• Home
  • »
  • News
  • »
  • state
  • »
  • Karnataka Dams Water Level: ಹಂತ ಹಂತವಾಗಿ ಏರುತ್ತಿದೆ ನದಿಗಳ ಒಳ ಹರಿವು, ಇಂದಿನ ಜಲಾಶಯಗಳ ನೀರಿನ ಮಟ್ಟ ಇಂತಿದೆ

Karnataka Dams Water Level: ಹಂತ ಹಂತವಾಗಿ ಏರುತ್ತಿದೆ ನದಿಗಳ ಒಳ ಹರಿವು, ಇಂದಿನ ಜಲಾಶಯಗಳ ನೀರಿನ ಮಟ್ಟ ಇಂತಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka reservoir Water Level Today: ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿಯೇ ಕಂಡುಬಂದಿದೆ. ಕಳೆದ ಹತ್ತು ದಿನಗಳಲ್ಲಿ ಉತ್ತರ ಭಾಗವೂ ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸುರಿದಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.

ಮುಂದೆ ಓದಿ ...
  • Share this:

ರಾಜ್ಯದಲ್ಲಿ (State) ಕಳೆದ ಕೆಲವು ದಿನಗಳ ಹಿಂದೆ ಇದ್ದ ವರುಣನ (Rain) ಆರ್ಭಟ ಈಗ ಎಲ್ಲೆಡೆ ಬಹುತೇಕ ಕಡಿಮೆಯಾಗಿದೆ. ಈ ಬಾರಿ ವಾಡಿಕೆಗಿಂತ ತುಸು ಹೆಚ್ಚಾಗಿಯೇ ಮಳೆಯಾಗಿದ್ದು ರಾಜ್ಯದ ಹಲವು ಪ್ರಮುಖ ಜಲಾಶಯಗಳೆಲ್ಲವೂ (Dams) ಬಹುತೇಕ ಭರ್ತಿಯಾಗಿದೆ. ಈ ಹಿಂದೆ ಹರಿದು ಬರುತ್ತಿದ್ದ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿದ್ದು ಅದರಂತೆ ಹೊರಹರಿವಿನ ಪ್ರಮಾಣದಲ್ಲೂ ನಿಧಾನವಾಗಿ ಇಳಿಕೆಯಾಗಿರುವುದನ್ನು ಗಮನಿಸಬಹುದು. ಸದ್ಯ, ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ (Agricultural Activities)  ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ. ಇನ್ನೊಂದು ವಿಶೇಷವೆಂದರೆ ಈ ಬಾರಿ ರಾಜ್ಯದ ಮುಖ್ಯ ಜಲಾಶಯಗಳಲ್ಲೊಂದಾದ ಲಿಂಗನಮಕ್ಕಿ ಸಾಕಷ್ಟು ಭರ್ತಿಯಾಗಿದೆ.


ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.


ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿಯೇ ಕಂಡುಬಂದಿದೆ. ಕಳೆದ ಹತ್ತು ದಿನಗಳಲ್ಲಿ ಉತ್ತರ ಭಾಗವೂ ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸುರಿದಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ. ಇದರಿಂದ ಕೆಲ ಪ್ರದೇಶಗಳಲ್ಲಿ ಭೂಮಿ ಊಳಿ ಅನ್ನ ಬೆಳೆಯುವ ರೈತನ ಮೊಗದಲ್ಲಿ ನೆಮ್ಮದಿಯ ನಗು ಬಂದಿದ್ದರೆ ಕೆಲವೆಡೆ ಪ್ರವಾಹ ಉಂಟಾಗಿ ಕೃಷಿ ಭೂಮಿ ಜಲಾವೃತವಾಗಿ ಬೆಳೆ ನಾಶವಾಗಿದ್ದು ಹಲವು ರೈತರು ಕಂಗಾಲಾಗಿದ್ದು ಸಹ ಸುಳ್ಳಲ್ಲ.


ಈಗ ಕಳೆದ ಕೆಲ ದಿನಗಳಿಂದ ಮತ್ತೆ ಮಳೆ ಅಲ್ಲಲ್ಲಿ ಜಾಸ್ತಿಯಾಗುತ್ತಿರುವ ಸುದ್ದಿಗಳು ವರದಿಯಾಗುತ್ತಿವೆ. ಹವಾಮಾನ ಇಲಾಖೆಯ ಪ್ರಕಾರ, ಇನ್ನೂ ಸ್ವಲ್ಪ ಸಮಯ ಮಳೆಯಾಗುವ ಸಾಧ್ಯತೆಯಿದ್ದು ಮತ್ತೆ ಆಯಕಟ್ಟಿನ ಪ್ರದೇಶಗಳಲ್ಲಿ ನೀರಿನ ಹರಿವು ಏರುವ ಸಾಧ್ಯತೆಯನ್ನು ತಳ್ಳಿ ಹಾಕಲಾಗದು. ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.


ಪ್ರಸ್ತುತ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (28-09-2022 ರಂತೆ)


ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 48.14 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 35.06 ಟಿಎಂಸಿ
ಇಂದಿನ ಒಳಹರಿವು - 6302 ಕ್ಯೂಸೆಕ್ಸ್​
ಇಂದಿನ ಹೊರಹರಿವು - 7046 ಕ್ಯೂಸೆಕ್ಸ್​


ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 105.78 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 100.09 ಟಿಎಂಸಿ
ಇಂದಿನ ಒಳಹರಿವು - 9668 ಕ್ಯೂಸೆಕ್ಸ್​
ಇಂದಿನ ಹೊರಹರಿವು - 9668 ಕ್ಯೂಸೆಕ್ಸ್​


ಕಬಿನಿ ಜಲಾಶಯ - Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.69 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 17.64 ಟಿಎಂಸಿ
ಇಂದಿನ ಒಳಹರಿವು - 874 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1550 ಕ್ಯೂಸೆಕ್ಸ್​


ಆಲಮಟ್ಟಿ ಜಲಾಶಯ - Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 122.83 ಟಿಎಂಸಿ
ಇಂದಿನ ಒಳಹರಿವು- 9136 ಕ್ಯೂಸೆಕ್ಸ್​
ಇಂದಿನ ಹೊರಹರಿವು - 9136 ಕ್ಯೂಸೆಕ್ಸ್​


ಭದ್ರಾ ಜಲಾಶಯ - Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.17 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 70.25 ಟಿಎಂಸಿ
ಇಂದಿನ ಒಳಹರಿವು- 3200 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3200 ಕ್ಯೂಸೆಕ್ಸ್​


ಘಟಪ್ರಭಾ ಜಲಾಶಯ - Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 51 ಟಿಎಂಸಿ
ಇಂದಿನ ಒಳಹರಿವು - 2201 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 2201 ಕ್ಯೂಸೆಕ್ಸ್


ಮಲಪ್ರಭಾ ಜಲಾಶಯ - Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 37.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 37.03 ಟಿಎಂಸಿ
ಇಂದಿನ ಒಳಹರಿವು - 819 ಕ್ಯೂಸೆಕ್ಸ್​
ಇಂದಿನ ಹೊರಹರಿವು - 819 ಕ್ಯೂಸೆಕ್ಸ್​


ಹೇಮಾವತಿ ಜಲಾಶಯ - Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 36.99 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 30.06 ಟಿಎಂಸಿ
ಇಂದಿನ ಒಳಹರಿವು -2941 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 3325 ಕ್ಯೂಸೆಕ್ಸ್​


ವರಾಹಿ ಜಲಾಶಯ - Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 23.33ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 19.57 ಟಿಎಂಸಿ
ಇಂದಿನ ಒಳಹರಿವು - 518 ಕ್ಯೂಸೆಕ್ಸ್​
ಇಂದಿನ ಹೊರಹರಿವು - 714 ಕ್ಯೂಸೆಕ್ಸ್​


ಇದನ್ನೂ ಓದಿ: ಮರ್ಮಾಂಗಕ್ಕೆ ಎಲೆಕ್ಟ್ರಿಕ್ ಶಾಕ್, ಮುಖಕ್ಕೆ ಮೂತ್ರ ಎರಚಿ ಕಿರುಕುಳ ನೀಡಿದ್ರಾ ಪೊಲೀಸರು?


ಹಾರಂಗಿ ಜಲಾಶಯ - Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.77 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.06 ಟಿಎಂಸಿ
ಇಂದಿನ ಒಳಹರಿವು - 544 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1450 ಕ್ಯೂಸೆಕ್ಸ್​​


ಲಿಂಗನಮಕ್ಕಿ ಜಲಾಶಯ - Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 141.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 140.9 ಟಿಎಂಸಿ
ಇಂದಿನ ಒಳಹರಿವು - 1819 ಕ್ಯೂಸೆಕ್ಸ್​
ಇಂದಿನ ಹೊರಹರಿವು - 9144 ಕ್ಯೂಸೆಕ್ಸ್


ಸೂಪಾ ಜಲಾಶಯ - Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 105.18 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 115.9 ಟಿಎಂಸಿ
ಇಂದಿನ ಒಳಹರಿವು - 1714 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3833 ಕ್ಯೂಸೆಕ್ಸ್​


ಇದನ್ನೂ ಓದಿ: ವಾಹನದ ಟ್ಯಾಂಕ್ ಫುಲ್ ಮಾಡಿಸೋ ಮುನ್ನ ಇಂದಿನ ತೈಲ ದರ ನೋಡಿ


ನಾರಾಯಣಪುರ ಜಲಾಶಯ - Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 32.98 ಟಿಎಂಸಿ
ಇಂದಿನ ಒಳಹರಿವು - 10486 ಕ್ಯೂಸೆಕ್ಸ್​
ಇಂದಿನ ಹೊರಹರಿವು - 9410 ಕ್ಯೂಸೆಕ್ಸ್

Published by:Sandhya M
First published: