Karnataka Weather: ಕೊಡಗಿನಲ್ಲಿ ಮುಂದುವರಿದ ಭಾರೀ ಮಳೆ; ರೆಡ್​ ಅಲರ್ಟ್​ ಘೋಷಣೆ

ಕೊಡಗಿನ ಮಳೆ

ಕೊಡಗಿನ ಮಳೆ

ನಿನ್ನೆ ರಾತ್ರಿಯಿಂದ ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದು ಜನರಲ್ಲಿ ಆತಂಕ ಸೃಷ್ಟಿಸಿದೆ.  ಹವಾಮಾನ ಇಲಾಖೆ ಸೆಪ್ಟೆಂಬರ್​ 21ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. 21 ಹಾಗೂ 22 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ.

  • Share this:

ಬೆಂಗಳೂರು (ಸೆ. 19): ಆಗಸ್ಟ್​ ತಿಂಗಳಲ್ಲಿ ಅಬ್ಬರಿಸಿದ ಮಳೆ ಬಳಿಕ ಕಡಿಮೆಯಾಗಿತ್ತು. 15-20 ದಿನಗಳಿಂದ ಇಳಿಮುಖವಾಗಿದ್ದ ಮಳೆ ಮತ್ತೆ ತನ್ನ ಆರ್ಭಟವನ್ನು ಆರಂಭಿಸಿದೆ. ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮುಂದಿನ ಕೆಲ ದಿನಗಲ ಕಾಲ ರಾಜ್ಯದ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಭಾಗದಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದೆ.  ನಿನ್ನೆ ರಾತ್ರಿಯಿಂದ ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದು ಜನರಲ್ಲಿ ಆತಂಕ ಸೃಷ್ಟಿಸಿದೆ.  ಹವಾಮಾನ ಇಲಾಖೆ ಸೆಪ್ಟೆಂಬರ್​ 21ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. 21 ಹಾಗೂ 22 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ನದಿ ಪಾತ್ರದ ಮತ್ತು ಬೆಟ್ಟ ಪ್ರದೇಶಗಳ ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.


ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆ ಆಗಲಿದೆ. ಹಾಸನ, ಕೋಲಾರ, ಮಂಡ್ಯ, ಮೈಸೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೆಂಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ನಿರೀಕ್ಷೆ ಇದೆ.


ಇಂದಿನಿಂದ ಸೆ. 11ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅತ್ಯಧಿಕ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಧಾರಾವಾಡ, ಗದಗದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ರಾಜ್ಯದ 10 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ನಾಳೆ ಮತ್ತು ಶನಿವಾರ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.

top videos
    First published: