ಚಿಕ್ಕಬಳ್ಳಾಪುರ (ಡಿ.11): ಗೌರಿಬಿದನೂರು ತಾಲೂಕಿನ ಗಡಿ ಭಾಗವಾದ ರಂಗನಹಳ್ಳಿ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಕ್ಯಾಂಟರ್ ಹಾಗೂ ಆಟೋ ನಡುವೆ ಅಪಘಾತವಾಗಿ (Accident) ಮೂವರು ದುರ್ಮರಣ (3 Death) ಹೊಂದಿರುವಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೊರಟಗೆರೆಯ ನಿವಾಸಿಗಳಾದ ಮೀಲಾನಿ (25), ವೃದ್ಧೆ ಜೈರಬಿ (70) ಸ್ಥಳದಲ್ಲೇ ವೃತಪಟ್ಟಿದ್ದಾರೆ. ಆಟೋ ಚಾಲಕ (Auto Driver) ಕಲಂದರ್ ಗೌರಿಬಿದನೂರು ಆಸ್ಪತ್ರೆಯಲ್ಲಿ (Hospital) ಕೊನೆಯುಸಿರೆಳೆದಿದ್ದಾರೆ.
ಮತ್ತಿಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ
ಅಪಘಾತದಲ್ಲಿ ಮತ್ತಿಬ್ಬರು ಸಹ ಗಾಯಗೊಂಡಿದ್ದಾರೆ. ಗಾಯಾಳು 5 ವರ್ಷದ ಅರ್ಪ (5), ಅಸೀತಾ (3) ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊರಟಗೆರೆಗೆ ತೆರಳುವ ವೇಳೆ ಅಪಘಾತ
ಗೌರಿಬಿದನೂರು ತಾಲೂಕಿನ ಅಲಕಾಪುರಕ್ಕೆ ಆಗಮಿಸಿ ಕೆಲಸ ಮುಗಿಸಿಕೊಂಡು ವಾಪಸ್ ಕೊರಟಗೆರೆಗೆ ತೆರಳುವ ವೇಳೆ ಅಪಘಾತವಾಗಿದೆ. ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಗುಡಿಬಂಡೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಲಿಂಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಗದಗದಲ್ಲಿ ಅಪಘಾತ ಇಬ್ಬರು ಸಾವು
ಗದಗ ಪಟ್ಟಣದ ಹೊರವಲಯದ ಗದ್ದಿ ಹಳ್ಳದ ಬಳಿ ಬೈಕ್ ಹಾಗೂ ಮಿನಿ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ರೋಣದಿಂದ ಗದಗ ಕಡೆಗೆ ಬರುತ್ತಿದ್ದ ಮಿನಿ ಬಸ್ ಗದಗದಿಂದ ನರೇಗಲ್ ಗೆ ಹೊರಟ್ಟಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಸಂಗಮೇಶ್(27) ,ದತ್ತಪ್ಪ (30) ಮೃತ ದುರ್ದೈವಿಗಳು. ಮೃತರು ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ಗದಗ ಗ್ರಾಮೀಣ ಸಿಪಿಐ ಸಿಎನ್ ಹರಿಹರ ಭೇಟಿ ಪರಿಶೀಲನೆ ನಡೆಸಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯದಲ್ಲಿ ಭೀಕರ ಅಪಘಾತ ಇಬ್ಬರ ಸಾವು
ಸ್ವಿಫ್ಟ್ ಹಾಗೂ ಇನೋವಾ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಎ.ನಾಗತಿಹಳ್ಳಿ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಎ.ನಾಗತೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಂಡಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
KA 04 AA 4832 ನಂಬರ್ನ ಇನೋವಾ ಕಾರಿನ , TN 31 AU 0677 ನಂಬರ್ ನ ಸ್ವಿಫ್ಟ್ ಕಾರ್ ಅಪಘಾತಕ್ಕೀಡಾಗಿದೆ. ಬೆಂಗಳೂರಿನಿಂದ ಹಾಸನದ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಡಿವೈಡರ್ ದಾಟಿ ಹಾಸನದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ತಮಿಳುನಾಡಿನ ರಿಜಿಸ್ಟರ್ ನಂಬರ್ ವುಳ್ಳ ಸ್ವಿಫ್ಟ್ ಕಾರಿಗೆ ಡಿಕ್ಕಿ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಬಿಂಡಿಗನವಿಲೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.
ಇದನ್ನೂ ಓದಿ: Love Jihad Law: ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ: ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ
ಶಿವಮೊಗ್ಗದಲ್ಲಿ ಭೀಕರ ಅಪಘಾತ
ಶಿವಮೊಗ್ಗ ತಾಲ್ಲೂಕಿನ ಕಲ್ಲಾಪುರ ಬಳಿ ಭಾನುವಾರ ಬೆಳಿಗ್ಗೆ ಕಾರು–ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 3 ಸಾವನ್ನಪ್ಪಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಬಳಿ ಗೂಡ್ಸ್ ಲಾರಿ ಹಾಗೂ ಬಲೆನೋ ಕಾರು ನಡುವೆ ಡಿಕ್ಕಿ ಸಂಭವಿಸಿದೆ.
ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು
ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಕಾರು ಚಾಲನೆ ಮಾಡುತ್ತಿದ್ದ ಕಾರ್ತಿಕ್ (21), ವಿವೇಕ್ (21) ಹಾಗೂ ಮೋಹನ (21) ಎಂದು ಗುರುತಿಸಲಾಗಿದೆ. ರುದ್ರೇಶ್ ಪಾಟೀಲ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ದಾವಣಗೆರೆಯವರು. ಅಲ್ಲಿನ ಬಿಐಇಟಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಶಿವಮೊಗ್ಗಕ್ಕೆ ಬಂದವರು ವಾಪಸ್ ದಾವಣಗೆರೆಗೆ ಹೊರಟಿದ್ದರು ಎಂದು ತಿಳಿದುಬಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ