ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ: ಅಧಿಕಾರಿಗಳಿಗೆ ಸಚಿವ ಗೋಪಾಲಯ್ಯ ಸೂಚನೆ

ಇನ್ನು, ಮಲೆನಾಡಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ಇಲ್ಲದೆ ಗ್ರಾಮಸ್ಥರ ಪರದಾಟ ನಡೆಸುತ್ತಿದ್ದಾರೆ. ಭಾರಿ ಮಳೆಗೆ ಸಕಲೇಶಪುರದ ರೈಲ್ವೆ ನಿಲ್ದಾಣದಲ್ಲಿರುವ ಆರ್​​​​ಪಿಎಫ್​​ ಸ್ಟೇಷನ್​ಗೆ ಮಳೆ ನೀರು ನುಗ್ಗಿದೆ.

news18-kannada
Updated:August 7, 2020, 3:44 PM IST
ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ: ಅಧಿಕಾರಿಗಳಿಗೆ ಸಚಿವ ಗೋಪಾಲಯ್ಯ ಸೂಚನೆ
ಹೇಮಾವತಿ ಜಲಾಶಯ
  • Share this:
ಹಾಸನ(ಆ.07): ನದಿಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದೆ. ಹಲವಾರು ಜಿಲ್ಲೆಯ ರೈತರು ನೀರು ಬಿಡಿ ಎನ್ನುತ್ತಿದ್ದಾರೆ. ಹೀಗಾಗಿ ಈ ಕೂಡಲೇ ಹೇಮಾವತಿ ಅಣೆಕಟ್ಟೆಯಿಂದ ನಾಲೆಗೆ ನೀರು ಹರಿಸಿ ಎಂದು ಹಾಸನ ಉಸ್ತುವಾರಿ ಸಚಿವ ಗೋಪಾಲಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಧಿಕಾರಿಗಳ ಜೊತೆ ಮಳೆ‌ ಸಂಬಂಧ ಹಾನಿ ಕುರಿತಂತೆ ಸಭೆ ನಡೆಸಿದ ನಂತರ ಅವರು ಮಾತನಾಡಿದರು. ಗುಡ್ಡಕುಸಿಯುವುದು, ನೀರು ಹೆಚ್ಚು ಬರುವ ಸ್ಥಳಗಳಿದ್ದರೆ ಕೂಡಲೇ ಜನರನ್ನು ಸ್ಥಳಾಂತರಿಸಲು ಸೂಚಿಸಿದ್ದೇನೆ. ಬೆಳೆ ನಷ್ಟ, ಜೀವಹಾನಿ, ಮನೆ ಬಿದ್ದು ಹೋಗಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮನೆ ಕಳೆದುಕೊಂಡವರಿಗೆ ತಕ್ಷಣ ಹತ್ತು ಸಾವಿರ ಹಣ ನೀಡಿ, ವರದಿ ಬಂದ ನಂತರ ಮತ್ತಷ್ಟು ಪರಿಹಾರ ನೀಡಲಾಗುವುದು. ಇಂದು ನಾಳೆ ಇದ್ದು ಕೆಲವು ಸ್ಥಳಗಳಿಗೆ ನಾನೇ ಖುದ್ದು ಭೇಟಿ ನೀಡುತ್ತೇನೆ. ಸಮಸ್ಯೆ ಸರಿಪಡಿಸಲು ಸೂಚಿಸಿದ್ದೇನೆ. ಜಿಲ್ಲೆಯ ಜನರ ಕಷ್ಟಗಳಿಗೆ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಇದುವರೆಗೂ 960 ಕ್ಕೂ ಹೆಚ್ವು ಮನೆ ಬಿದ್ದಿದೆ. ಓರ್ವ ಮಳೆಯಿಂದ ಸಾವನ್ನಪ್ಪಿದ್ದಾರೆ. 2100 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಜೋಳದ ಬೆಳೆ ನಷ್ಟವಾಗಿದೆ. 779ಹೆಕ್ಟೇರ್ ಪ್ರದೇಶದಲ್ಲಿ ಭತ್ತನಾಶವಾಗಿದೆ.  ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇನೆ ಎಂದರು.

Karnataka Rain Updates: ರಾಜ್ಯಾದ್ಯಂತ ಇಂದು ವ್ಯಾಪಕ ಮಳೆ: ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಜನರು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣವಾಗಿದೆ.

ಬೇಲೂರು ತಾಲ್ಲೂಕಿನಲ್ಲಿರುವ ಯಗಚಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹೀಗಾಗಿ  ಐದು ಕ್ರಸ್ಟ್ ಮೂಲಕ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಯಗಚಿ ಜಲಾಶಯಕ್ಕೆ ಐದು ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಾಗಿದೆ. ಅಷ್ಟೇ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ನಾಳೆ ಯಗಚಿ, ವಾಟೆಹೊಳೆ ಜಲಾಶಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಬಾಗಿನ ಅರ್ಪಿಸಲಿದ್ದಾರೆ.ಇನ್ನು, ಮಲೆನಾಡಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ಇಲ್ಲದೆ ಗ್ರಾಮಸ್ಥರ ಪರದಾಟ ನಡೆಸುತ್ತಿದ್ದಾರೆ. ಭಾರಿ ಮಳೆಗೆ ಸಕಲೇಶಪುರದ ರೈಲ್ವೆ ನಿಲ್ದಾಣದಲ್ಲಿರುವ ಆರ್​​​​ಪಿಎಫ್​​ ಸ್ಟೇಷನ್​ಗೆ ಮಳೆ ನೀರು ನುಗ್ಗಿದೆ.

ಹೇಮಾವತಿ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಎಚ್ಚರಿಕೆ

ಸಕಲೇಶಪುರ ಪುರಸಭೆಯಿಂದ ಹೊಳೆಮಲ್ಲೇಶ್ವರ ದೇವಸ್ಥಾನ ಬಳಿ ಹಗ್ಗ ಕಟ್ಟಿ ಸೂಚನಾ ಫಲಕ ಅಳವಡಿಸಲಾಗಿದೆ. ಈಗಾಗಲೇ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಹೊಳೆಮಲ್ಲೇಶ್ವರ ದೇವಾಲಯದ ಕಾಂಪೌಂಡ್ ಸಂಪೂರ್ಣ ನೀರಿನಿಂದ ಆವೃತವಾಗಿದೆ. ದೇವರ ದರ್ಶನಕ್ಕೆ ಬರುವವರು ನದಿ ಪಕ್ಕ ತೆರಳಿ ಸೆಲ್ಫಿ ತೆಗೆದುಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕುತ್ತಾರೆ. ಈ ಹಿನ್ನೆಲೆಯಲ್ಲಿ ದೇವಾಲಯದ ಬಳಿ ನದಿಯ ಹತ್ತಿರ ತೆರಳದಂತೆ ಸೂಚನಾಫಲಕ ಅಳವಡಿಸಲಾಗಿದೆ.
Published by: Latha CG
First published: August 7, 2020, 3:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading