಿಂದ ಆ ಪ್ರದೇಶಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ಆಲಮಟ್ಟಿ ಜಲಾಶಯದಲ್ಲಿ ನೀರು ಭರ್ತಿಯಾಗಿದ್ದು, ಎಲ್ಲ ಗೇಟುಗಳನ್ನು ತೆರೆಯಲಾಗಿದೆ. ತುಂಗಾ ಜಲಾಶಯ ಕೂಡ ಭರ್ತಿಯಾಗಿದೆ. ರಾಜ್ಯದ ಉಳಿದ ಡ್ಯಾಂಗಳಲ್ಲಿಯೂ ನೀರಿನ ಪ್ರಮಾಣ ಹೆಚ್ಚಾಗಿದೆ. ನಿನ್ನೆ ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಉತ್ತಮ ಮಳೆಯಾಗಿದೆ.
Youtube Video

ಇಂದಿನಿಂದ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮಳೆಗೆ ಪೂರಕವಾದ ವಾತಾವರಣ ಸೃಷ್ಟಿಯಾಗಲಿದೆ. ಹೀಗಾಗಿ, ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಸೆ. 9ರವರೆಗೆ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮಲೆನಾಡು, ಕರಾವಳಿಯಲ್ಲಿ ಬೇರೆ ಜಿಲ್ಲೆಗಳಿಗಿಂತ ಮಳೆ ಹೆಚ್ಚಾಗಲಿದೆ.
Published by: Sushma Chakre
First published: September 6, 2020, 8:36 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories