Karnataka SSLC Result 2020: ಇಂದು ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ; ವಿದ್ಯಾರ್ಥಿಗಳ ಮೊಬೈಲ್​ಗೆ ಬರಲಿದೆ ರಿಸಲ್ಟ್

KSEEB 10th result 2020 | kseeb.kar.nic.in | karresults.nic.in: ಈ ಬಾರಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಒಳ್ಳೆಯ ಫಲಿತಾಂಶವೂ ಬರಬೇಕೆಂಬುದು ನಮ್ಮೆಲ್ಲರ ಅಪೇಕ್ಷೆಯಾಗಿದೆ. ಅನುತ್ತೀರ್ಣರಾದವರು ಯಾರು ಸಹ ನಿರಾಶರಾಗುವುದು ಬೇಡ. ಜೀವನದಲ್ಲಿ ಇದೇ ಕೊನೇ ಅಲ್ಲ. ಇದೂ ಒಂದು ಭಾಗ ಅಷ್ಟೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದರು.

news18-kannada
Updated:August 10, 2020, 8:02 AM IST
Karnataka SSLC Result 2020: ಇಂದು ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ; ವಿದ್ಯಾರ್ಥಿಗಳ ಮೊಬೈಲ್​ಗೆ ಬರಲಿದೆ ರಿಸಲ್ಟ್
ಎಸ್​ಎಸ್​ಎಲ್​ಸಿ ಫಲಿತಾಂಶ
  • Share this:
ಬೆಂಗಳೂರು(ಆ.10): ಇಂದು ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್​​ಸಿ ಪರೀಕ್ಷಾ ಫಲಿತಾಂತ ಪ್ರಕಟಗೊಳ್ಳಲಿದೆ. ಈ ಬಾರಿ ವಿದ್ಯಾರ್ಥಿಗಳ ಮೊಬೈಲ್​ಗೆ ಎಸ್​​ಎಂಎಸ್​​​​ ಮೂಲಕ ಫಲಿತಾಂಶ ಬರಲಿದೆ. ಜತೆಗೆ ವೆಬ್​ಸೈಟ್​ನಲ್ಲೂ ಫಲಿತಾಂಶ ಪ್ರಕಟವಾಗಲಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪು ಗೂಡಬಾರದು ಎಂಬ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಮೊಬೈಲ್ ಗೆ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಾರಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಒಳ್ಳೆಯ ಫಲಿತಾಂಶವೂ ಬರಬೇಕೆಂಬುದು ನಮ್ಮೆಲ್ಲರ ಅಪೇಕ್ಷೆಯಾಗಿದೆ. ಅನುತ್ತೀರ್ಣರಾದವರು ಯಾರು ಸಹ ನಿರಾಶರಾಗುವುದು ಬೇಡ. ಜೀವನದಲ್ಲಿ ಇದೇ ಕೊನೇ ಅಲ್ಲ. ಇದೂ ಒಂದು ಭಾಗ ಅಷ್ಟೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದರು.

ಎಸ್​ಎಸ್​ಎಲ್​ಸಿ ಫಲಿತಾಂಶ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ; http://kseeb.kar.nic.in/

ಕೊರೋನಾ ಭೀತಿ ನಡುವೆಯೂ ಸರ್ಕಾರ ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. ಜೂನ್ 25ರಂದು 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇ.98ರಷ್ಟು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಾರೆ. ಮಾಸ್ಕ್ ಗಳನ್ನು ‌ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.‌

ಕಳೆದ ತಿಂಗಳು ರಾಜ್ಯ ಶಿಕ್ಷಣ ಸಚಿವ ಸುರೇಶ್​ ಕುಮಾರ್​​​,​ ಆಗಸ್ಟ್​​ ಮೊದಲ ವಾರದಲ್ಲಿ ಎಸ್​ಎಸ್​ಎಲ್​​ಸಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದ್ದರಿಂದ ಎಲ್ಲರೂ ಕಾಯುತ್ತಿದ್ದರು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಆಗಸ್ಟ್ 7ರೊಳಗೆ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು.
Published by: Ganesh Nachikethu
First published: August 10, 2020, 7:57 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading