Karnataka Dams Water Level: ಕೃಷ್ಣೆ, ಭೀಮೆಗೆ ಹರಿದು ಬರುತ್ತಿದೆ ಲಕ್ಷ ಲಕ್ಷ ಕ್ಯೂಸೆಕ್ ನೀರು - ರಾಜ್ಯದ ಪ್ರಮುಖ ಜಲಾಶಯಗಳ ಮಟ್ಟ ಇಂತಿದೆ

Karnataka Reservoir Water Level Today: ಈಗ ಕಳೆದ ಕೆಲ ದಿನಗಳಿಂದ ಮತ್ತೆ ಮಳೆ ಅಲ್ಲಲ್ಲಿ ಜಾಸ್ತಿಯಾಗುತ್ತಿರುವ ಸುದ್ದಿಗಳು ವರದಿಯಾಗುತ್ತಿವೆ. ಹವಾಮಾನ ಇಲಾಖೆಯ ಪ್ರಕಾರ, ಇನ್ನೂ ಸ್ವಲ್ಪ ಸಮಯ ಮಳೆಯಾಗುವ ಸಾಧ್ಯತೆಯಿದ್ದು ಮತ್ತೆ ಆಯಕಟ್ಟಿನ ಪ್ರದೇಶಗಳಲ್ಲಿ ನೀರಿನ ಹರಿವು ಏರುವ ಸಾಧ್ಯತೆಯನ್ನು ತಳ್ಳಿ ಹಾಕಲಾಗದು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಉತ್ತರ ಕರ್ನಾಟಕದ (North Karnataka) ಕೆಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಕೆಲವೆಡೆ ಕಳೆದ ಕೆಲ ದಿನಗಳಿಂದ ಮತ್ತೆ ಮಳೆ (Heavy Rainfall) ಸುರಿಯಲಾರಂಭಿಸಿದೆ, ಪರಿಣಾಮ ಕೆಲ ಜಲಾಶಯಗಳಲ್ಲಿ ಒಳ ಹರಿವಿನ ಪ್ರಮಾಣ ನಿಧಾನವಾಗಿ ಏರುತ್ತಿದೆ. ಆದಾಗ್ಯೂ ರಾಜ್ಯದ ಇತರೆ ಜಲಾಶಯಗಳಿಗೆ (Dams) ಒಳಹರಿವು ನಿಧಾನವಾಗಿ ಕಡಿಮೆಯಾಗುತ್ತಿದೆ. ಈ ಬಾರಿ ರಾಜ್ಯದಲ್ಲಿ ಮಳೆ ಸಾಕಷ್ಟು ಸುರಿದಿದ್ದು ಪ್ರಮುಖ ಜಲಾಶಯಗಳಲ್ಲಿ ನೀರು ಸಮೃದ್ಧವಾಗಿ ಸಂಗ್ರಹಣೆಗೊಂಡಿದೆ. ಕೆಲ ದಿನಗಳ ಹಿಂದೆ ಕಡಿಮೆಯಾಗಿದ್ದ ಮಳೆ ಮತ್ತೆ ಕೆಲ ದಿನಗಳಿಂದ ರಾಜ್ಯದ ಅಲ್ಲಲ್ಲಿ ಸುರಿಯುತ್ತಿದೆ. ಹಿಂದೆ ಮಳೆಯ ಆರ್ಭಟ ಸಾಕಷ್ಟಿದ್ದ ಕಾರಣ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿತ್ತು.

ಸದ್ಯ, ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ. ಇನ್ನೊಂದು ವಿಶೇಷವೆಂದರೆ ಈ ಬಾರಿ ರಾಜ್ಯದ ಮುಖ್ಯ ಜಲಾಶಯಗಳಲ್ಲೊಂದಾದ ಲಿಂಗನಮಕ್ಕಿ ಸಾಕಷ್ಟು ಭರ್ತಿಯಾಗಿದೆ.

ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿಯೇ ಕಂಡುಬಂದಿದೆ. ಕಳೆದ ಹತ್ತು ದಿನಗಳಲ್ಲಿ ಉತ್ತರ ಭಾಗವೂ ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸುರಿದಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ. ಇದರಿಂದ ಕೆಲ ಪ್ರದೇಶಗಳಲ್ಲಿ ಭೂಮಿ ಊಳಿ ಅನ್ನ ಬೆಳೆಯುವ ರೈತನ ಮೊಗದಲ್ಲಿ ನೆಮ್ಮದಿಯ ನಗು ಬಂದಿದ್ದರೆ ಕೆಲವೆಡೆ ಪ್ರವಾಹ ಉಂಟಾಗಿ ಕೃಷಿ ಭೂಮಿ ಜಲಾವೃತವಾಗಿ ಬೆಳೆ ನಾಶವಾಗಿದ್ದು ಹಲವು ರೈತರು ಕಂಗಾಲಾಗಿದ್ದು ಸಹ ಸುಳ್ಳಲ್ಲ.

ಈಗ ಕಳೆದ ಕೆಲ ದಿನಗಳಿಂದ ಮತ್ತೆ ಮಳೆ ಅಲ್ಲಲ್ಲಿ ಜಾಸ್ತಿಯಾಗುತ್ತಿರುವ ಸುದ್ದಿಗಳು ವರದಿಯಾಗುತ್ತಿವೆ. ಹವಾಮಾನ ಇಲಾಖೆಯ ಪ್ರಕಾರ, ಇನ್ನೂ ಸ್ವಲ್ಪ ಸಮಯ ಮಳೆಯಾಗುವ ಸಾಧ್ಯತೆಯಿದ್ದು ಮತ್ತೆ ಆಯಕಟ್ಟಿನ ಪ್ರದೇಶಗಳಲ್ಲಿ ನೀರಿನ ಹರಿವು ಏರುವ ಸಾಧ್ಯತೆಯನ್ನು ತಳ್ಳಿ ಹಾಕಲಾಗದು. ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.

ಪ್ರಸ್ತುತ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (14-09-2022 ರಂತೆ)

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 49.20 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 38.71 ಟಿಎಂಸಿ
ಇಂದಿನ ಒಳಹರಿವು - 30379 ಕ್ಯೂಸೆಕ್ಸ್​
ಇಂದಿನ ಹೊರಹರಿವು - 30491 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 104.46 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 100.24 ಟಿಎಂಸಿ
ಇಂದಿನ ಒಳಹರಿವು - 51544 ಕ್ಯೂಸೆಕ್ಸ್​
ಇಂದಿನ ಹೊರಹರಿವು - 46897 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.87 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 19.24 ಟಿಎಂಸಿ
ಇಂದಿನ ಒಳಹರಿವು - 10665 ಕ್ಯೂಸೆಕ್ಸ್​
ಇಂದಿನ ಹೊರಹರಿವು - 130550 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 120.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 122.48 ಟಿಎಂಸಿ
ಇಂದಿನ ಒಳಹರಿವು- 119085 ಕ್ಯೂಸೆಕ್ಸ್​
ಇಂದಿನ ಹೊರಹರಿವು - 136909 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.38 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 70.93 ಟಿಎಂಸಿ
ಇಂದಿನ ಒಳಹರಿವು- 10732 ಕ್ಯೂಸೆಕ್ಸ್​
ಇಂದಿನ ಹೊರಹರಿವು - 14377 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 50.76 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 51 ಟಿಎಂಸಿ
ಇಂದಿನ ಒಳಹರಿವು - 27464 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 28750 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 37.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 37.73 ಟಿಎಂಸಿ
ಇಂದಿನ ಒಳಹರಿವು - 13294 ಕ್ಯೂಸೆಕ್ಸ್​
ಇಂದಿನ ಹೊರಹರಿವು - 13294 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 36.91 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 31.86 ಟಿಎಂಸಿ
ಇಂದಿನ ಒಳಹರಿವು - 11765 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 11705 ಕ್ಯೂಸೆಕ್ಸ್​

ಇದನ್ನೂ ಓದಿ: ಪಶ್ಚಿಮ ಘಟ್ಟಗಳಲ್ಲಿ ನಿಲ್ಲದ ಮಳೆ, ಕೊಯ್ನಾ ಡ್ಯಾಂ ಭರ್ತಿ, ಮೂರು ಜಿಲ್ಲೆಗಳಿಗೆ ಪ್ರವಾಹದ ಆತಂಕ

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 22.84 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 19.09 ಟಿಎಂಸಿ
ಇಂದಿನ ಒಳಹರಿವು - 2629 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.17 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.37 ಟಿಎಂಸಿ
ಇಂದಿನ ಒಳಹರಿವು - 2477 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 142.75 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 139.3 ಟಿಎಂಸಿ
ಇಂದಿನ ಒಳಹರಿವು - 18724 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3579 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 100.85 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 114 ಟಿಎಂಸಿ
ಇಂದಿನ ಒಳಹರಿವು - 18492 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​

ಇದನ್ನೂ ಓದಿ: ಉಪಸಭಾಪತಿ ಅನಂದ್ ಮಾಮನಿ ಆರೋಗ್ಯ ಸ್ಥಿತಿ ಗಂಭೀರ

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 29.70 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 32.09 ಟಿಎಂಸಿ
ಇಂದಿನ ಒಳಹರಿವು - 150182 ಕ್ಯೂಸೆಕ್ಸ್​
ಇಂದಿನ ಹೊರಹರಿವು - 152161 ಕ್ಯೂಸೆಕ್ಸ್
Published by:Sandhya M
First published: