• Home
  • »
  • News
  • »
  • state
  • »
  • Karnataka Dams Water Level: ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ, ಹೆಚ್ಚಾಗ್ತಿದೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ

Karnataka Dams Water Level: ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ, ಹೆಚ್ಚಾಗ್ತಿದೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka Reservoir Water Level Today: ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.

ಮುಂದೆ ಓದಿ ...
  • Trending Desk
  • Last Updated :
  • Karnataka, India
  • Share this:

ಉತ್ತರ ಕರ್ನಾಟಕದ (Uttara Karnataka) ಕೆಲ ಜಿಲ್ಲೆಗಳಲ್ಲಿ ಮತ್ತೆ ಮಳೆ ಸುರಿದಿದ್ದು ಆ ಭಾಗದ ಜಲಾಶಯಗಳಿಗೆ (Dams) ಒಳ ಹರಿವು ಹಾಗೂ ಹೊರಹರಿವುಗಳಲ್ಲಿ ಅಲ್ಪ ಏರಿಳಿತಗಳಾಗಿವೆ. ಅಷ್ಟಕ್ಕೂ ಈ ಬಾರಿ ವಾಡಿಕೆಗಿಂತ ತುಸು ಹೆಚ್ಚಾಗಿಯೇ ಮಳೆಯಾಗಿದ್ದು ರಾಜ್ಯದ (State) ಹಲವು ಪ್ರಮುಖ ಜಲಾಶಯಗಳೆಲ್ಲವೂ ಸಾಕಷ್ಟು ಭರ್ತಿಯಾಗಿವೆ. ಈ ಹಿಂದೆ ಹರಿದು ಬರುತ್ತಿದ್ದ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿದ್ದು ಅದರಂತೆ ಹೊರಹರಿವಿನ ಪ್ರಮಾಣದಲ್ಲೂ ನಿಧಾನವಾಗಿ ಇಳಿಕೆಯಾಗಿರುವುದನ್ನು ಗಮನಿಸಬಹುದು. ಸದ್ಯ, ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ (Agricultural Activities) ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ. ಇನ್ನೊಂದು ವಿಶೇಷವೆಂದರೆ ಈ ಬಾರಿ ರಾಜ್ಯದ ಮುಖ್ಯ ಜಲಾಶಯಗಳಲ್ಲೊಂದಾದ ಲಿಂಗನಮಕ್ಕಿ ಸಾಕಷ್ಟು ಭರ್ತಿಯಾಗಿದೆ.


ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.


ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.


ಪ್ರಸ್ತುತ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (11-10-2022 ರಂತೆ)


ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 48.84 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 38.15 ಟಿಎಂಸಿ
ಇಂದಿನ ಒಳಹರಿವು - 14190 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4915 ಕ್ಯೂಸೆಕ್ಸ್​


ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 105.79 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು - 40483 ಕ್ಯೂಸೆಕ್ಸ್​
ಇಂದಿನ ಹೊರಹರಿವು - 40483 ಕ್ಯೂಸೆಕ್ಸ್​


ಕಬಿನಿ ಜಲಾಶಯ - Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.40 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 16.30 ಟಿಎಂಸಿ
ಇಂದಿನ ಒಳಹರಿವು - 3470 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1350 ಕ್ಯೂಸೆಕ್ಸ್​


ಆಲಮಟ್ಟಿ ಜಲಾಶಯ - Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 122.83 ಟಿಎಂಸಿ
ಇಂದಿನ ಒಳಹರಿವು- 39451 ಕ್ಯೂಸೆಕ್ಸ್​
ಇಂದಿನ ಹೊರಹರಿವು - 39451 ಕ್ಯೂಸೆಕ್ಸ್​


ಭದ್ರಾ ಜಲಾಶಯ - Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 2591 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2448 ಕ್ಯೂಸೆಕ್ಸ್​


ಘಟಪ್ರಭಾ ಜಲಾಶಯ - Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 50.84 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 51 ಟಿಎಂಸಿ
ಇಂದಿನ ಒಳಹರಿವು - 1484 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 198 ಕ್ಯೂಸೆಕ್ಸ್


ಮಲಪ್ರಭಾ ಜಲಾಶಯ - Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 37.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 37.66 ಟಿಎಂಸಿ
ಇಂದಿನ ಒಳಹರಿವು - 294 ಕ್ಯೂಸೆಕ್ಸ್​
ಇಂದಿನ ಹೊರಹರಿವು - 294 ಕ್ಯೂಸೆಕ್ಸ್​


ಹೇಮಾವತಿ ಜಲಾಶಯ - Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 36.33 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 28.18 ಟಿಎಂಸಿ
ಇಂದಿನ ಒಳಹರಿವು -2664 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 2607 ಕ್ಯೂಸೆಕ್ಸ್​


ವರಾಹಿ ಜಲಾಶಯ - Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 22.92 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 19.33 ಟಿಎಂಸಿ
ಇಂದಿನ ಒಳಹರಿವು - 177 ಕ್ಯೂಸೆಕ್ಸ್​
ಇಂದಿನ ಹೊರಹರಿವು - 741 ಕ್ಯೂಸೆಕ್ಸ್​


ಇದನ್ನೂ ಓದಿ: ಕನ್ನಡದಲ್ಲಿ ಮಾತಾಡಿ ಪಾಸ್ ಆದ ರೈಲ್ವೆ ಸಚಿವರು; ಧಾರವಾಡ ಪೇಡೆ ಸಿಗುತ್ತೆ ಅಂತ ಅಶ್ವಿನಿ ವೈಷ್ಣವ್ ಖುಷಿ


ಹಾರಂಗಿ ಜಲಾಶಯ - Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 6.59 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.20 ಟಿಎಂಸಿ
ಇಂದಿನ ಒಳಹರಿವು - 1199 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1137 ಕ್ಯೂಸೆಕ್ಸ್​​


ಲಿಂಗನಮಕ್ಕಿ ಜಲಾಶಯ - Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 137.19 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 141.6 ಟಿಎಂಸಿ
ಇಂದಿನ ಒಳಹರಿವು - 4185 ಕ್ಯೂಸೆಕ್ಸ್​
ಇಂದಿನ ಹೊರಹರಿವು - 7522 ಕ್ಯೂಸೆಕ್ಸ್


ಸೂಪಾ ಜಲಾಶಯ - Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 103.94 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 117 ಟಿಎಂಸಿ
ಇಂದಿನ ಒಳಹರಿವು - 1693 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2533 ಕ್ಯೂಸೆಕ್ಸ್​


ಇದನ್ನೂ ಓದಿ: ರೈಲ್ವೆ ಸಚಿವರಿಗೆ ಸಿಕ್ತು ಧಾರವಾಡ ಪೇಡ, ಅರೆಬೆತ್ತಲಾದ ಖ್ಯಾತ ನಟಿ, ಚಿನ್ನದ ದರ; ಬೆಳಗಿನ ಟಾಪ್ ನ್ಯೂಸ್​


ನಾರಾಯಣಪುರ ಜಲಾಶಯ - Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.60 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 32.93 ಟಿಎಂಸಿ
ಇಂದಿನ ಒಳಹರಿವು - 49469 ಕ್ಯೂಸೆಕ್ಸ್​
ಇಂದಿನ ಹೊರಹರಿವು - 51636 ಕ್ಯೂಸೆಕ್ಸ್

Published by:Sandhya M
First published: