ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಬಸವರಾಜ ಬೊಮ್ಮಾಯಿ

ಕಳೆದ ಭಾರಿ ಕೂಡಲ ಮಠದಲ್ಲಿ ನೀರು ನುಗ್ಗಿತ್ತು. ಹಾಗಾಗಿ ಸಾರ್ವಜನಿಕರ ರಕ್ಷಣೆಗೆ ಪೂರ್ವಭಾವಿ ವ್ಯವಸ್ಥೆ ಕೈಗೊಳ್ಳಲಾಗುವುದು ಹಾಗೂ ಇಲ್ಲಿಗೆ ಒಂದು ಎಸ್.ಡಿ.ಆರ್.ಎಫ್. ತಂಡ ಕಳುಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

news18-kannada
Updated:August 9, 2020, 3:04 PM IST
ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಬಸವರಾಜ ಬೊಮ್ಮಾಯಿ
ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
  • Share this:
ಹಾವೇರಿ(ಆ.09): ಹಾವೇರಿ  ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ ತಕ್ಷಣವೇ ರೂ.10 ಸಾವಿರ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ  ಹೇಳಿದರು.

ಇಂದು ಹಾನಗಲ್ ತಾಲೂಕು ಕೂಡಲ ಹಾಗೂ ಸವಣೂರ ತಾಲೂಕು ಕುಣಿಮೆಳ್ಳಿಹಳ್ಳಿ ಗ್ರಾಮಗಳ ಮಳೆ ಹಾಗೂ ಪ್ರವಾಹದಿಂದ ಸಂಭವಿಸಿದ ಹಾನಿಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಆಗಸ್ಟ್ ತಿಂಗಳು ವಾಡಿಕೆ ಮಳೆಗಿಂತ ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಗಾಳಿ ಕೂಡ ಹೆಚ್ಚಾಗಿ ಬೀಸುತ್ತಿದೆ. ಕರಾವಳಿಯಲ್ಲಿ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಉಂಟಾಗಿದೆ ಎಂದರು.

ರಭಸದಿಂದ ತುಂಬಿ ಹರಿಯುವ ಹಳ್ಳ- ಕೊಳ್ಳಗಳನ್ನು ದಾಟದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ಹುಬ್ಬಳ್ಳಿ ಜಿಲ್ಲಾಧಿಕಾರಿ

ಶಿಗ್ಗಾಂವ, ಸವಣೂರ ಹಾಗೂ ಹಾನಗಲ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮನೆಗಳು ಭಾಗಶಃ ಹಾಗೂ ಪೂರ್ಣ ಪ್ರಮಾಣದಲ್ಲಿ ಬಿದ್ದಿವೆ. ಗೋವಿನ ಜೋಳದ ಬೆಳೆ ನೆಲಕ್ಕುರುಳಿದೆ. ಬೆಳೆಹಾನಿಯ ಪ್ರಾಥಮಿಕ ಸರ್ವೇಗೆ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕಳೆದ ಬಾರಿ ಅನುಭವದಿಂದ ನದಿಪಾತ್ರದ ಗ್ರಾಮಗಳಾದ ಕೂಡಲ, ನಾಗನೂರು, ಕುಣಿಮೆಳ್ಳಿಹಳ್ಳಿ, ತೆವರಮೆಳ್ಳಿಹಳ್ಳಿ, ಹಲಸೂರ, ಮೆಳ್ಳಾಗಟ್ಟಿ ಇತರೆ ಗ್ರಾಮಗಳ ಜನರ ರಕ್ಷಣೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಪೂರಕ ವ್ಯವಸ್ಥೆಗೆ ಸೂಚಿಸಲಾಗಿದೆ ಎಂದರು.
ಕಳೆದ ಭಾರಿ ಕೂಡಲ ಮಠದಲ್ಲಿ ನೀರು ನುಗ್ಗಿತ್ತು. ಹಾಗಾಗಿ ಸಾರ್ವಜನಿಕರ ರಕ್ಷಣೆಗೆ ಪೂರ್ವಭಾವಿ ವ್ಯವಸ್ಥೆ ಕೈಗೊಳ್ಳಲಾಗುವುದು ಹಾಗೂ ಇಲ್ಲಿಗೆ ಒಂದು ಎಸ್.ಡಿ.ಆರ್.ಎಫ್. ತಂಡ ಕಳುಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
Published by: Latha CG
First published: August 9, 2020, 3:04 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading