Kodagu Rain: ಕೊಡಗಿನಲ್ಲಿ ತೀವ್ರಗೊಂಡ ಮಳೆ; ನಾಳೆ ಯೆಲ್ಲೋ ಅಲರ್ಟ್ ಘೋಷಣೆ 

Kodagu Rains: ಸೋಮವಾರ ಕೊಡಗು ಜಿಲ್ಲೆಯಲ್ಲಿ 64 ಮಿ.ಮೀ.ನಿಂದ 115ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರ ಅದರ ತೀವ್ರತೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದು, 115 ಮಿ.ಮೀ.ನಿಂದ 204 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

news18-kannada
Updated:August 2, 2020, 6:27 PM IST
Kodagu Rain: ಕೊಡಗಿನಲ್ಲಿ ತೀವ್ರಗೊಂಡ ಮಳೆ; ನಾಳೆ ಯೆಲ್ಲೋ ಅಲರ್ಟ್ ಘೋಷಣೆ 
ಸಾಂದರ್ಭಿಕ ಚಿತ್ರ
  • Share this:
ಕೊಡಗು : ಇದುವರೆಗೆ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ತೀವ್ರಗೊಂಡಿದೆ. ಕಳೆದ ಎರಡು ವರ್ಷಗಳಿಂದ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಮಳೆ ಬಂತೆಂದರೆ ಜನರನ್ನು ಬೆಚ್ಚಿ ಬೀಳಿಸುತ್ತಿದೆ. ಇದುವರೆಗೆ ಸಾಧಾರಣವಾಗಿ ಬರುತ್ತಿದ್ದ ಮಳೆ ಇಂದು ಮಧ್ಯಾಹ್ನದ ಬಳಿಕ ಎಡೆಬಿಡದೆ ಸುರಿಯಲಾರಂಭಿಸಿದೆ. ತಲಕಾವೇರಿ ಬಾಗಮಂಡಲ ಬ್ರಹ್ಮಗಿರಿ ತಪ್ಪಲು, ನಾಪೋಕ್ಲು, ಮಡಿಕೇರಿ ಮಾದಾಪುರ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗದಲ್ಲಿ ಬಾರೀ ಮಳೆಯಾಗುತ್ತಿದೆ. ಮತ್ತೊಂದೆಡೆ ಸೋಮವಾರ, ಮಂಗಳವಾರ  ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಸೋಮವಾರ ಕೊಡಗು ಜಿಲ್ಲೆಯಲ್ಲಿ 64 ಮಿಲಿ ಮೀಟರ್ ನಿಂದ 115 ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲ ಮಂಗಳವಾರ ಅದರ ತೀವ್ರತೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದು, 115 ಮಿ. ಮೀಟರ್ ನಿಂದ 204 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಾಹಿತಿಯ ಆಧಾರದಲ್ಲಿ ಕೊಡಗು ಜಿಲ್ಲಾಡಳಿತ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 6ರಿಂದ ಮಂಗಳವಾರ ಬೆಳಿಗ್ಗೆ 6ರವರೆಗೆ ಯೆಲ್ಲೋ ಅಲರ್ಟ್ ಮತ್ತು ಮಂಗಳವಾರ ಬೆಳಿಗ್ಗೆ 6ರಿಂದ ಬುಧವಾರ ಬೆಳಿಗ್ಗೆ 6 ಗಂಟೆಯವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

Yellow alert in Coorg as Heavy Rain May Lashes in Kodagu on Monday and Tuesday

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಧಾರಾಕಾರ ಮಳೆ

ಈ ಸಮಯದಲ್ಲಿ ಜನರು ಎಚ್ಚರಿಕೆ ಇಂದ ಇರುವಂತೆ ಸೂಚಿಸಿದೆ. ಇನ್ನು ಜಿಲ್ಲೆಯ ಏಕೈಕ ಜಲಾಶಯ ಹಾರಂಗಿ ಬಹುತೇಕ ಭರ್ತಿಯಾಗಿದೆ. 8.5 ಟಿಎಂಸಿ ಸಾಮರ್ಥ್ಯದ ಜಲಾಶಯಕ್ಕೆ 7.74 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಭಾರೀ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಮತ್ತಷ್ಟು ನೀರು ಹರಿದು ಬರುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ ನದಿಗೆ 150 ಕ್ಯುಸೆಕ್ ನೀರನ್ನು ಹರಿಯ ಬಿಡಲಾಗುತ್ತಿದೆ. ಒಟ್ಟಿನಲ್ಲಿ ಕೊಡಗಿನಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಜನರು ಎಚ್ಚರಿಕೆ ಇಂದ ಇರಬೇಕಾಗಿದೆ.

ಬೆಂಗಳೂರಿನಲ್ಲಿಯೂ ಇಂದು ಮಧ್ಯಾಹ್ನದಿಂದ ಮಳೆ ಸುರಿಯುತ್ತಿದೆ. ಕರಾವಳಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 2 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.
Published by: Sushma Chakre
First published: August 2, 2020, 6:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading