ರಭಸದಿಂದ ತುಂಬಿ ಹರಿಯುವ ಹಳ್ಳ- ಕೊಳ್ಳಗಳನ್ನು ದಾಟದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ಹುಬ್ಬಳ್ಳಿ ಜಿಲ್ಲಾಧಿಕಾರಿ

ನೀರು ಇಳಿಮುಖವಾಗುವವರೆಗೂ ತಾಳ್ಮೆಯಿಂದ ಇರಬೇಕು. ಅವಶ್ಯಕ ಸಂದರ್ಭದಲ್ಲಿ ಸ್ಥಳೀಯ ಸ್ವಯಂ ಸೇವಕರು, ಅತಿವೃಷ್ಟಿ ನಿರ್ವಹಣಾ ಸಿಬ್ಬಂದಿಯ ನೆರವು ಪಡೆಯಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

news18-kannada
Updated:August 9, 2020, 2:56 PM IST
ರಭಸದಿಂದ ತುಂಬಿ ಹರಿಯುವ ಹಳ್ಳ- ಕೊಳ್ಳಗಳನ್ನು ದಾಟದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ಹುಬ್ಬಳ್ಳಿ ಜಿಲ್ಲಾಧಿಕಾರಿ
ಸಾಂದರ್ಭಿಕ ಚಿತ್ರ
  • Share this:
ಹುಬ್ಬಳ್ಳಿ(ಆ.09): ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ  ಹಿರೇಕೆರೆ ನೀರಿನ ಸೆಳವಿನಲ್ಲಿ ತೇಲಿ ಹೋಗಿದ್ದ, 8 ವರ್ಷದ ಬಾಲಕಿ ಶ್ರೀದೇವಿ ಹನುಮಂತಪ್ಪ ಗಾಣಿಗೇರ ಅವರ ದೇಹ ಗ್ರಾಮದ ಸುಮಾರು ಒಂದೂವರೆ ಕಿ. ಮೀ. ಅಂತರದಲ್ಲಿ ಪತ್ತೆಯಾಗಿದೆ.

ಆಗಸ್ಟ್ 6 ರಂದು ಈ ಬಾಲಕಿ ನೀರಿನ ಸೆಳವಿಗೆ ಸಿಕ್ಕು ತೇಲಿ ಹೋಗಿದ್ದಳು. ಅಂದಿನಿಂದ ನಿರಂತರವಾಗಿ ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಿದ್ದರು. ಬಾಲಕಿಯ ದೇಹ ಪತ್ತೆಯಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಬಾಲಕಿಯ ಕುಟುಂಬಕ್ಕೆ ಶೀಘ್ರವೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಆತುರದ ನಿರ್ಧಾರ ಬೇಡ
ಮಳೆಗಾಲದ ಸಂದರ್ಭದಲ್ಲಿ ಸಾರ್ವಜನಿಕರು , ಗ್ರಾಮೀಣ ಭಾಗದ ನಿವಾಸಿಗಳು ತುಂಬಿ ಹರಿಯುವ ಹಳ್ಳ- ಕೊಳ್ಳಗಳನ್ನು ರಭಸದ ಸಂದರ್ಭದಲ್ಲಿ ದಾಟಲು ಆತುರ ಪಡಬಾರದು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ನೀರು ಇಳಿಮುಖವಾಗುವವರೆಗೂ ತಾಳ್ಮೆಯಿಂದ ಇರಬೇಕು. ಅವಶ್ಯಕ ಸಂದರ್ಭದಲ್ಲಿ ಸ್ಥಳೀಯ ಸ್ವಯಂ ಸೇವಕರು, ಅತಿವೃಷ್ಟಿ ನಿರ್ವಹಣಾ ಸಿಬ್ಬಂದಿಯ ನೆರವು ಪಡೆಯಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇನ್ನಾದರೂ ಲೆಕ್ಕ ಕೊಡ್ತೀರಾ?; ಡಿಸಿಎಂ ಕಾರಜೋಳ, ಸಚಿವರ ಮುಂದೆ ಸಾಲುಸಾಲು ಪ್ರಶ್ನೆಯಿಟ್ಟ ಸಿದ್ದರಾಮಯ್ಯ

ಗ್ರಾಮ ಪಂಚಾಯತಿ ಚುನಾವಣೆಗೆ ಮತದಾರ ಕರಡು ಪಟ್ಟಿ ಪ್ರಕಟ: ಅಗಸ್ಟ್ 14ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ.

ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020 ರ ಮತದಾರ ಕರಡು ಪಟ್ಟಿ ತಯಾರಿಸಿ ಪ್ರಕಟಿಸಲಾಗಿದೆ. ಜಿಲ್ಲಾಧಿಕಾರಿ , ಉಪ ವಿಭಾಗಾಧಿಕಾರಿ , ತಹಶೀಲ್ದಾರ, ತಾಲೂಕ ಪಂಚಾಯತ , ಗ್ರಾಮ ಪಂಚಾಯತ ಕಾರ್ಯಾಲಯಗಳಲ್ಲಿ ಹಾಗೂ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಸಾರ್ವಜನಿಕರು ಹಾಗೂ ಮತದಾರರ ವೀಕ್ಷಣೆಗೆ ಕರಡು ಪ್ರತಿಯನ್ನು ಇರಿಸಲಾಗಿದೆ.ಪ್ರಕಟ ಪಡಿಸಲಾದ ಕರಡು ಮತದಾರರ ಪಟ್ಟಿಯ ಬಗ್ಗೆ ಆಕ್ಷೇಪಣೆಗಳನ್ನು ಅಗಸ್ಟ್ 14 ರೊಳಗೆ ಮತದಾರರು ಹೆಸರು, ವಾಸವಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಇರದ ಬೇರೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಆ ಬಗ್ಗೆ ಆಕ್ಷೇಪಣೆಗಳನ್ನು ಸಂಬಂಧಪಟ್ಟ ತಹಶೀಲ್ದಾರರಿಗೆ ಸಲ್ಲಿಸಬಹುದು. ನಗರ ಪ್ರದೇಶದ ಮತದಾರರ ಹೆಸರು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೆ ಇರುವ ಹೆಸರುಗಳನ್ನು ಗ್ರಾಮ ಪಂಚಾಯತಿಗೆ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ.

ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಅಂತಿಮ ಮತದಾರ ಪಟ್ಟಿಗಳನ್ನು ಅಗಸ್ಟ್‌ 31 ರಂದು ಪ್ರಕಟ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Published by: Latha CG
First published: August 9, 2020, 2:44 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading