ಬೆಂಗಳೂರು (ಜೂನ್ 12); ಕರ್ನಾಟಕ ರಾಜ್ಯಸಭೆ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ನಿಂದ ಹೆಚ್.ಡಿ. ದೇವೇಗೌಡ ಮತ್ತು ಬಿಜೆಪಿಯ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಈ ಕುರಿತ ಹೇಳಿಕೆ ನೀಡಿದ್ದು, "ರಾಜ್ಯಸಭಾ ಚುನಾವಣೆ-2020ರಲ್ಲಿ ಕರ್ನಾಟಕದಲ್ಲಿ ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಸೇರಿದಂತೆ ಮೂರೂ ಪಕ್ಷದ ಶಾಸಕರ ಸಂಖ್ಯೆಗೆ ಅನುಗುಣವಾಗಿ ಚುನಾವಣೆ ನಡೆಸದೆಯೇ ಎಲ್ಲಾ ನಾಲ್ಕೂ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ಕುದುರೆ ವ್ಯಾಪಾರಕ್ಕಾಗಿ ಬಿಜೆಪಿ ರಾಜ್ಯಸಭಾ ಚುನಾವಣೆಯನ್ನು ವಿಳಂಬಗೊಳಿಸುತ್ತಿದೆ; ಅಶೋಕ್ ಗೆಹ್ಲೋಟ್ ಆರೋಪ
ರಾಜ್ಯಸಭೆ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ವಿಧಾನಸೌಧದಲ್ಲೇ ಇದ್ದ ಬಿಜೆಪಿ ಪಕ್ಷದ ಅಭ್ಯರ್ಥಿಗಳಾದ ಈರಣ್ಣ ಕಡಾಡಿ, ಅಶೋಕ ಗಸ್ತಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಮಲ್ಲಿಕಾರ್ಜುನ ಖರ್ಗೆ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಅಧಿಕೃತ ಘೋಷಣೆ ಪತ್ರವನ್ನ ಪಡೆದುಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ