ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ; ಕೊಡಗಿನಲ್ಲಿ ಲಘು ವಾಹನ ಸಂಚಾರ ನಿಷೇಧ

Kodagu Rain: ಕೊಡಗಿನಲ್ಲಿ ಆಗಸ್ಟ್ 31ರವರೆಗೆ ಲಘು ವಾಹನಗಳ ಓಡಾಟವನ್ನು ನಿಷೇಧಿಸಲಾಗಿದೆ. ಮಲ್ಟಿ ಆಕ್ಸಲ್ ಟ್ರಕ್, ಬುಲೆಟ್ ಟ್ಯಾಂಕರ್ಸ್ ಮತ್ತು ಕಂಟೈನರ್ ಲಾರಿ ಓಡಾಟ, ಮರಳು, ಮರದ ದಿಮ್ಮಿ ಸಾಗಣೆ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ.

Sushma Chakre | news18-kannada
Updated:August 11, 2020, 8:56 AM IST
ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ; ಕೊಡಗಿನಲ್ಲಿ ಲಘು ವಾಹನ ಸಂಚಾರ ನಿಷೇಧ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಆ. 11): ಕರ್ನಾಟಕದಲ್ಲಿ 2-3 ದಿನಗಳಿಂದ ಮಳೆಯ ಆರ್ಭಟ ಕಡಿಮೆಯಾಗಿದೆ. ಆದರೆ, ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಆ. 13ರವರೆಗೂ ರೆಡ್ ಅಲರ್ಟ್​ ಘೋಷಿಸಲಾಗಿದೆ. 

ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಂಗಳೂರು, ಕಾರವಾರ ಸಮುದ್ರದಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದ್ದು, ಅಕ್ಕಪಕ್ಕದ ಗ್ರಾಮಗಳ ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಆ.11ರಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ ಹಾಗೂ ಆ.12 ಮತ್ತು 13ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ಉತ್ತರಾಖಂಡ, ಹಿಮಾಚಲ ಪ್ರದೇಶ, ಪಂಜಾ್, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶದಲ್ಲೂ ಮಳೆ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 10 ವರ್ಷದಲ್ಲಿ 40 ಸಾವಿರ ಎಕರೆ ಕಾನು ಅರಣ್ಯ ರಕ್ಷಣೆ : ಅನಂತ ಹೆಗಡೆ ಅಶೀಸರ

ಕೊಡಗಿನಲ್ಲಿ 2 ದಿನಗಳಿಂದ ಮಳೆಯ ತೀವ್ರತೆ ಕಡಿಮೆಯಾಗಿದೆ. ಆದರೆ, ಇಂದಿನಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆಗಸ್ಟ್ 31 ರವರೆಗೆ ಕೊಡಗಿನಲ್ಲಿ ಲಘು ವಾಹನಗಳ ಓಡಾಟವನ್ನು ನಿಷೇಧಿಸಲಾಗಿದೆ. ಮಲ್ಟಿ ಆಕ್ಸಲ್ ಟ್ರಕ್, ಬುಲೆಟ್ ಟ್ಯಾಂಕರ್ಸ್ ಮತ್ತು ಕಂಟೈನರ್ ಲಾರಿ ಓಡಾಟವನ್ನು ನಿಷೇಧ ಮಾಡಲಾಗಿದೆ. ಜೊತೆಗೆ ಮರಳು, ಮರದ ದಿಮ್ಮಿ ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Kodagu Flood: ಕೊಡಗಿನ ಬ್ರಹ್ಮಗಿರಿ ದುರಂತ; ಅರ್ಚಕ ನಾರಾಯಣ ಆಚಾರ್ಯರ ಮನೆಯಲ್ಲಿ ಏನೇನಿತ್ತು ಗೊತ್ತಾ?

ಕಳೆದ ತಿಂಗಳಿನಿಂದ ಕೊಡಗಿನಲ್ಲಿ ಮಳೆ ಹೆಚ್ಚಾದ ಕಾರಣ ಆ. 10ರವರೆಗೆ ಮರಳು ಮತ್ತು ಮರದ ದಿಮ್ಮಿಗಳನ್ನು ಸಾಗಾಟ ಮಾಡುವ ಭಾರೀ ವಾಹನಗಳಿಗೆ ನಿರ್ಬಂಧ ಹೇರಲಾಗಿತ್ತು. ಇದೀಗ ಆ ನಿಷೇಧವನ್ನು ಆ. 31ರವರೆಗೆ ವಿಸ್ತರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಹಲವೆಡೆ ಮಳೆಯಿಂದ ಭಾರೀ ಹಾನಿಯಾಗಿದೆ. ಉತ್ತರ ಕನ್ನಡದಲ್ಲಿ ರಸ್ತೆಗಳು ಕುಸಿದಿವೆ. ಹಲವೆಡೆ ನದಿ ತುಂಬಿ ಹರಿದು, ಗ್ರಾಮಗಳಿಗೆ ನೀರು ನುಗ್ಗಿದೆ.
ಕರ್ನಾಟಕದಲ್ಲಿ 80 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1,600 ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್​ ಮಾಡಲಾಗಿದೆ. 28 ಮನೆಗಳು ಸಂಪೂರ್ಣ ಹಾನಿಯಾಗಿವೆ. 2,140 ಮನೆಗಳು ಬಹುತೇಕ ಹಾನಿಗೊಳಗಾಗಿವೆ. ರಾಜ್ಯದ 31,541 ಹೆಕ್ಟೇರ್ ಬೆಳೆ ಮತ್ತು 35,000 ತೋಟಗಾರಿಕಾ ಬೆಳೆಗಳು ಮಳೆಯಿಂದ ನಾಶವಾಗಿದೆ.
Published by: Sushma Chakre
First published: August 11, 2020, 8:56 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading