Karnataka Dams Water Level: ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ, ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಕೆಲ ದಿನಗಳಿಂದ ಮಳೆ ಕಡಿಮೆಯಾಗುತ್ತಿದ್ದು ಕೆಲವು ಸ್ಥಳಗಳಲ್ಲಿ ಪ್ರವಾಹದಿಂದಾಗಿ ಮುಳುಗಿ ಹೋಗಿದ್ದ ಚಿಕ್ಕ ಪುಟ್ಟ ಸೇತುವೆಗಳು ಮತ್ತೆ ಕಾಣತೊಡಗಿವೆ. ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.

ಕಬಿನಿ ಜಲಾಶಯ

ಕಬಿನಿ ಜಲಾಶಯ

  • Share this:
ಈ ಬಾರಿ ರಾಜ್ಯದಲ್ಲಿ ಮಳೆ (Rainfall) ಸಾಕಷ್ಟು ಸುರಿದಿದ್ದು ಪ್ರಮುಖ ಜಲಾಶಯಗಳಲ್ಲಿ (Dams) ನೀರು ಸಮೃದ್ಧವಾಗಿ ಸಂಗ್ರಹಣೆಗೊಂಡಿದೆ. ಅಲ್ಲದೆ, ಕೆಲ ಜಲಾಶಯಗಳಿಂದ ಹೆಚ್ಚುವರಿಯಾದ ನೀರನ್ನು ಈಗ ಹೊರಬಿಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಮಳೆಯ ಆರ್ಭಟ ಸಾಕಷ್ಟಿದ್ದ ಕಾರಣ ಕೆಲ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿತ್ತು. ಆದರೆ, ಈಗ ಎಲ್ಲೆಡೆ ಮಳೆ ಕಡಿಮೆಯಾಗಿದ್ದು ಅದರಂತೆ ಒಳಹರಿವಿನ ಪ್ರಮಾಣವೂ ಕಡಿಮೆಯಾಗಿದೆ. ಆದಾಗ್ಯೂ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ (Agricultural Activities) ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ.

ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿಯೇ ಕಂಡುಬಂದಿದೆ. ಕಳೆದ ಹತ್ತು ದಿನಗಳಲ್ಲಿ ಉತ್ತರ ಭಾಗವೂ ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸುರಿದಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಕೆಲ ಪ್ರದೇಶಗಳಲ್ಲಿ ಭೂಮಿ ಊಳಿ ಅನ್ನ ಬೆಳೆಯುವ ರೈತನ ಮೊಗದಲ್ಲಿ ನೆಮ್ಮದಿಯ ನಗು ಬಂದಿದ್ದರೆ ಕೆಲವೆಡೆ ಪ್ರವಾಹ ಉಂಟಾಗಿ ಕೃಷಿ ಭೂಮಿ ಜಲಾವೃತವಾಗಿ ಬೆಳೆ ನಾಶವಾಗಿದ್ದು ಹಲವು ರೈತರು ಕಂಗಾಲಾಗಿದ್ದು ಸಹ ಸುಳ್ಳಲ್ಲ. ಕೆಲ ದಿನಗಳಿಂದ ಮಳೆ ಕಡಿಮೆಯಾಗುತ್ತಿದ್ದು ಕೆಲವು ಸ್ಥಳಗಳಲ್ಲಿ ಪ್ರವಾಹದಿಂದಾಗಿ ಮುಳುಗಿ ಹೋಗಿದ್ದ ಚಿಕ್ಕ ಪುಟ್ಟ ಸೇತುವೆಗಳು ಮತ್ತೆ ಕಾಣತೊಡಗಿವೆ. ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.

ಇಂದು ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ.
ಕೆಆರ್ಎಸ್ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ – 48.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 43.27 ಟಿಎಂಸಿ
ಇಂದಿನ ಒಳಹರಿವು –7054 ಕ್ಯೂಸೆಕ್ಸ್
ಇಂದಿನ ಹೊರಹರಿವು -4922 ಕ್ಯೂಸೆಕ್ಸ್

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ – 105.79 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು – 30497 ಕ್ಯೂಸೆಕ್ಸ್
ಇಂದಿನ ಹೊರಹರಿವು – 22281 ಕ್ಯೂಸೆಕ್ಸ್

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ – 19.15 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 18.98 ಟಿಎಂಸಿ
ಇಂದಿನ ಒಳಹರಿವು – 4,771 ಕ್ಯೂಸೆಕ್ಸ್
ಇಂದಿನ ಹೊರಹರಿವು – 4,350 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 121.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
ಇಂದಿನ ಒಳಹರಿವು- 66758 ಕ್ಯೂಸೆಕ್ಸ್
ಇಂದಿನ ಹೊರಹರಿವು – 56596 ಕ್ಯೂಸೆಕ್ಸ್

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 70.28 ಟಿಎಂಸಿ
ಇಂದಿನ ಒಳಹರಿವು- 7553 ಕ್ಯೂಸೆಕ್ಸ್
ಇಂದಿನ ಹೊರಹರಿವು – 5,145 ಕ್ಯೂಸೆಕ್ಸ್

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 50.93 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು – 6924 ಕ್ಯೂಸೆಕ್ಸ್
ಇಂದಿನ ಹೊರಹರಿವು – 4,990 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ – 35.39 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 35.66 ಟಿಎಂಸಿ
ಇಂದಿನ ಒಳಹರಿವು – 2556 ಕ್ಯೂಸೆಕ್ಸ್
ಇಂದಿನ ಹೊರಹರಿವು – 944 ಕ್ಯೂಸೆಕ್ಸ್

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 37.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 34.47 ಟಿಎಂಸಿ
ಇಂದಿನ ಒಳಹರಿವು – 5,712 ಕ್ಯೂಸೆಕ್ಸ್
ಇಂದಿನ ಹೊರಹರಿವು – 5,650 ಕ್ಯೂಸೆಕ್ಸ್

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 20.33 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 16.61 ಟಿಎಂಸಿ
ಇಂದಿನ ಒಳಹರಿವು – 2523 ಕ್ಯೂಸೆಕ್ಸ್
ಇಂದಿನ ಹೊರಹರಿವು – 2,284 ಕ್ಯೂಸೆಕ್ಸ್

ಇದನ್ನೂ ಓದಿ: ಚಿರತೆ ಸೆರೆಗಾಗಿ ಬರುತ್ತಿವೆ ಆನೆಗಳು; 120 ಅರಣ್ಯ ಇಲಾಖೆ, 80 ಪೊಲೀಸ್ ಸಿಬ್ಬಂದಿ ನಿಯೋಜನೆ

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.09 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.06 ಟಿಎಂಸಿ
ಇಂದಿನ ಒಳಹರಿವು – 3059 ಕ್ಯೂಸೆಕ್ಸ್
ಇಂದಿನ ಹೊರಹರಿವು – 1300 ಕ್ಯೂಸೆಕ್ಸ್

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 133.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 131.3 ಟಿಎಂಸಿ
ಇಂದಿನ ಒಳಹರಿವು – 12262 ಕ್ಯೂಸೆಕ್ಸ್
ಇಂದಿನ ಹೊರಹರಿವು – 5,155 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 88.35 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 108.1 ಟಿಎಂಸಿ
ಇಂದಿನ ಒಳಹರಿವು – 9627 ಕ್ಯೂಸೆಕ್ಸ್
ಇಂದಿನ ಹೊರಹರಿವು – 221 ಕ್ಯೂಸೆಕ್ಸ್

ಇದನ್ನೂ ಓದಿ: ಮಗುವನ್ನ ಕೊಂದ ತಾಯಿ, ರಕ್ಕಮ್ಮ ಟೆಂಪಲ್ ರನ್, ಚಿನ್ನದ ದರ ಇಳಿಕೆ; ಬೆಳಗಿನ ಟಾಪ್ ನ್ಯೂಸ್​​ಗಳು

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 31.68 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 31.68 ಟಿಎಂಸಿ
ಇಂದಿನ ಒಳಹರಿವು – 56634 ಕ್ಯೂಸೆಕ್ಸ್
ಇಂದಿನ ಹೊರಹರಿವು – 51918 ಕ್ಯೂಸೆಕ್ಸ್
Published by:Sandhya M
First published: