ವಿಜಯಪುರ: ಜ್ಞಾನಯೋಗಾಶ್ರಮದ (Jnanayogashrama) ಸಿದ್ದೇಶ್ವರ ಶ್ರೀಗಳ (Siddeshwara Swamiji) ಲಿಂಗೈಕ್ಯರಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ರಾತ್ರಿ 10:15ರ ವೇಳೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, 6:05 ನಿಮಿಷಕ್ಕೆ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕರಾಗಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿ ವಿಧಾನಗಳನ್ನು ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ವಿಜಯಪುರದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲು ತಿಳಿಸಿದ್ದಾರೆ. ನಾಳೆ ಸಂಜೆ ಅಂತಿಮ ವಿಧಿವಿಧಾನ ನಡೆಯಲಿದ್ದು, ಈ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದೇವೆ ಎಂದರು.
ನಸುಗಿನ ಜಾವ 5 ಗಂಟೆವರೆಗೂ ಆಶ್ರಮದ ಆವರಣದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಬೆಳಗ್ಗೆ 6 ರಿಂದ ಸಂಜೆ 3 ಗಂಟೆವರೆಗೂ ಸೈನಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 3 ಗಂಟೆಯಿಂದ 4 ಗಂಟೆವರೆಗೂ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ಸಂಜೆ 5 ಗಂಟೆಗೆ ಅಂತಿಮ ಕಾರ್ಯಗಳು ಆಶ್ರಮದಲ್ಲೇ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಅವರು ಆಗಮಿಸಲಿದ್ದಾರೆ. ಉಳಿದಂತೆ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದರು.
Paramapujya Sri Siddheshwara Swami Ji will be remembered for his outstanding service to society. He worked tirelessly for the betterment of others and was also respected for his scholarly zeal. In this hour of grief, my thoughts are with his countless devotees. Om Shanti. pic.twitter.com/DbWtdvROl1
— Narendra Modi (@narendramodi) January 2, 2023
2014ರಲ್ಲೇ ವಿಲ್ ಬರೆದಿದ್ದ ಶ್ರೀಗಳು
ಸಿದ್ಧೇಶ್ವರ ಸ್ವಾಮೀಜಿಗಳು ಆಪ್ತರೊಂದಿಗೆ ಚರ್ಚೆ ನಡೆಸಿ ವಿಲ್ ಬರೆದಿಟ್ಟಿದ್ದಾರೆ. ಕಾಯವನ್ನು ಮಣ್ಣು ಮಾಡುವಂತಿಲ್ಲ, ಅಗ್ನಿ ಸ್ಪರ್ಷ ಮಾಡಬೇಕು. ಚಿತಾಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ವಿಸರ್ಜಿಸಿ ಬೇಕು. ಶ್ರಾದ್ಧ ಕರ್ಮ ಕರ್ಮಗಳನ್ನು ಮಾಡುವಂತಿಲ್ಲ. ಯಾವುದೇ ರೀತಿಯ ಸ್ಮಾರಕಗಳನ್ನು ನಿರ್ಮಿಸಬೇಡಿ ಅಂತ ವಿಲ್ ನಲ್ಲಿ ತಿಳಿಸಿದ್ದಾರೆ.
ಅಂತಿಮ ಸಂದೇಶ: ಸತ್ಯವೂ ಇಲ್ಲ ಅಸತ್ಯವೂ ಇಲ್ಲ. ಸಹಜವೂ ಇಲ್ಲ ಅಸಹಜವೂ ಇಲ್ಲ. ನಾನೂ ಇಲ್ಲ, ನೀನೂ ಇಲ್ಲ. ಇಲ್ಲ ಇಲ್ಲ ಎಂಬುವುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು ಅಂತ್ಯಃ ಪ್ರಣಾಮಾಂಜಲಿಃ -ಸ್ವಾಮಿ ಸಿದ್ದೇಶ್ವರ.
ಕಳೆದ ಮೂರು ದಿನಗಳಿಂದ ಅನ್ನ ನೀರು ಸೇವಿಸಿರಲಿಲ್ಲ ಶ್ರೀಗಳು
8 ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಸಿದ್ದೇಶ್ವರ ಸ್ವಾಮೀಜಿಗಳು, ಕಳೆದ 3 ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅನ್ನ ನೀರು ಸೇವಿಸಿರಲಿಲ್ಲ. ವೈದ್ಯರ ಚಿಕಿತ್ಸೆಯೂ ಬೇಡ ಅಂತ ಹೇಳಿದ್ದರು. ಸಿದ್ದೇಶ್ವರ ಸ್ವಾಮೀಜಿಯ ಅನಾರೋಗ್ಯ ಅಂತ ಕಳೆದ ಮೂರ್ನಾಲ್ಕು ದಿನಗಳಿಂದ ಶ್ರೀಗಳ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ರು. ಬಂದವ್ರನ್ನ ಹಸಿದ ಹೊಟ್ಟೆಯಲ್ಲಿ ಕಳಿಸುವ ಮನಸ್ಸಿಲ್ಲದೇ, ಎಲ್ಲಾ ಭಕ್ತರಿಗೂ ಜ್ಞಾನಾನಂದಶ್ರಮದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಖುದ್ದು ಸುತ್ತೂರು ಸ್ವಾಮೀಜಿಗಳೇ ಮುಂದೆ ನಿಂತು ಅನ್ನದಾಸೋಹದ ಮುತುವರ್ಜಿವಹಿಸಿದ್ದರು.
ಜ್ಞಾನಯೋಗಾಶ್ರಮದಲ್ಲಿ ಭಕ್ತರ ಕಣ್ಣೀರು
ಶ್ರೀಗಳನ್ನು ನೆನೆದು ಕಾಸಿಂ ಸಾಬ್ ಎಂಬ ಭಕ್ತ ಕಣ್ಣೀರು ಹಾಕಿದ್ದಾರೆ. ಬಸವನ ಬಾಗೇವಾಡಿಯಿಂದ ಬಂದಿರೋ ಖಾಸಿಂ, ಶಿರಸ್ತೆದಾರ್ ಆಗಿ ರಿಟೈರ್ ಆಗಿದ್ದಾರೆ. ಅವ್ರಿಗೆ ಶ್ರೀಗಳು ಅಂದ್ರೆ ಅಚ್ಚುಮೆಚ್ಚು. ನಾನು ಅವರ ಪ್ರವಚನ ನಾನು ಮಿಸ್ ಮಾಡೋದೇ ಇಲ್ಲ ಎಂದು ಭಾವುಕರಾಗಿ ಹೇಳಿದ್ದರು.
ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು.
1/2 pic.twitter.com/WvNjQDmkJJ
— Basavaraj S Bommai (@BSBommai) January 2, 2023
ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜ್ಞಾನಯೋಗಾಶ್ರಮದ ಪೀಠಾಧೀಶರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ.
ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಿಬಾರದ ನಷ್ಟ.
1/2 pic.twitter.com/1epTBxets3
— Siddaramaiah (@siddaramaiah) January 2, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ