HOME » NEWS » State » KARNATAKA RAJYA SABHA ELECTION TO BE HELD ON JUNE 19 FOR 4 RAJYA SABHA SEATS SCT

Karnataka Rajya Sabha Election: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ಕ್ಕೆ ಮತದಾನ

Rajya Sabha Election 2020: ಜೂನ್ 25ಕ್ಕೆ ಕರ್ನಾಟಕದ ಪ್ರಭಾಕರ್ ಕೋರೆ, ರಾಜೀವ್‌ ಗೌಡ, ಬಿ.ಕೆ. ಹರಿಪ್ರಸಾದ್, ಕುಪೇಂದ್ರ ರೆಡ್ಡಿ ಅವರ ರಾಜ್ಯಸಭೆ ಅವಧಿ ಅಂತ್ಯವಾಗಲಿದೆ.

news18-kannada
Updated:June 1, 2020, 10:10 PM IST
Karnataka Rajya Sabha Election: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ಕ್ಕೆ ಮತದಾನ
ಸಾಂದರ್ಭಿಕ ಚಿತ್ರ.
  • Share this:
ಬೆಂಗಳೂರು (ಜೂ. 1): ಈಗಾಗಲೇ ಕೇಂದ್ರ ಚುನಾವಣಾ ಆಯೋಗ ರಾಜ್ಯಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿದೆ. ಲಾಕ್​ಡೌನ್​ನಿಂದಾಗಿ ಮುಂದೂಡಲ್ಪಟ್ಟಿದ್ದ ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆಯೂ ನಡೆಯಲಿದೆ. ಈ ಪಟ್ಟಿಯಲ್ಲಿ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳು ಕೂಡ ಸೇರಿವೆ.

ಜೂನ್ 19ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕವೂ ಸೇರಿದೆ. ಜೂನ್ 25ಕ್ಕೆ ಕರ್ನಾಟಕದ ಪ್ರಭಾಕರ್ ಕೋರೆ, ರಾಜೀವ್‌ ಗೌಡ, ಬಿ.ಕೆ. ಹರಿಪ್ರಸಾದ್, ಕುಪೇಂದ್ರ ರೆಡ್ಡಿ ಅವರ ರಾಜ್ಯಸಭೆ ಅವಧಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಈ 4 ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಜೂನ್ 9ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂನ್ 10ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 13ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಈಗಾಗಲೇ ಮಾಜಿ ಪ್ರಧಾನಿ ದೇವೇಗೌಡರ ಹೆಸರು ರಾಜ್ಯಸಭಾ ಅಖಾಡದಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ: Rajya Sabha Election: ಭಾರತದ 18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ

ಈ ಚುನಾವಣೆಗಳ ಮೇಲ್ವಿಚಾರಣೆಗೆ ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಲಿದ್ದಾರೆ ಎಂದು ಕೂಡ ಚುನಾವಣಾ ಆಯೋಗ ಘೋಷಿಸಿದೆ. ಆ ಅಧಿಕಾರಿಗಳು ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ, ಎಲ್ಲ ಸಿದ್ಧತೆಗಳನ್ನು ಮಾಡಿಸಿ, ಚುನಾವಣೆ ನಡೆಸಬೇಕಾಗುತ್ತದೆ. ಮಾರ್ಚ್​ 26ಕ್ಕೆ ಈ 18 ಸ್ಥಾನಗಳ ಚುನಾವಣೆ ನಡೆಯಬೇಕಾಗಿತ್ತು. ಆದರೆ, ಆ ವೇಳೆಗೆ ಲಾಕ್​ಡೌನ್ ಘೋಷಣೆಯಾಗಿದ್ದರಿಂದ ಚುನಾವಣೆಯನ್ನು ಮುಂದೂಡಲಾಗಿತ್ತು.
Youtube Video
First published: June 1, 2020, 10:07 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories