Karnataka Dams Water Level: ಭರ್ತಿಯಾದ ಹೇಮಾವತಿ ಜಲಾಶಯ - ವಿವಿಧ ಡ್ಯಾಂಗಳ ನೀರಿನ ಮಟ್ಟ ಹೀಗಿದೆ

Karnataka Reservoir Water Level: ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿದ್ದು ಈಗಾಗಲೇ ಕೆಲವು ಜಲಾಶಯಗಳು ಭರ್ತಿಯಾಗಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಜಲ (Water) ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ (Agriculture) ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸಹ ಸಂಪೂರ್ಣ ಭರ್ತಿಯಾಗಿದ್ದು ಮಂಡ್ಯ ಭಾಗದ ರೈತಾಪಿ ವರ್ಗದವರಲ್ಲಿ ಸಂತಸ ಮನೆ ಮಾಡಿದೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಸಾಕಷ್ಟು ಮಳೆ ಬಿದ್ದಿದ್ದು ಈಗಲೂ ರಾಜ್ಯದ ಕೆಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ. ಇದರಿಂದ ಭೂಮಿ ಊಳಿ ಅನ್ನ ಬೆಳೆಯುವ ರೈತನ ಮೊಗದಲ್ಲಿ ನೆಮ್ಮದಿಯ ನಗು ಬಂದಿದೆ. ಕೆಲ ದಿನಗಳಿಂದ ಮಳೆ ಕಡಿಮೆಯಾದಂತೆ ತೋರಿದ್ದರೂ ಕಳೆದ ಎರಡು ದಿನಗಳಲ್ಲಿ ರಾಜ್ಯದ ಹಲವೆಡೆ ಮತ್ತೆ ಮಳೆ ಸುರಿದಿದ್ದು ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರುವ ಪಥದಲ್ಲಿದೆ. ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿದ್ದು ಈಗಾಗಲೇ ಕೆಲವು ಜಲಾಶಯಗಳು ಭರ್ತಿಯಾಗಿವೆ.

ಇಂದು ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (01-08-2022 ರಂತೆ)

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 49.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 36.97 ಟಿಎಂಸಿ
ಇಂದಿನ ಒಳಹರಿವು - 19783 ಕ್ಯೂಸೆಕ್ಸ್​
ಇಂದಿನ ಹೊರಹರಿವು - 19590 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 103.62 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 97.20 ಟಿಎಂಸಿ
ಇಂದಿನ ಒಳಹರಿವು - 41091 ಕ್ಯೂಸೆಕ್ಸ್​
ಇಂದಿನ ಹೊರಹರಿವು - 31797 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 19.15 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 16.91 ಟಿಎಂಸಿ
ಇಂದಿನ ಒಳಹರಿವು - 7072 ಕ್ಯೂಸೆಕ್ಸ್​
ಇಂದಿನ ಹೊರಹರಿವು - 6500 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 106.94 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 84.34 ಟಿಎಂಸಿ
ಇಂದಿನ ಒಳಹರಿವು- 27328 ಕ್ಯೂಸೆಕ್ಸ್​
ಇಂದಿನ ಹೊರಹರಿವು - 18451 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.32 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 67.04 ಟಿಎಂಸಿ
ಇಂದಿನ ಒಳಹರಿವು- 5621 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4718 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 38.25 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 49.76 ಟಿಎಂಸಿ
ಇಂದಿನ ಒಳಹರಿವು - 3623 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 173 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 25.46 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 31.69 ಟಿಎಂಸಿ
ಇಂದಿನ ಒಳಹರಿವು - 1609 ಕ್ಯೂಸೆಕ್ಸ್​
ಇಂದಿನ ಹೊರಹರಿವು - 394 ಕ್ಯೂಸೆಕ್ಸ್​

ಇದನ್ನೂ ಓದಿ: ಅಧಿಕಾರದ ರುಚಿ ನೋಡಿರೋ ಅಂಕಲ್​ಗೆ ರಾಜಕೀಯ ಕಂಟಿನ್ಯೂ ಮಾಡುವ ಆಸಕ್ತಿ ಇದೆ; Ashwath Narayan

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 37.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 34.50 ಟಿಎಂಸಿ
ಇಂದಿನ ಒಳಹರಿವು - 4787 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 4725 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 14.99 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 12.26 ಟಿಎಂಸಿ
ಇಂದಿನ ಒಳಹರಿವು - 900 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.17 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 7.30 ಟಿಎಂಸಿ
ಇಂದಿನ ಒಳಹರಿವು - 2795 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1707 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 92.57 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 116 ಟಿಎಂಸಿ
ಇಂದಿನ ಒಳಹರಿವು - 5632 ಕ್ಯೂಸೆಕ್ಸ್​
ಇಂದಿನ ಹೊರಹರಿವು - 5444 ಕ್ಯೂಸೆಕ್ಸ್

ಇದನ್ನೂ ಓದಿ: ಭಾರೀ ಮಳೆಗೆ ಎರಡು ಜೀವ ಬಲಿ, ಉಗ್ರ ಅಲ್-ಜವಾಹಿರಿ ಹತ್ಯೆ, ಇಳಿಕೆಯಾದ ಚಿನ್ನ; ಬೆಳಗಿನ ಟಾಪ್ ನ್ಯೂಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 67.06 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 98.4 ಟಿಎಂಸಿ
ಇಂದಿನ ಒಳಹರಿವು - 2425 ಕ್ಯೂಸೆಕ್ಸ್​
ಇಂದಿನ ಹೊರಹರಿವು - 268 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 31.77 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 22.45 ಟಿಎಂಸಿ
ಇಂದಿನ ಒಳಹರಿವು - 21740 ಕ್ಯೂಸೆಕ್ಸ್​
ಇಂದಿನ ಹೊರಹರಿವು - 18058 ಕ್ಯೂಸೆಕ್ಸ್
Published by:Sandhya M
First published: